Homeಕರ್ನಾಟಕಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಲಿಸಿ; ಇಲ್ಲವೆಂದರೆ ರಾಜ್ಯದಿಂದ ಹೊರಗೆ ಕಳಿಸಿ: T.S. ನಾಗಾಭರಣ

ಬ್ಯಾಂಕ್ ಉದ್ಯೋಗಿಗಳಿಗೆ ಕನ್ನಡ ಕಲಿಸಿ; ಇಲ್ಲವೆಂದರೆ ರಾಜ್ಯದಿಂದ ಹೊರಗೆ ಕಳಿಸಿ: T.S. ನಾಗಾಭರಣ

- Advertisement -
- Advertisement -

ರಾಜ್ಯದಲ್ಲಿರುವ ಬ್ಯಾಂಕ್‌ಗಳು ರಾಜ್ಯ ಸರ್ಕಾರದ ಭಾಷಾ ನೀತಿಗಳನ್ನು ಉಲ್ಲಂಘಿಸುತ್ತಿದ್ದು, ಸ್ಥಳೀಯ ಭಾಷೆಗಳಲ್ಲಿ ಗ್ರಾಹಕರೊಂದಿಗೆ ವ್ಯವಹರಿಸುತ್ತಿಲ್ಲ. ಅವರಿಗೆ ಕೂಡಲೇ ಕನ್ನಡ ಕಲಿಸಬೇಕು, ಇಲ್ಲವೇ ಅವರನ್ನು ರಾಜ್ಯದಿಂದ ಹೊರ ಕಳಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವ ವಿ‍ಶೇಷ: ನಮ್ಮ ಕನಸಿನ ಕರ್ನಾಟಕ ಹೇಗಿರಬೇಕು?

ಭಾರತೀಯ ರಿಸರ್ವ್ ಬ್ಯಾಂಕಿನ ನಿಯಮಾವಳಿಗಳು, ನೇಮಕಾತಿ ಪ್ರಕ್ರಿಯೆ ಹಾಗೂ ಆಡಳಿತದಲ್ಲಿನ ಸಂಪೂರ್ಣ ಕನ್ನಡ ಅನುಷ್ಠಾನ ಕುರಿತು ಸಭೆ ನಡೆಸಿದ ಅವರು, ಬ್ಯಾಂಕುಗಳಲ್ಲಿ ಸಿ ಮತ್ತು ಡಿ ಹುದ್ದೆಯಲ್ಲಿರುವ ಕನ್ನಡ ಬಾರದ ಕನ್ನಡೇತರರ ಮೇಲೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಬ್ಯಾಂಕರುಗಳ SLBC ಸಮಿತಿಗೆ ತಾಕೀತು ಮಾಡಿದ್ದಾರೆ.

ಬ್ಯಾಂಕ್‌ ಹುದ್ದೆಗಳಿಗೆ ನೇಮಕವಾದ ಕನ್ನಡೇತರರು ನೇಮಕಗೊಂಡ 6 ತಿಂಗಳೊಳಗಾಗಿ ಕನ್ನಡವನ್ನು ಓದಲು ಮತ್ತು ಬರೆಯಲು ಕಲಿತುಕೊಳ್ಳಬೇಕು. ಗ್ರಾಹಕರೊಂದಿಗೆ ಸ್ಥಳೀಯ ಭಾಷೆಯಲ್ಲಿ ಸಂವಹನ ನಡೆಸಬೇಕು. ಆದರೆ 05-06 ವರ್ಷಗಳಾದರೂ ಕನ್ನಡ ಕಲಿತಿಲ್ಲ, ಅಂತಹ ನೌಕರರ ವಿರುದ್ಧ ಕ್ರಮಕೈಗೊಂಡಿಲ್ಲ. ಈಗಲಾದರೂ ಕನ್ನಡ ಬಾರದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನಾಡಧ್ವಜ ಹಾರಿಸದೆ ದ್ರೋಹವೆಸಗಿವರಿಗೆ ಕನ್ನಡಿಗರ ಕ್ಷಮೆ ಇಲ್ಲ: ’#ನಮ್ಮಧ್ವಜ_ನಮ್ಮಹೆಮ್ಮೆ’ ಟ್ರೆಂಡ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

3 COMMENTS

  1. ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಮಾಹಿತಿ ಆಯೋಗದ ರೀತಿಯಲ್ಲಿ ದಂಡ ವಿದಿಸುವ ಶಾಸನಬದ್ದವಾದ ಅದಿಕಾರ ಇರಬೇಕು. ಅಲ್ಲಿಯವರೆಗೆ ಕ.ಅ.ಪ್ರಾ. ಅದ್ಯಕ್ಷರ ಕೂಗು, ನರಿಯ ಕೂಗು ಗಿರಿಯ ಮುಟ್ಟೀತೆ ಎಂಬಂತೆ.

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...