Homeಮುಖಪುಟಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಲು ಸಿಬಿಐ, ಇಡಿಗೆ ಅನುಮತಿ ನೀಡಿದ ಕೋಲ್ಕತ್ತಾ ಹೈಕೋರ್ಟ್

ಶಿಕ್ಷಕರ ನೇಮಕಾತಿ ಹಗರಣ: ಅಭಿಷೇಕ್ ಬ್ಯಾನರ್ಜಿ ಪ್ರಶ್ನಿಸಲು ಸಿಬಿಐ, ಇಡಿಗೆ ಅನುಮತಿ ನೀಡಿದ ಕೋಲ್ಕತ್ತಾ ಹೈಕೋರ್ಟ್

- Advertisement -
- Advertisement -

ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿನ ಅಕ್ರಮಗಳ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರನ್ನು ಪ್ರಶ್ನಿಸಲು ಕೋಲ್ಕತ್ತಾ ಹೈಕೋರ್ಟ್ ಗುರುವಾರ ಕೇಂದ್ರೀಯ ತನಿಖಾ ಮತ್ತು ಜಾರಿ ನಿರ್ದೇಶನಾಲಯಕ್ಕೆ ಅನುಮತಿ ನೀಡಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಮತ್ತೊಬ್ಬ ತೃಣಮೂಲ ಕಾಂಗ್ರೆಸ್ ನಾಯಕ ಕುಂತಲ್ ಘೋಷ್ ಅವರನ್ನು ಪ್ರಶ್ನಿಸಲು ಹೈಕೋರ್ಟ್‌ನ ನ್ಯಾಯಮೂರ್ತಿ ಅಮೃತಾ ಸಿನ್ಹಾ ಅವರು ಏಜೆನ್ಸಿಗಳಿಗೆ ಅನುಮತಿ ನೀಡಿದರು. ಬ್ಯಾನರ್ಜಿ ಮೇಲೆ ಆರೋಪ ಮಾಡುವಂತೆ ತನಿಖಾಧಿಕಾರಿಗಳು ತಮ್ಮ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

2019ರಲ್ಲಿ, ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಬದಲಿಗೆ ಹಣ ನೀಡಿದ ಅಭ್ಯರ್ಥಿಗಳಿಗೆ ಉದ್ಯೋಗಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಪಾರ್ಥ ಚಟರ್ಜಿ ಸೇರಿದಂತೆ ರಾಜ್ಯ ಶಿಕ್ಷಣ ಇಲಾಖೆಯ 12 ಅಧಿಕಾರಿಗಳನ್ನು ಬಂಧಿಸಲಾಗಿದೆ.

ಏಪ್ರಿಲ್ 13ರಂದು, ಹೈಕೋರ್ಟ್‌ನ ನ್ಯಾಯಮೂರ್ತಿ ಅಭಿಜಿತ್ ಗಂಗೋಪಾಧ್ಯಾಯ ಅವರು ಪ್ರಕರಣದಲ್ಲಿ ಬ್ಯಾನರ್ಜಿ ಅವರನ್ನು ಪ್ರಶ್ನಿಸಲು ಎರಡು ಕೇಂದ್ರೀಯ ಸಂಸ್ಥೆಗಳಿಗೆ ಸೂಚಿಸಿದ್ದರು. ಈ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಬ್ಯಾನರ್ಜಿ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಸಿಎಂ ಆಯ್ಕೆ ಕಗ್ಗಂಟು ಪರಿಹರಿಸಿದ ಕಾಂಗ್ರೆಸ್ ಹೈಕಮಾಂಡ್‌ಗೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಜಂಜಾಟ ಶುರು

ಏಪ್ರಿಲ್ 17ರಂದು ಸುಪ್ರೀಂ ಕೋರ್ಟ್ ಆದೇಶಕ್ಕೆ ತಡೆ ನೀಡಿತ್ತು. ಏಪ್ರಿಲ್ 28 ರಂದು, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರ ಪೀಠದಿಂದ ಬೇರೆ ಯಾವುದಾದರೂ ಪೀಠಕ್ಕೆ ಪ್ರಕರಣವನ್ನು ಮರು ನಿಯೋಜಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಆದೇಶ ನೀಡಿತು.

ಗುರುವಾರ, ನ್ಯಾಯಮೂರ್ತಿ ಸಿನ್ಹಾ ಅವರು ಬ್ಯಾನರ್ಜಿ ಮತ್ತು ಘೋಷ್ ಇಬ್ಬರಿಗೂ 25 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ನಿಧಾನಗತಿಯ ತನಿಖೆಗಾಗಿ ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯ ಎರಡಕ್ಕೂ ಹೈಕೋರ್ಟ್ ಛೀಮಾರಿ ಹಾಕಿದೆ.

”ಮುಚ್ಚಿದ ಲಕೋಟೆಗಳಲ್ಲಿ ಏನನ್ನು ಉಲ್ಲೇಖಿಸಲಾಗಿದೆಯೋ ಅದು ಹಳೆಯ ವಿಚಾರ” ಎಂದು ನ್ಯಾಯಮೂರ್ತಿ ಸಿನ್ಹಾ ಹೇಳಿದರು. ”ಏಜೆನ್ಸಿಗಳು 2022ರಲ್ಲಿ ಏನಾಯಿತು ಎಂಬುದರ ವಿವರಗಳನ್ನು ನೀಡಿವೆ ಆದರೆ ನಾವು 2023 ರಲ್ಲಿ ಇದ್ದೇವೆ. ಈ ಲಕೋಟೆಗಳಲ್ಲಿ ಯಾವುದೇ ಹೊಸ ಮತ್ತು ಇತ್ತೀಚಿನ ಬೆಳವಣಿಗೆಯನ್ನು ಉಲ್ಲೇಖಿಸಲಾಗಿಲ್ಲ. ಪುರಾವೆಗಳು ಕಣ್ಮರೆಯಾಗುವುದನ್ನು ಏಜೆನ್ಸಿಗಳು ಕಾಯುತ್ತಿವೆಯೇ?” ಎಂದು ಪ್ರಶ್ನೆ ಮಾಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ನೀಡುವ ಪ್ರಯತ್ನ ಬೆಂಬಲಿಸಿದ ಭಾರತ

0
ವಿಶ್ವಸಂಸ್ಥೆಯ ಸಂಪೂರ್ಣ ಸದಸ್ಯತ್ವ ಪಡೆಯುವ ಪ್ಯಾಲೆಸ್ತೀನ್‌ನ ಮನವಿಯನ್ನು ಮರು ಪರಿಶೀಲಿಸಿ ಅನುಮೋದಿಸುವ ವಿಶ್ವಾಸವಿದೆ ಎಂದು ಭಾರತ ಬುಧವಾರ ಹೇಳಿದೆ. ಈ ಮೂಲಕ ಪ್ಯಾಲೆಸ್ತೀನ್‌ ವಿಶ್ವಸಂಸ್ಥೆಯ ಪೂರ್ಣ ಸದಸ್ಯತ್ವ ಪಡೆಯುವುದಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಇಸ್ರೇಲ್ ಮತ್ತು...