Homeಮುಖಪುಟಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕು ಚೆಲ್ಲಿದ ಶಿಕ್ಷಕಿ

- Advertisement -
- Advertisement -

ಉತ್ತರಪ್ರದೇಶದಲ್ಲಿ ಶಿಕ್ಷಕಿಯೋರ್ವಳ ಸಾಹಸ, ಪರಿಶ್ರಮ 40 ಬುಡಕಟ್ಟು ಮಕ್ಕಳ ಜೀವನದಲ್ಲಿ ಶಿಕ್ಷಣದ ಬೆಳಕನ್ನು ಚೆಲ್ಲಿದೆ. ಸರ್ಕಾರಿ ಶಾಲೆಯ ಶಿಕ್ಷಕಿ ಸೀತಾ ತ್ರಿವೇದಿ  40 ಅಲೆಮಾರಿ ಬುಡಕಟ್ಟು ಮಕ್ಕಳನ್ನು ಭಿಕ್ಷಾಟನೆಯಿಂದ ರಕ್ಷಿಸಿ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದು, ಶಿಕ್ಷಕಿಯ ಕಾರ್ಯಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದೆ.

ಉತ್ತರಪ್ರದೇಶದ ಬಜೇರಾ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕಿ ಸೀತಾ ತ್ರಿವೇದಿ ಅವರು ಶಿಕ್ಷಣ ವಂಚಿತ ಕಲಬಾಜ್ ಸಮುದಾಯಕ್ಕೆ ಸೇರಿದ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಅವರ ಪೋಷಕರಿಗೆ ಮನವರಿಕೆ ಮಾಡಿ ಅವರ ವಾರ್ಡ್‌ಗಳಲ್ಲಿನ ಶಾಲೆಗೆ ಮಕ್ಕಳನ್ನು ಸೇರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಜೇರಾ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ತ್ರಿವೇದಿ ಅವರಿಗೆ ಕೆಲವು ವರ್ಷಗಳ ಹಿಂದೆ ಮಕ್ಕಳ ಗಣತಿಯನ್ನು ನಡೆಸುವ ಕೆಲಸವನ್ನು ನೀಡಲಾಗಿತ್ತು. ಸಮೀಕ್ಷೆಗಾಗಿ ಸಮೀಪದ ಗ್ರಾಮಕ್ಕೆ ಭೇಟಿ ನೀಡಿದಾಗ ಸ್ಥಳೀಯರು ಶಿಕ್ಷಕಿಯನ್ನು ಕಲಬಾಜ್ ಸಮುದಾಯದವರ ಮನೆಗಳಿಗೆ ಹೋಗದಂತೆ ತಡೆದಿದ್ದಾರೆ. ಆದರೆ ಅವರು ತನ್ನ ಕಾರ್ಯವನ್ನು ಮುಂದುವರಿಸಿದ್ದರು. ಈ ವೇಳೆ ಅವರು ಕಲಬಾಜ್‌ ಸಮುದಾಯಕ್ಕೆ ಸೇರಿದ ಯಾವುದೇ ಮಕ್ಕಳು ಶಾಲೆಗೆ ಹೋಗುವುದಿಲ್ಲ ಮತ್ತು ಅವರು ಕಟುಂಬದ ಜೀವನೋಪಾಯಕ್ಕಾಗಿ ಭಿಕ್ಷೆ ಬೇಡುವ  ಕೆಲಸವನ್ನು ಮಾಡುತ್ತಾರೆ ಎಂದು ಕಂಡುಕೊಂಡಿದ್ದಾರೆ ಮತ್ತು ಮಕ್ಕಳನ್ನು ಶಾಲೆಗೆ ಸೇರಿಸುವ ಸಾಹಸಕ್ಕೆ ಮುಂದಾಗಿದ್ದಾರೆ. ತ್ರಿವೇದಿ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರಯತ್ನಿಸುತ್ತಿದ್ದಂತೆ ಕಲಬಾಜ್ ಸಮುದಾಯ ಹಿರಿಯರು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಶಿಕ್ಷಕಿ ಸೀತಾ ತ್ರಿವೇದಿ, ನಾನು ಪ್ರತಿ ಮನೆಗೆ ಭೇಟಿ ನೀಡಿ ಹಿರಿಯರಿಗೆ ಶಿಕ್ಷಣದ ಮಹತ್ವದ ಬಗ್ಗೆ ಹೇಳಿದ್ದೇನೆ. ಬುಡಕಟ್ಟು ಸಮುದಾಯದ ಮಕ್ಕಳು ಶಿಕ್ಷಣ ಪಡೆದ ನಂತರ ಅಧಿಕಾರಿಗಳು ಮತ್ತು ಯಶಸ್ವಿ ಉದ್ಯಮಿಗಳಾಗಿರುವ ಕಥೆಗಳನ್ನು ನಾನು ಅವರಿಗೆ ಹೇಳಿದ್ದೇನೆ. ಇದು ಅವರ ಮೇಲೆ ಪರಿಣಾಮ ಬೀರಿತು ಮತ್ತು ಅವರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ಪ್ರಾರಂಭಿಸಿದರು ಎಂದು ನೆನಪಿಸಿಕೊಂಡಿದ್ದಾರೆ.

ಶಾಲೆಗೆ ಮಕ್ಕಳನ್ನು ಸೇರಿಸಿದಾಗ ಎದುರಾಗಿದ್ದ ಸಮಸ್ಯೆ!

ಕಲಬಾಜ್ ಸಮುದಾಯದ 40 ಮಕ್ಕಳನ್ನು ಮನವೊಲಿಕೆ ಮಾಡಿ ಸೀತಾ ತ್ರಿವೇದಿ ಶಾಲೆಗೆ ದಾಖಲು ಮಾಡಿದ್ದಾರೆ. ಮಕ್ಕಳನ್ನು ದಾಖಲಿಸಿಕೊಂಡರೂ, ಇತರ ಸಮುದಾಯದ ವಿದ್ಯಾರ್ಥಿಗಳು ಅವರನ್ನು ಸ್ವೀಕರಿಸಲು ಸಿದ್ಧರಿಲ್ಲದ ಕಾರಣ ತ್ರಿವೇದಿಗೆ ಮತ್ತೊಂದು ಸವಾಲು ಎದುರಾಗಿತ್ತು. ಕಲಾಬಾಜ್ ಸಮುದಾಯದ ಮಕ್ಕಳೊಂದಿಗೆ ಇತರ ಸಮುದಾಯದ ಮಕ್ಕಳು ಮಧ್ಯಾಹ್ನದ ಊಟಕ್ಕೆ ಕುಳಿತುಕೊಳ್ಳದಿರುವುದನ್ನು ನಾನು ಗಮನಿಸಿದ್ದೇನೆ. ನಾನು ಇತರ ಮಕ್ಕಳ ಪೋಷಕರನ್ನು ಕರೆದು ಕಲಬಾಜ್ ಸಮುದಾಯದ ಮಕ್ಕಳ ಬಗ್ಗೆ ತಾರತಮ್ಯ ಮಾಡದಂತೆ ಕೇಳಿಕೊಂಡಿದ್ದೇನೆ.  ಪೋಷಕರ ಸಹಕಾರದಿಂದ ಈ ಸಮಸ್ಯೆಗೆ ಪರಿಹಾರವಾಗಿತ್ತು. ಪೋಷಕರ ಬಳಿ ಸಾಕಷ್ಟು ಹಣವಿಲ್ಲದ ಕಾರಣ ಈ ಮಕ್ಕಳಿಗೆ ಬಟ್ಟೆ ಮತ್ತು ಪುಸ್ತಕಗಳನ್ನು ಆಗಾಗ್ಗೆ ಖರೀದಿಸಿ ನಾನು ಕೊಡುತ್ತಿದ್ದೇನೆ ಎಂದು ತ್ರಿವೇದಿ ಹೇಳಿದ್ದಾರೆ.

ಸೀತಾ ತ್ರಿವೇದಿ ಅವರ ಈ ಕೆಲಸಕ್ಕೆ ವ್ಯಾಪಕವಾದ ಮೆಚ್ಚುಗೆ ವ್ಯಕ್ತವಾಗಿದ್ದು, ತ್ರಿವೇದಿಯವರ ಪ್ರಯತ್ನ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಶ್ಲಾಘಿಸಿದ್ದಾರೆ. ಈ ಮಕ್ಕಳು ಸಮಾಜದ ಹಿತದೃಷ್ಟಿಯಿಂದ ಮುಂದೆ ಸಾಗುತ್ತಾರೆ ಮತ್ತು ಶಿಕ್ಷಣ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ರೀತಿಯ ಪ್ರಯತ್ನಗಳ ಮೂಲಕ ಜಾತಿ ಆಧಾರಿತ ತಾರತಮ್ಯ ಕೂಡ ಕೊನೆಗೊಳ್ಳುತ್ತವೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿದ  ಶಿಕ್ಷಾ ಅಧಿಕಾರಿ ರಣವೀರ್ ಸಿಂಗ್ ಅವರು, ಶಿಕ್ಷಕಿಯೋರ್ವರು ಮಾಡಿದ ಪ್ರಯತ್ನಗಳನ್ನು ಗಮನಿಸಿದ್ದೇವೆ. ಶಿಕ್ಷಕರ ಪ್ರಯತ್ನ ಶ್ಲಾಘನೀಯವಾಗಿದ್ದು, ಜಿಲ್ಲೆಯ ಒಂದೇ ಒಂದು ಮಗು ಶಾಲೆಯಿಂದ ದೂರ ಉಳಿಯದಂತೆ ಇತರೆ ಶಾಲೆಗಳಲ್ಲೂ ಇಂತಹ ಪ್ರಯತ್ನ ನಡೆಯಲಿ ಎಂದು ಆಶಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬಾಜ್ ಸಮುದಾಯ

16ನೇ ಶತಮಾನದಲ್ಲಿ ಮೊಘಲ್ ಸಾಮ್ರಾಜ್ಯದ ಅಡಳಿತದ ಸಮಯದಲ್ಲಿ ಉತ್ತರ ಪ್ರದೇಶಕ್ಕೆ ವಲಸೆ ಬಂದವರು ಕಲಾಬಾಜ್ ಜನರು. ಇವರು ಮೂಲತಃ ರಜಪೂತರು ಎಂದು ಹೇಳುತ್ತಾರೆ. ಈ ಸಮುದಾಯದ ಹೆಚ್ಚಿನ ಉತ್ತರ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಅವರು ಅಲೆಮಾರಿ ಸಮುದಾಯವಾಗಿದ್ದರು,  ಹಿಂದಿ ಮಾತನಾಡುತ್ತಾರೆ ಆದರೆ ತಮ್ಮದೇ ಆದ ನಿರ್ದಿಷ್ಟ ಉಪಭಾಷೆಯನ್ನು ಹೊಂದಿದ್ದಾರೆ.

ಇವರಲ್ಲಿ ಹೆಚ್ಚಿನವರು ಭೂರಹಿತರಾಗಿದ್ದಾರೆ. ಅದ್ಭುತವಾದ ಜಿಮ್ನಾಸ್ಟಿಕ್ ಸಾಹಸ, ಜಾನುವಾರುಗಳನ್ನು ನೋಡಿಕೊಳ್ಳುವುದು ಅಥವಾ ಬೈಸಿಕಲ್‌ಗಳನ್ನು ದುರಸ್ತಿ ಮಾಡುವುದು. ಕೆಲವರು ದಿನಗೂಲಿಗಳಾಗಿ ಕೂಡ ಕೆಲಸ ಮಾಡುತ್ತಾರೆ. ಹೆಚ್ಚಿನವರು ಬಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದಾರೆ.  2011ರ ಜನಗಣತಿಯು ಉತ್ತರಪ್ರದೇಶದಲ್ಲಿ ಕಲಾಬಾಜ್ ಸಮುದಾಯದ 11,199 ಜನರಿದ್ದಾರೆ ಎಂದು ಹೇಳಿದೆ. ಈ ಸಮುದಾಯವು ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದೆ.

ಇದನ್ನು ಓದಿ:ಎಐಸಿಸಿ ಸೆಂಟ್ರಲ್‌ ವಾರ್‌ರೂಂ ಅಧ್ಯಕ್ಷರಾಗಿ ಶಶಿಕಾಂತ್‌ ಸೆಂಥಿಲ್‌ ನೇಮಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...