Homeಮುಖಪುಟಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

ಶಿಕ್ಷಕರ ಹಗರಣ | ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ಸರ್ಕಾರಿ ಶಾಲೆಯ ಶಿಕ್ಷಕರು

- Advertisement -
- Advertisement -

ಸರ್ಕಾರಿ ಶಾಲೆಗಳ ಶಿಕ್ಷಕರು ಅಮೆರಿಕ, ಕೆನಡಾದಲ್ಲಿದ್ದುಕೊಂಡು ವೇತನ ಪಡೆಯುತ್ತಿರುವ ದೊಡ್ಡ ಹಗರಣವೊಂದು ಗುಜರಾತ್‌ನಲ್ಲಿ ಬೆಳಕಿಗೆ ಬಂದಿದೆ.

ದಾಖಲೆಗಳ ಪ್ರಕಾರ, ದಂತಾ ತಾಲೂಕಿನ ಪಂಛಾ ಗ್ರಾಮದ ನಿವಾಸಿಯಾಗಿರುವ ಭಾವನಾ ಪಟೇಲ್ ಬನಸ್ಕಾಂತ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ವಾಸ್ತವವಾಗಿ ಅವರು ಅಮೆರಿಕದಲ್ಲಿ ವಾಸವಾಗಿದ್ದಾರೆ. ಪ್ರತಿ ತಿಂಗಳ ವೇತನ ಅವರ ಖಾತೆಗೆ ಜಮೆ ಆಗುತ್ತಿದೆ. ಅವರು ವರ್ಷಕ್ಕೊಮ್ಮೆ ದೀಪಾವಳಿಗೆ ಮಾತ್ರ ಗ್ರಾಮಕ್ಕೆ ಆಗಮಿಸುತ್ತಾರೆ ಎಂದು newindianexpress.com ವರದಿ ಮಾಡಿದೆ.

ಶಾಲೆಯ ಪ್ರಾಂಶುಪಾಲರು, ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ, ಶಿಕ್ಷಣ ಇಲಾಖೆ ಹಾಗೂ ಶಿಕ್ಷಣ ಸಚಿವರಿಗೆ ಪತ್ರ ಬರೆದು ಎಚ್ಚರಿಸಿದ ಬಳಿಕ ಭಾವನಾ ಪಟೇಲ್ ಅವರ ಕಳ್ಳಾಟ ಬೆಳಕಿಗೆ ಬಂದಿದೆ. ಬಳಿಕ ಶಿಕ್ಷಣ ಇಲಾಖೆ ತನಿಖೆಗೆ ಆದೇಶಿಸಿದೆ ಎಂದು ವರದಿ ಹೇಳಿದೆ.

ಕಪಡ್‌ವಂಜ್ ಮತ್ತು ವಾವ್ ತಾಲೂಕುಗಳಲ್ಲಿ ಇದೇ ರೀತಿಯ ಮತ್ತೆರಡು ಪ್ರಕರಣಗಳು ಬೆಳಕಿಗೆ ಬಂದಿವೆ. ಕಪಡ್‌ವಂಜ್‌ನ ವಾಟಾ ಶಿವಪುರ ಪ್ರಾಥಮಿಕ ಶಾಲೆಯ ಶಿಕ್ಷಕ ಆಶಿಶ್ ಪಟೇಲ್ ಹಾಗೂ ವಾವ್‌ನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಕೆಲ ತಿಂಗಳಿನಿಂದ ನಿರಂತರ ಕೆಲಸಕ್ಕೆ ಗೈರಾಗುತ್ತಿರುವುದು ಪತ್ತೆಯಾಗಿದೆ. ಆದರೆ, ಇಬ್ಬರೂ ತಿಂಗಳ ವೇತನ ಪಡೆಯುತ್ತಿದ್ದಾರೆ. ಆಶಿಶ್ ಪಟೇಲ್ ಅವರ ಬದಲಿಗೆ ವಿಜಯ್ ಎಂಬ ಹೆಸರಿನ ನಕಲಿ ಶಿಕ್ಷಕನೋರ್ವ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವುದು ಗೊತ್ತಾಗಿದೆ.

ಮಾಧ್ಯಮದವರು ಶಾಲೆಗೆ ಭೇಟಿ ನೀಡಿದಾಗ ವಿಜಯ್ ಅಲ್ಲಿಂದ ಪರಾರಿಯಾದ್ದಾನೆ. ಶಾಲೆಯ ಪ್ರಾಂಶುಪಾಲ ಅರ್ಜನ್ ರಾಥೋಡ್ ಈ ಬಗ್ಗೆ ನಿರ್ಲಕ್ಷ್ಯ ವಹಿಸಿರುವುದನ್ನು ಒಪ್ಪಿಕೊಂಡಿದ್ದಾರೆ. ಈ ವಿಷಯ ತಿಳಿದ ಬಳಿಕ ಕಪಡ್‌ವಂಜ್ ತಾಲೂಕು ಅಭಿವೃದ್ದಿ ಅಧಿಕಾರಿ ಮಹಿಪತ್ ಚೌಹಾನ್ ತನಿಖೆಗೆ ಆದೇಶಿಸಿದ್ದಾರೆ ಎಂದು newindianexpress.com ವರದಿ ತಿಳಿಸಿದೆ.

ವಾವ್ ತಾಲೂಕಿನ ಉಚ್ಚಾ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕ ದರ್ಶನ್ ಪಟೇಲ್ ಕಳೆದ ಎರಡು ವರ್ಷಗಳಿಂದ ಕೆನಡಾದಲ್ಲಿ ವಾಸಿಸುತ್ತಿದ್ದಾರೆ. ಆದರೆ, ವೇತನ ಪಟ್ಟಿಯಲ್ಲಿ ಅವರ ಹೆಸರು ಈಗಲೂ ಇದೆ. ಶಿಕ್ಷಣ ಇಲಾಖೆಯಲ್ಲಿರುವ ಅಧಿಕಾರಿಗಳು ಅವರಿಗೆ ಬೆಂಬಲ ನೀಡುತ್ತಿರುವುದರಿಂದ ದರ್ಶನ್ ವಿರುದ್ದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಅಧಿಕೃತ ರಜೆ ಇಲ್ಲದಿದ್ದರೂ, ಪುನರಾವರ್ತಿತ ಸೂಚನೆ ನೀಡಿದ ಹೊರತಾಗಿಯೂ ಪಟೇಲ್ 2022ರ ನವೆಂಬರ್ 10ರಿಂದ ಗೈರು ಹಾಜರಾಗಿದ್ದಾರೆ ಎಂದು ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಪ್ರಾಂಶುಪಾಲ ಬಿಬಿ ಬರೋಟ್ ಹೇಳಿದ್ದಾರೆ.

ಇನ್ನು ಮೆಹ್ಸಾನ ಜಿಲ್ಲೆಯ ಕಾಡಿ ತಾಲೂಕಿನ ರಾಂಚೋಡ್ಪುರ ಗ್ರಾಮದ ಪ್ರಾಥಮಿಕ ಶಾಲಾ ಶಿಕ್ಷಕ ಕವಿತಾ ದಾಸ್ ಕಳೆದ 9 ತಿಂಗಳಿನಿಂದ ಶಾಲೆಗೆ ಬಂದಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಹ್ಸಾನ ಜಿಲ್ಲೆಯ ಪ್ರಾಥಮಿಕ ಶಿಕ್ಷಣ ಅಧಿಕಾರಿ ಡಾ. ಶರದ್ ತ್ರಿವೇದಿ “ರಾಂಚೋಡ್ಪುರ ಪ್ರಾಥಮಿಕ ಶಾಲೆಯ ಶಿಕ್ಷಕಿ ಕವಿತಾ ದಾಸ್ ಅವರು ಶಿಕ್ಷಣ ಇಲಾಖೆಯ ಅನುಮತಿ ಪಡೆದುಕೊಂಡು ವಿದೇಶಕ್ಕೆ ತೆರಳಿದ್ದಾರೆ. ಅವರಿಗೆ ಎರಡು ಬಾರಿ ನೋಟಿಸ್ ನೀಡಲಾಗಿದೆ. ಅವರು ಈ ನೋಟಿಸ್‌ಗೆ ಪ್ರತಿಕ್ರಿಯೆ ನೀಡದಿದ್ದರೆ, ನಿಯಮಗಳ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾಗಿ ವರದಿ ಹೇಳಿದೆ.

ಈ ಕುರಿತು ಮಾತನಾಡುವಾಗ ಕೇಂದ್ರ ಶಿಕ್ಷಣ ಖಾತೆ ರಾಜ್ಯ ಸಚಿವ ಪ್ರಫುಲ್ಲ ಪನ್ಸೇರಿಯಾ ಅವರು ರಕ್ಷಣಾತ್ಮಕ ಮಾತುಗಳನ್ನಾಡಿದ್ದಾರೆ. “ವಿದೇಶದಲ್ಲಿ ನೆಲೆಸಿರುವ ಶಿಕ್ಷಕರಿಗೆ 2024ರ ಜನವರಿ 1ರಿಂದ ವೇತನ ಪಾವತಿಯಾಗಿಲ್ಲ. ಶಿಕ್ಷಕರು ಮಧ್ಯಂತರ ರಜೆಯಲ್ಲಿದ್ದಾರೆ. ಪರಿಸ್ಥಿತಿ ಅವಲೋಕಿಸಿ ಸೂಕ್ತ ಕ್ರಮಕೈಗೊಳ್ಳಲು ವಿಚಾರಣೆ ನಡೆಸಲಾಗುವುದು” ಎಂದಿದ್ದಾರೆ.

ರಾಜ್ಯ ಸರ್ಕಾರದ ವಕ್ತಾರ ಸಚಿವ ರಿಷಿಕೇಶ್ ಪಟೇಲ್ ಮಾತನಾಡಿ “ಈ ಬಗ್ಗೆ ನಾವು ಸಂಪೂರ್ಣ ತನಿಖೆ ನಡೆಸುತ್ತೇವೆ. ಪಾಸ್‌ಪೋರ್ಟ್ ಕಚೇರಿ ದಾಖಲೆಗಳಿಂದ ಹಿಡಿದು ಹಾಜರಾತಿ ಶೀಟ್‌ಗಳವರೆಗೆ ಎಲ್ಲವನ್ನೂ ಪರಿಶೀಲಿಸುತ್ತೇವೆ. ಈ ವಿಷಯವು ಸಂಪೂರ್ಣ ಪಾರದರ್ಶಕವಾಗಿರುತ್ತದೆ ಮತ್ತು ಸಮಗ್ರ ತನಿಖೆ ನಡೆಸಲಾಗುವುದು” ಎಂದು ಹೇಳಿದ್ದಾರೆ.

ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ : ಕಾಂಗ್ರೆಸ್ ಕಿಡಿ

”ಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ದೊಡ್ಡ ಹಗರಣದ ಬಗ್ಗೆ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ವಿದೇಶದಲ್ಲಿ ನೆಲೆಸಿರುವ (ಯುಎಸ್ ಮತ್ತು ಕೆನಡಾ) ಶಾಲಾ ಶಿಕ್ಷಕರು ವೇತನ ಪಡೆಯುತ್ತಲೇ ಇದ್ದಾರೆ” ಎಂದು ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಹೇಳಿದ್ದಾರೆ.

ಇದನ್ನೂ ಓದಿ : ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...