ಟ್ಯಾಕ್ಸಿ ಚಾಲಕ ಪ್ರತಾಪ್ ಆತ್ಮಹತ್ಯೆ, ಖಾಸಗಿ ಕಂಪನಿಗಳಿಗೆ ಕಡಿವಾಣ ಹಾಕಿ-ಎಚ್.ಡಿ. ಕುಮಾರಸ್ವಾಮಿ ಆಗ್ರಹ
PC: bangaloreairport.com

ಬಾಡಿಗೆ ದೊರೆಯದೆ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕಾರಣಕ್ಕೆ ಕೆಎಸ್‌ಟಿಡಿಸಿ ಟ್ಯಾಕ್ಸಿ ಚಾಲಕ ಪ್ರತಾಪ್ ಏರ್‌ಪೋರ್ಟ್ ಆವರಣದಲ್ಲಿ ಮಂಗಳವಾರ ಕಾರಿನೊಳಗೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಯತ್ನಿಸಿದ್ದರು. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಟ್ಯಾಕ್ಸಿ ಚಾಲಕ ಪ್ರತಾಪ್ ಕಳೆದ 10 ವರ್ಷಗಳಿಂದ ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ಅಭಿವೃದ್ಧಿ ಪ್ರಾಧಿಕಾರದ(KSTDC) ಏರ್‌ಪೋರ್ಟ್ ಟ್ಯಾಕ್ಸಿ ಚಾಲಕರಾಗಿದ್ದರು ಎನ್ನಲಾಗಿದೆ. ಬಾಡಿಗೆ ಸಿಗದೇ ಆರ್ಥಿಕ ಸಂಕಷ್ಟಕ್ಕೆ ಈಡಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.

ಘಟನೆ ಕುರಿತು ಟ್ವೀಟ್ ಮಾಡಿ ಅಸಮಾಧಾನ ಹೊರ ಹಾಕಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳ ಬಗ್ಗೆ ಗಮನ ಹರಿಸಬೇಕು. ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಬಿಜೆಪಿ ಸರ್ಕಾರದ ಸಚಿವನಾಗಿ ಕೇಂದ್ರವನ್ನು ಟೀಕಿಸುತ್ತೇನಾ’ – ಉಲ್ಟಾ ಹೊಡೆದ ಮಾಧುಸ್ವಾಮಿ ಹೇಳಿದ್ದೇನು?

ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಚಾಲಕ ಪ್ರತಾಪ್

’ಬಾಡಿಗೆ ದೊರೆಯದೇ ಆರ್ಥಿಕ ಸಂಕಷ್ಟಕ್ಕೀಡಾಗಿದ್ದ ಕೆಎಸ್‌ಟಿಡಿಸಿ ಕ್ಯಾಬ್‌ ಚಾಲಕ ಪ್ರತಾಪ್‌ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಮಧ್ಯರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ಪ್ರತಾಪ್‌ ಅವರ ಸಾವಿನೊಂದಿಗೆ ಕೆಎಸ್‌ಟಿಡಿಸಿ ಚಾಲಕರ ಸಮಸ್ಯೆಗಳು ತೆರೆದುಕೊಂಡಿವೆ” ಎಂದಿದ್ದಾರೆ.

’ಕ್ಯಾಬ್‌ ಉದ್ಯಮದ ದರ ಸಮರ, ಸರ್ಕಾರದ ನಿರ್ಲಕ್ಷ್ಯಕ್ಕೆ ಪ್ರತಾಪ್‌ ಜೀವ ಬಲಿಯಾಗಿದೆ. ಟ್ಯಾಕ್ಸಿ, ಕ್ಯಾಬ್‌ಗಳಿಗೆ ಸರ್ಕಾರ 1 ಕಿ.ಮೀಗೆ 24 ರೂಪಾಯಿ ದರ ನಿಗದಿ ಮಾಡಿದೆ. ಕೆಎಸ್‌ಟಿಡಿಸಿ ಚಾಲಕರು ಇದನ್ನು ಪಾಲಿಸುತ್ತಿದ್ದರೆ, ಖಾಸಗಿ ಕಂಪನಿಗಳು ನಿಯಮ ಗಾಳಿಗೆ ತೂರಿ ಗ್ರಾಹಕರನ್ನು ಆಕರ್ಷಿಸುತ್ತಿವೆ. ಕೆಎಸ್‌ಟಿಡಿಸಿ ಚಾಲಕರು ಸೊರಗುತ್ತಿದ್ದಾರೆ’ ಎಂದು ಖಾಸಗಿ ಮತ್ತು ಕೆಎಸ್‌ಟಿಡಿಸಿ ನಡುವಿನ ವ್ಯತ್ಯಾಸವನ್ನು ತಿಳಿಸಿದ್ದಾರೆ.

ಇದನ್ನೂ ಓದಿ: ನೌಕರರ ಮುಷ್ಕರ ನೆಪವೊಡ್ಡಿ ಬಿಎಂಟಿಸಿ ಖಾಸಗೀಕರಣಗೊಳಿಸುವ ಹುನ್ನಾರ-ಆಪ್ ಆರೋಪ

’ಕೆಎಸ್‌ಟಿಡಿಸಿ ಕ್ಯಾಬ್‌ಗಳು ದರ ನಿಯಮ ಪಾಲಿಸುತ್ತಿದ್ದರೆ, ಖಾಸಗಿ ಕ್ಯಾಬ್‌ಗಳು 9 ರೂಪಾಯಿಗೆ ಗ್ರಾಹಕರನ್ನು ಸೆಳೆಯುತ್ತಿವೆ. ಹೀಗಾಗಿ ಕೆಎಸ್‌ಟಿಡಿಸಿ ಕ್ಯಾಬ್‌ಗಳಿಗೆ ಗ್ರಾಹಕರೇ ಇಲ್ಲದಂತಾಗಿದೆ. ಚಾಲಕರು ಸಮಸ್ಯೆಗೆ ಸಿಲುಕಿದ್ದಾರೆ. ಇದರ ಜೊತೆಗೆ ವಿಮಾನ ನಿಲ್ದಾಣದ ಪಾರ್ಕಿಂಗ್‌ನಲ್ಲೂ ನಡೆಯುತ್ತಿರುವ ರಾಜಕೀಯ ಚಾಲಕರ ಕೊರಳು ಹಿಂಡುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸರ್ಕಾರ ದರ ಸಮರದತ್ತ ಕೂಡಲೇ ಗಮನಹರಿಸಬೇಕು. ನಿಯಮ ಪಾಲಿಸದೇ ಮಾರುಕಟ್ಟೆಯಲ್ಲಿ ಅನಗತ್ಯ ಪೈಪೋಟಿ ಸೃಷ್ಟಿ ಮಾಡುತ್ತಿರುವ, ಆ ಮೂಲಕ ಅಮಾಯಕ ಚಾಲಕರ ಪ್ರಾಣ ಕಸಿಯುತ್ತಿರುವ ಖಾಸಗಿ ಕಂಪನಿಗಳಿಗೆ ಎಚ್ಚರಿಕೆ ನೀಡಬೇಕು. ಅದರ ಮೂಲಕ ಅಮಾಯಕ, ಶ್ರಮಜೀವಿ ಕ್ಯಾಬ್‌ ಚಾಲಕರ ರಕ್ಷಣೆಗೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ನಾನು ಆಗ್ರಹಿಸುತ್ತೇನೆ” ಎಂದಿದ್ದಾರೆ.

ಇತ್ತ, ಚಾಲಕ ಪ್ರತಾಪ್ ಸಾವಿನಿಂದ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಟ್ಯಾಕ್ಸಿ ಸೇವೆಗಳಿಗೆ ತೊಂದರೆಯಾಗಿದೆ. ಪ್ರಯಾಣಿಕರಿಗೆ ಬಿಎಂಟಿಸಿ ಬಸ್ ಸೇವೆಯನ್ನು ಬಳಸಲು ಅಥವಾ ತಮ್ಮದೇ ಆದ ಪ್ರಯಾಣದ ವ್ಯವಸ್ಥೆಗಳನ್ನು ಮಾಡಲು ವಿಮಾನ ನಿಲ್ದಾಣದ ಅಧಿಕಾರಿಗಳು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: `1232 ಕಿ.ಮೀ’ | ಕರಾಳ ಲಾಕ್‌ಡೌನ್‌‌ನಲ್ಲಿ ಕಾರ್ಮಿಕರ ‘ಮಹಾವಲಸೆ’ಯ ಕತೆ ಹೇಳುವ ಸಾಕ್ಷ್ಯಚಿತ್ರ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here