ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ
ಮೇ 15 ರಂದು ದಾಮೋಹ್ ಜಿಲ್ಲೆಯ ಹಟ್ಟಾ ಪಟ್ಟಣದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ರಾಜೇಶ್ ತ್ರಿಪಾಠಿ ಅವರನ್ನು ಮಾನಸಿಕ ಕಿರುಕುಳ ನೀಡಿ ಬ್ಲ್ಯಾಕ್‌ಮೇಲ್ ಮಾಡಿದ ಆರೋಪದ ಮೇಲೆ ಮಧ್ಯವಯಸ್ಕ ಆರ್‌ಟಿಐ ಕಾರ್ಯಕರ್ತ ಜಿತೇಂದ್ರ ಭಟ್ ಅವರನ್ನು ಮೇ 26 ರಂದು ಬಂಧಿಸಲಾಗಿದೆ.
ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೆದರಿ ತ್ರಿಪಾಠಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೆ, ಹಲವು ಪ್ರಾಥಮಿಕ ಶಾಲಾ ಶಿಕ್ಷಕರು ಅದೇ ಆರ್‌ಟಿಐ ಕಾರ್ಯಕರ್ತನ ವಿರುದ್ಧ ದಾಮೋಹ್ ಜಿಲ್ಲಾ ಪೊಲೀಸರನ್ನು ಸಂಪರ್ಕಿಸಿದ್ದರು ಎಂದು ವರದಿಯಾಗಿದೆ.
ಪ್ರಾಥಮಿಕ ಶಾಲಾ ಶಿಕ್ಷಕ ತ್ರಿಪಾಠಿ ನಕಲಿ ಅವರು ಬಿಇಡಿ ಪದವಿ ಬಳಸಿ ಸರ್ಕಾರಿ ಕೆಲಸ ಪಡೆದಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಅಧಿಕಾರಿಗಳಿಗೆ ದೂರು ನೀಡಿದ್ದರು ಎಂದು ಮೂಲಗಳು ಉಲ್ಲೇಖಿಸಿವೆ.
ಆರ್‌ಟಿಐ ಕಾರ್ಯಕರ್ತ ತ್ರಿಪಾಠಿ ಅವರಿಂದ ನಿಯಮಿತವಾಗಿ ಹಣ ಪಡೆಯಲು ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ ಎಂದು ವರದಿ ಉಲ್ಲೇಕಿಸಿದೆ.
“ತ್ರಿಪಾಠಿ ಅವರಿಗೆ ಸುಮಾರು 7 ಲಕ್ಷದಿಂದ 10 ಲಕ್ಷ ರೂ.ಗಳವರೆಗೆ ಹಣ ನೀಡುವಂತೆ ಒತ್ತಾಯಿಸಿದ್ದ ಆರ್‌ಟಿಐ ಕಾರ್ಯಕರ್ತ, ಸಂಬಳದ ಅರ್ಧದಷ್ಟು ಹಣವನ್ನು ಪ್ರತಿ ತಿಂಗಳು ಪಾವತಿಸಬೇಕೆಂದು ಆಗ್ರಹಿಸಿದ್ದನು” ಎಂದು ದಾಮೋಹ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಕೀರ್ತಿ ಸೋಮವಂಶಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
ಮನೆ ಕಟ್ಟಲು ಬೇಕಾಗಿ ಬ್ಯಾಂಕ್ ಮತ್ತು ಖಾಸಗಿ ಸಾಲಗಾರರಿಂದ ಪಡೆದಿದ್ದ 50 ಲಕ್ಷ ರೂ.ಗಳಿಗೂ ಹೆಚ್ಚು ಸಾಲದ ಹೊರೆಯಿಂದ ಬಳಲುತ್ತಿದ್ದ ಅವರು, ನಕಲಿ ಪದವಿಯ ಕಾರಣಕ್ಕಾಗಿ ಕೆಲಸ ಕಳೆದುಕೊಳ್ಳುತ್ತೀರಿ ಎಂದು ಆರ್‌ಟಿಐ ಕಾರ್ಯಕರ್ತನಿಂದ ನಿರಂತರ ಬೆದರಿಕೆ ಹಾಕುತ್ತಿದ್ದನು ಎಂದು ಆರೋಪಿಸಲಾಗಿದೆ.
ಜೊತೆಗೆ ನಿಯಮಿತವಾಗಿ ಹಣ ಪಾವತಿಸಬೇಕಾಗಿ ಬಂದಿದ್ದರಿಂದ, ಮೇ 25 ರಂದು ತಮ್ಮ ಹಳ್ಳಿಯಾದ ಹಟ್ಟಾ ಪಟ್ಟಣದಿಂದ ಹಿಂತಿರುಗುವಾಗ ತ್ರಿಪಾಠಿ ಅವರು ಬೆಂಕಿ ಹಚ್ಚಿಕೊಂಡಿದ್ದಾರೆ. ನಂತರ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಅವರು ಸಾವನ್ನಪ್ಪಿದರು ಎಂದು ದಾಮೋಹ್‌ನ ಎಸ್‌ಪಿ ಹೇಳಿದ್ದಾರೆ.
ತ್ರಿಪಾಠಿ ಅವರನ್ನು ಮಾನಸಿಕವಾಗಿ ಕಿರುಕುಳ ನೀಡಿದ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಆರ್‌ಟಿಐ ಕಾರ್ಯಕರ್ತ ಭಟ್ ವಿರುದ್ಧ ಬಿಎನ್‌ಎಸ್ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬೆದರಿಕೆಗೆ ಒಳಗಾಗಿ ಶಿಕ್ಷಕ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್
ಅಣ್ಣಾ ವಿವಿ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಜ್ಞಾನಶೇಖರನ್ ದೋಷಿ ಎಂದ ಕೋರ್ಟ್

