Homeಕರ್ನಾಟಕರಾಜ್ಯದ ಹೊಸ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌‌ ಅಧಿಕಾರ ಸ್ವೀಕಾರ

ರಾಜ್ಯದ ಹೊಸ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌‌ ಅಧಿಕಾರ ಸ್ವೀಕಾರ

- Advertisement -
- Advertisement -

ಕರ್ನಾಟಕದ ಹೊಸ ರಾಜ್ಯಪಾಲರಾಗಿ ತಾವರ್‌ಚಂದ್ ಗೆಹ್ಲೋಟ್‌‌ ಅವರು ಭಾನುವಾರ ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದರು. ರಾಜಭವನದ ಗಾಜಿನಮನೆಯಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಪ್ರಮಾಣವಚನ ಬೋಧಿಸಿದರು. ರಾಜ್ಯದ 19 ನೇ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ ಗೆಹ್ಲೋಟ್‌ ಅವರು ಈಶ್ವರನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಗೆಹ್ಲೋಟ್‌ ಅವರು ಒಕ್ಕೂಟ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಆಗಿದ್ದರು. ರಾಷ್ಟ್ರಪತಿ ಭವನವು ಕಳೆದ ಮಂಗಳವಾರ ಅವರನ್ನು ರಾಜ್ಯದ ರಾಜ್ಯಪಾಲರಾಗಿ ನೇಮಕ ಮಾಡಿದೆ ಎಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿತ್ತು. ಅವರ ಜೊತೆಗೆ ಹಲವು ರಾಜ್ಯಗಳ ರಾಜ್ಯಪಾಲರನ್ನು ವರ್ಗಾಯಿಲಾಗಿದ್ದು, ಕೆಲವು ರಾಜ್ಯಗಳಿಗೆ ಹೊಸ ರಾಜ್ಯಪಾಲರನ್ನು ನೇಮಿಸಲಾಗಿತ್ತು.

ಇದನ್ನೂ ಓದಿ: ಕರ್ನಾಟಕದ ರಾಜ್ಯಪಾಲರ ಜೊತೆಗೆ ನೇಮಕವಾದ ಇತರ ರಾಜ್ಯಗಳ ಹೊಸ ರಾಜ್ಯಪಾಲರ ಪಟ್ಟಿ ಹೀಗಿದೆ..

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ, ನಿರ್ಗಮಿತ ರಾಜ್ಯಪಾಲ ವಜುಬಾಯಿ ವಾಲ ಉಪಸ್ಥಿತರಿದ್ದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ ತಾವರ್ ಚಂದ್ ಗೆಹ್ಲೋಟ್ ಅವರನ್ನು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

ರಾಜ್ಯಪಾಲರ ಮೂಲಭೂತ ಜವಾಬ್ದಾರಿ ಭಾರತ ಸಂವಿಧಾನವನ್ನು ಎತ್ತಿಹಿಡಿಯುವುದಾಗಿದೆ. ಸಂವಿಧಾನದ 159 ನೇ ವಿಧಿ ಅಡಿಯಲ್ಲಿ ರಾಷ್ಟ್ರಪತಿಗಳಿಂದ ಪ್ರಮಾಣ ವಚನವನ್ನು ಸ್ವೀಕರಿಸುವ ರಾಜ್ಯಪಾಲರು, ರಾಜ್ಯದ ಆಡಳಿತ ಮತ್ತು ಸಂವಿಧಾನ ದತ್ತವಾದ ಅಧಿಕಾರಗಳನ್ನು ಅತ್ಯಂತ ವಿವೇಚನೆಯಿಂದ ಚಲಾಯಿಸಬೇಕಾಗುತ್ತದೆ.

ಇದನ್ನೂ ಓದಿ: ರಾಜಸ್ಥಾನ ರಾಜ್ಯಪಾಲರ ಜೀವನ ಚರಿತ್ರೆಯಲ್ಲಿ ಬಿಜೆಪಿ ಜಾಹೀರಾತು: ವಿವಿಗಳಿಗೆ ಪುಸ್ತಕ ಖರೀದಿಸುವಂತೆ ತಾಕೀತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿಯವರ ಹಲವಾರು ಹೇಳಿಕೆಗಳಿಂದ ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಸೀತಾರಾಂ ಯೆಚೂರಿ

0
'ದೇಶದ ವಿವಿಧ ಭಾಗಗಳಲ್ಲಿ ತಮ್ಮ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಾದರಿ ನೀತಿ ಸಂಹಿತೆ ಉಲ್ಲಂಘಿಸುವ ಹೇಳಿಕೆಗಳನ್ನು ನೀಡಿದ್ದಾರೆ' ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ...