Homeಮುಖಪುಟ'ನಾವು ಎನ್‌ಡಿಎ ಜೊತೆಗಿದ್ದೇವೆ': ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ

‘ನಾವು ಎನ್‌ಡಿಎ ಜೊತೆಗಿದ್ದೇವೆ’: ಚಂದ್ರಬಾಬು ನಾಯ್ಡು ಮಹತ್ವದ ಹೇಳಿಕೆ

- Advertisement -
- Advertisement -

ಕೇಂದ್ರದಲ್ಲಿ ಸರಕಾರ ರಚನೆಗೆ ಬಿಜೆಪಿ ನೇತೃತ್ವದ ಎನ್‌ಡಿಎಗೆ ತಮ್ಮ ಬೆಂಬಲವನ್ನು ಟಿಡಿಪಿ ಮುಖ್ಯಸ್ಥ ಎನ್‌ ಚಂದ್ರಬಾಬು ನಾಯ್ಡು ಪುನರುಚ್ಛರಿಸಿದ್ದಾರೆ.

ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಈ ಬಗೆಗಿನ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ್ದು, ನಿಮಗೆ ಯಾವಾಗಲೂ ಸುದ್ದಿ ಬೇಕು. ನನಗೆ ಅನುಭವ ಇದೆ. ನಾನು ಈ ದೇಶದಲ್ಲಿ ಹಲವಾರು ರಾಜಕೀಯ ಬದಲಾವಣೆಗಳನ್ನು ನೋಡಿದ್ದೇನೆ. ನಾವು ಎನ್‌ಡಿಎಯಲ್ಲಿದ್ದೇವೆ, ನಾನು ಎನ್‌ಡಿಎ ಸಭೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.

ನಾನು ದೆಹಲಿಗೆ ಹೋಗುತ್ತಿದ್ದೇನೆ. ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳುಗಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ ಐದು ವರ್ಷಗಳ ಕಾಲ ಹೋರಾಟ ನಡಸಿದ್ದು, ಇದೀಗ ಯಶಸ್ವಿಯಾಗಿದ್ದಾರೆ ಎಂದು ಹೇಳಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 293 ಸ್ಥಾನಗಳನ್ನು, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟವು 233 ಸ್ಥಾನಗಳನ್ನು ಮತ್ತು ಇತರರು 17 ಸ್ಥಾನಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಬಿಜೆಪಿಗೆ ಸಂಪೂರ್ಣ ಬಹುಮತ ಸಿಗದ ಕಾರಣ ಟಿಡಿಪಿ ಮತ್ತು ಜೆಡಿಯು ಕಿಂಗ್‌ ಮೇಕರ್‌ ಆಗಿದೆ. ಈ ಎರಡೂ ಪಕ್ಷಗಳು ಚುನಾವಣೆ ಪೂರ್ವದಲ್ಲೇ ಎನ್‌ಡಿಎ ಜೊತೆ ಮೈತ್ರಿಯನ್ನು ಮಾಡಿಕೊಂಡಿದ್ದವು. ಆದರೆ ಫಲಿತಾಂಶದ ಬಳಿಕ ಇಂಡಿಯಾ ಮೈತ್ರಿಕೂಟದ ನಾಯಕರು ನಾಯ್ಡು ಮತ್ತು ನಿತೀಶ್‌ ಅವರನ್ನು ತಮ್ಮತ್ತ ಸೆಳೆಯಲು ಪ್ರಯತ್ನಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಈ ಎಲ್ಲಾ ಬೆಳವಣಿಗೆಗಳನ್ನು ಚಂದ್ರಬಾಬು ನಾಯ್ಡು ನಿರಾಕರಿಸಿದ್ದು, ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲವನ್ನು ಪುನರುಚ್ಛರಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ದೂರವಿಡಬೇಕು, ಆದ್ದರಿಂದ ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಚಂದ್ರಬಾಬು ನಾಯ್ಡು ಮತ್ತು ನಿತೀಶ್ ಕುಮಾರ್‌ ಅವರಿಗೆ ಈ ಮೊದಲು ಮನವಿಯನ್ನು ಕೂಡ ಮಾಡಿಕೊಂಡಿರುವುದನ್ನು ನಾವು ಗಮನಿಸಬಹುದಾಗಿದೆ.

https://x.com/i/status/1798228771918807448

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...