Homeಮುಖಪುಟಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆ; ರಾಜ್ಯಗಳಿಗೆ ₹1.73 ಲಕ್ಷ ಕೋಟಿ ಬಿಡುಗಡೆ

ಕೇಂದ್ರ ಸರ್ಕಾರದಿಂದ ತೆರಿಗೆ ಹಂಚಿಕೆ; ರಾಜ್ಯಗಳಿಗೆ ₹1.73 ಲಕ್ಷ ಕೋಟಿ ಬಿಡುಗಡೆ

- Advertisement -
- Advertisement -

ಡಿಸೆಂಬರ್ 2024 ರಲ್ಲಿ ₹89,086 ಕೋಟಿ ರೂಪಾಯಿಗಳಿಗೆ ಬದಲಾಗಿ, ಕೇಂದ್ರ ಸರ್ಕಾರವು ಇಂದು ರಾಜ್ಯ ಸರ್ಕಾರಗಳಿಗೆ ₹1,73,030 ಕೋಟಿ ತೆರಿಗೆ ಹಂಚಿಕೆಯನ್ನು ಬಿಡುಗಡೆ ಮಾಡಿದೆ.

ರಾಜ್ಯಗಳು ಬಂಡವಾಳ ವೆಚ್ಚವನ್ನು ವೇಗಗೊಳಿಸಲು, ಅವುಗಳ ಅಭಿವೃದ್ಧಿ ಮತ್ತು ಕಲ್ಯಾಣ ಸಂಬಂಧಿತ ವೆಚ್ಚಗಳಿಗೆ ಹಣಕಾಸು ಒದಗಿಸಲು ಈ ತಿಂಗಳು ಹೆಚ್ಚಿನ ಮೊತ್ತವನ್ನು ಹಂಚಿಕೆ ಮಾಡಲಾಗುತ್ತಿದೆ.

ತೆರಿಗೆ ಹಂಚಿಕೆ ಎಂದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವಿನ ತೆರಿಗೆ ಆದಾಯದ ವಿತರಣೆ. ಕೆಲವು ತೆರಿಗೆಗಳ ಆದಾಯವನ್ನು ಕೇಂದ್ರ ಮತ್ತು ರಾಜ್ಯಗಳ ನಡುವೆ ನ್ಯಾಯಯುತ, ಸಮಾನ ರೀತಿಯಲ್ಲಿ ಹಂಚುವುದು ಸಾಂವಿಧಾನಿಕ ಕಾರ್ಯವಿಧಾನವಾಗಿದೆ. ಹಣಕಾಸು ಆಯೋಗವು ಕೇಂದ್ರ ಮತ್ತು ರಾಜ್ಯಗಳ ನಡುವೆ ತೆರಿಗೆಗಳ ನಿವ್ವಳ ಆದಾಯದ ವಿಭಜನೆಯನ್ನು ಶಿಫಾರಸು ಮಾಡುತ್ತದೆ.

ಉತ್ತರ ಪ್ರದೇಶವು ಅತಿ ಹೆಚ್ಚು ₹31,039.84 ಕೋಟಿಯನ್ನು ಪಡೆದುಕೊಂಡಿದೆ. ನಂತರ ₹17,403.36 ಕೋಟಿ ರೂಪಾಯಿಗಳನ್ನು ಮತ್ತು ಪಶ್ಚಿಮ ಬಂಗಾಳಕ್ಕೆ ₹13017.06 ಕೋಟಿಗಳನ್ನು ಪಡೆದುಕೊಂಡಿದೆ. ಮಹಾರಾಷ್ಟ್ರಕ್ಕೆ ₹10.930.31 ಕೋಟಿ ನೀಡಲಾಗಿದ್ದರೆ, ರಾಜಸ್ಥಾನಕ್ಕೆ ₹10,426.78 ಕೋಟಿ ನೀಡಲಾಗಿದೆ. ಗೋವಾ ಮತ್ತು ಸಿಕ್ಕಿಂ ಕ್ರಮವಾಗಿ ₹667.91 ಕೋಟಿ ಮತ್ತು ₹671.35 ಕೋಟಿಯಷ್ಟು ಕಡಿಮೆ ಮೊತ್ತವನ್ನು ಪಡೆದಿವೆ.

2021 ರಿಂದ 2026 ರ ಅವಧಿಗೆ ಕೇಂದ್ರ ತೆರಿಗೆಗಳಲ್ಲಿ ರಾಜ್ಯಗಳ ಪಾಲು ಶೇ.41 ರಷ್ಟು ಇರಬೇಕೆಂದು ಶಿಫಾರಸು ಮಾಡಲಾಗಿದೆ. ಇದು 2020-21 ರಂತೆಯೇ ಇದೆ. ಇದು 2015-20 ರ ಅವಧಿಗೆ 14 ನೇ ಹಣಕಾಸು ಆಯೋಗವು ಶಿಫಾರಸು ಮಾಡಿದ ಶೇ.42 ರಷ್ಟು ಪಾಲುಗಿಂತ ಕಡಿಮೆಯಾಗಿದೆ. ಕೇಂದ್ರದ ಸಂಪನ್ಮೂಲಗಳಿಂದ ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್‌ನ ಹೊಸದಾಗಿ ರೂಪುಗೊಂಡ ಕೇಂದ್ರಾಡಳಿತ ಪ್ರದೇಶಗಳಿಗೆ ಒದಗಿಸಲು ಶೇ.1 ರಷ್ಟು ಹೊಂದಾಣಿಕೆ ಮಾಡಲಾಗಿದೆ.

ಪ್ರತ್ಯೇಕ ರಾಜ್ಯಗಳಿಗೆ ವಿಕೇಂದ್ರೀಕರಣ ಮೊತ್ತಕ್ಕಾಗಿ, ಜನಸಂಖ್ಯಾ ಕಾರ್ಯಕ್ಷಮತೆಗೆ ಶೇ.12.5 ರಷ್ಟು, ಆದಾಯಕ್ಕೆ ಶೇ.45 ರಷ್ಟು, ಜನಸಂಖ್ಯೆ ಮತ್ತು ಪ್ರದೇಶಕ್ಕೆ ಶೇ.15 ರಷ್ಟು, ಅರಣ್ಯ ಮತ್ತು ಪರಿಸರ ವಿಜ್ಞಾನಕ್ಕೆ ಶೇ.10 ರಷ್ಟು ಮತ್ತು ತೆರಿಗೆ ಮತ್ತು ಹಣಕಾಸಿನ ಪ್ರಯತ್ನಗಳಿಗೆ ಶೇ.2.5 ರಷ್ಟು ಮಹತ್ವವನ್ನು ನೀಡಲಾಗಿದೆ.

ಇದನ್ನೂ ಓದಿ; ಕೇಜ್ರಿವಾಲ್ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...