Homeಅಂತರಾಷ್ಟ್ರೀಯಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

- Advertisement -
- Advertisement -

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು.

ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ ಸಂಸತ್ ಭವನದ (ಜಾತಿಯ ಸಂಸದ್) ದಕ್ಷಿಣ ಪ್ಲಾಝಾದಲ್ಲಿ ನಡೆಯಿತು.

ಬಾಂಗ್ಲಾದೇಶದ ಅಧ್ಯಕ್ಷರಾದ ಮೊಹಮ್ಮದ್ ಶಹಾಬುದ್ದೀನ್ ಅವರು ರೆಹಮಾನ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.

ತಾರಿಖ್ ರೆಹಮಾನ್ ಅವರೊಂದಿಗೆ 49 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೊಸ ಸರ್ಕಾರವು 25 ಸಂಪುಟ ಸಚಿವರು ಮತ್ತು 24 ರಾಜ್ಯ ಸಚಿವರನ್ನು ಒಳಗೊಂಡಿದೆ.

ಬಿಎನ್‌ಪಿಯ ಹಿರಿಯ ನಾಯಕ ಮಿರ್ಜಾ ಫಕ್ರುಲ್ ಇಸ್ಲಾಂ ಆಲಂಗೀರ್, ಪಕ್ಷದ ಇತರ ಪ್ರಮುಖ ನಾಯಕರಾದ ಅಮೀರ್ ಖಸ್ರು ಮಹಮೂದ್ ಚೌಧರಿ, ಸಲಾವುದ್ದೀನ್ ಅಹ್ಮದ್, ಡಾ. ಖಲೀಲುರ್ ರೆಹಮಾನ್, ಇಕ್ಬಾಲ್ ಹಸನ್ ಮಹಮೂದ್ ಟುಕು ಮತ್ತು ಹಫೀಝ್ ಉದ್ದೀನ್ ಅಹ್ಮದ್ ಬೀರ್ ವಿಕ್ರಮ್ ಸಚಿವ ಸಂಪುಟ ಸೇರಿದ್ದಾರೆ.

ಸಲಾವುದ್ದೀನ್ ಅಹ್ಮದ್ ಅವರು ನೂತನ ಗೃಹ ಸಚಿವರಾಗಿ ನೇಮಕಗೊಂಡಿದ್ದಾರೆ. ಅಮೀರ್ ಖಸ್ರು ಮಹಮೂದ್ ಚೌಧರಿ ಅವರು ನೂತನ ಹಣಕಾಸು ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಡಾ. ಖಲೀಲುರ್ ರೆಹಮಾನ್ ನೂತನ ವಿದೇಶಾಂಗ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊಹಮ್ಮದ್ ಅಮೀನ್ ಉರ್ ರಶೀದ್ ಅವರು ತಾಂತ್ರಿಕ ಸಚಿವರಾಗಿ ಅಧಿಕಾರವಹಿಸಿಕೊಂಡಿದ್ದಾರೆ.

ಅಲ್ಪಸಂಖ್ಯಾತ ಸಮುದಾಯಗಳಿಂದ ಹಿಂದೂ ಸಮುದಾಯವನ್ನು ಪ್ರತಿನಿಧಿಸುವ ನಿತೈ ರಾಯ್ ಚೌಧರಿ, ಚಕ್ಮಾ ಬೌದ್ಧ ಸಮುದಾಯವನ್ನು ಪ್ರತಿನಿಧಿಸುವ ದೀಪನ್ ದಿವಾನ್ ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಯುವ ಪ್ರತಿಭಟನಾಕಾರರ ಪರವಾಗಿ ರಾಜ್ಯ ಸಚಿವರಾಗಿ ಜುನೈದ್ ಸಾಕಿ ಆಯ್ಕೆಯಾಗಿದ್ದಾರೆ.

ಕಾರ್ಯಕ್ರಮದಲ್ಲಿ ನೂತನವಾಗಿ ಚುನಾಯಿತರಾದ ಬಿಎನ್‌ಪಿಯ ಎಲ್ಲಾ 209 ಸಂಸದರು ಕೂಡ ಸಂಸತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇತ್ತೀಚೆಗೆ ನಡೆದ 13ನೇ ಸಾರ್ವತ್ರಿಕ ಚುನಾವಣೆಯಲ್ಲಿ ಬಿಎನ್‌ಪಿ ಪಕ್ಷವು 297 ಸ್ಥಾನಗಳ ಪೈಕಿ 209 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಸಾಧಿಸಿತ್ತು. ಸುಮಾರು 17 ವರ್ಷಗಳ ವನವಾಸದ ನಂತರ ತಾರಿಖ್ ರೆಹಮಾನ್ ಅವರು ಅಧಿಕಾರಕ್ಕೆ ಮರಳಿದ್ದಾರೆ.

ಭಾರತದಿಂದ ಓಂ ಬಿರ್ಲಾ ಭಾಗಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನವಿತ್ತಾದರೂ, ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷರೊಂದಿಗೆ ನಿಗದಿತ ಸಭೆಗಳಿದ್ದ ಕಾರಣ ಅವರು ಭಾಗವಹಿಸಿಲ್ಲ. ಪ್ರಧಾನಿ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾರತವನ್ನು ಪ್ರತಿನಿಧಿಸಿ ಸಮಾರಂಭದಲ್ಲಿ ಪಾಲ್ಗೊಂಡರು.

ಇತರ ದೇಶಗಳಿಂದ ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು, ಭೂತಾನ್ ಪ್ರಧಾನಿ ತ್ಶೆರಿಂಗ್ ಟೋಬ್ಗೇ, ಪಾಕಿಸ್ತಾನದ ಪ್ರಧಾನಿ ಶಹಬಾಝ್ ಶರೀಫ್ ಪರವಾಗಿ ಅಲ್ಲಿನ ಯೋಜನಾ ಸಚಿವ ಅಹ್ಸಾನ್ ಇಕ್ಬಾಲ್, ನೇಪಾಳದ ವಿದೇಶಾಂಗ ಸಚಿವ ಬಾಲ ನಂದ ಶರ್ಮಾ, ಶ್ರೀಲಂಕಾದ ಆರೋಗ್ಯ ಮತ್ತು ಸಮೂಹ ಮಾಧ್ಯಮ ಸಚಿವ ಡಾ. ನಳಿಂದ ಜಯತಿಸ್ಸ, ಯುನೈಟೆಡ್ ಕಿಂಗ್‌ಡಮ್‌ನ ಇಂಡೋ-ಪೆಸಿಫಿಕ್ ಉಪ ಕಾರ್ಯದರ್ಶಿ ಸೀಮಾ ಮಲ್ಹೋತ್ರಾ, ಚೀನಾ, ಸೌದಿ ಅರೇಬಿಯಾ, ಟರ್ಕಿ, ಯುಎಇ, ಕತಾರ್, ಮಲೇಷ್ಯಾ ಮತ್ತು ಬ್ರೂನೈ ದೇಶಗಳ ಹಿರಿಯ ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...