Homeಮುಖಪುಟ32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

32,000 ಮಹಿಳೆಯರು ಐಎಸ್‌ಐಎಸ್ ಸೇರಿದ್ದಾರೆಂಬ ಟೀಸರ್‌ ತೆರವು ಮಾಡಲಾಗುವುದು: ‘ದಿ ಕೇರಳ ಸ್ಟೋರಿ’ ನಿರ್ಮಾಪಕ

- Advertisement -
- Advertisement -

ಕೇರಳದಲ್ಲಿ 32,000ಕ್ಕೂ ಹೆಚ್ಚು ಮಹಿಳೆಯರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ (ಐಎಸ್‌ಐಎಸ್‌) ಸೇರಿಸಿಕೊಳ್ಳಲಾಗಿದೆ ಎಂದು ಪ್ರತಿಪಾದಿಸಿರುವ ಟೀಸರ್ ಅನ್ನು ತೆಗೆದುಹಾಕುವುದಾಗಿ ‘ದಿ ಕೇರಳ ಸ್ಟೋರಿ’ ಸಿನಿಮಾ ನಿರ್ಮಾಕರು ಶುಕ್ರವಾರ ಕೇರಳ ಹೈಕೋರ್ಟ್‌ಗೆ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ.

ನವೆಂಬರ್‌ನಲ್ಲಿ ಟೀಸರ್‌ ಬಿಡುಗಡೆಯಾಗಿತ್ತು. ಸುಮಾರು 32,000 ಮಹಿಳೆಯರನ್ನು ಮತಾಂತರಿಸಿ, ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಲಾಗಿದೆ ಎಂದು ಟೀಸರ್‌ನಲ್ಲಿ ಪ್ರತಿಪಾದಿಸಲಾಯಿತು. ಆದರೆ ಸಾಕ್ಷ್ಯವನ್ನು ನೀಡಲು ಚಿತ್ರತಂಡ ವಿಫಲವಾಗಿದೆ. “ಮೂವರು ಯುವತಿಯರ ನೈಜ ಕಥೆ ಇದಾಗಿದೆ” ಎಂದು ಚಿತ್ರದ ಟ್ರೈಲರ್‌ನಲ್ಲಿ ಬಿಂಬಿಸಲಾಗಿದೆ.

ಸುದೀಪ್ತೋ ಸೇನ್ ನಿರ್ದೇಶನದ ‘ಕೇರಳ ಸ್ಟೋರಿ’ ಶುಕ್ರವಾರ ಬಿಡುಗಡೆಯಾಗಿದೆ.

ಈ ಸಿನಿಮಾ ಪ್ರದರ್ಶನಕ್ಕೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ಶುಕ್ರವಾರ ಹೈಕೋರ್ಟ್‌ನಲ್ಲಿ ನಡೆಯಿತು. ಚಿತ್ರದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷದ ಮಾತುಗಳನ್ನು ಪ್ರಚಾರ ಮಾಡಲಾಗಿದೆ ಎಂದು ಅರ್ಜಿದಾರರು ವಾದಿಸಿದರು. ಆದರೆ “ಈ ಸಿನಿಮಾ ನಿಜವಾದ ಘಟನೆಗಳಿಂದ ಪ್ರೇರಿತವಾಗಿದೆ” ಎಂದು ಮಾತ್ರ ಚಿತ್ರತಂಡ ಹೇಳಿರುವುದನ್ನು ಗಮನಿಸಿದ ನ್ಯಾಯಾಲಯವು ಚಿತ್ರದ ಬಿಡುಗಡೆಗೆ ತಡೆಯಾಜ್ಞೆ ನೀಡಲು ನಿರಾಕರಿಸಿತು.

ನ್ಯಾಯಮೂರ್ತಿ ಎನ್ ನಾಗರೇಶ್ ಮತ್ತು ನ್ಯಾಯಮೂರ್ತಿ ಸೋಫಿ ಥಾಮಸ್ ಅವರನ್ನೊಳಗೊಂಡ ವಿಭಾಗೀಯ ಪೀಠವು, “ಹಿಂದೂ ಪಾತ್ರಗಳನ್ನು ನಕಾರಾತ್ಮಕವಾಗಿ ಚಿತ್ರಿಸಿದ ಇತರ ಹಲವಾರು ಚಲನಚಿತ್ರಗಳಿವೆ” ಎಂದು ಹೇಳಿದೆ.

“ಹಿಂದೂ ಸನ್ಯಾಸಿಗಳನ್ನು ಕಳ್ಳಸಾಗಾಣಿಕೆದಾರರು ಮತ್ತು ಅತ್ಯಾಚಾರಿಗಳನ್ನಾಗಿ ತೋರಿಸಿರುವ ಅನೇಕ ಚಲನಚಿತ್ರಗಳಿವೆ” ಎಂದು ನ್ಯಾಯಮೂರ್ತಿ ನಾಗರೇಶ್ ಮೌಖಿಕವಾಗಿ ತಿಳಿಸಿದ್ದಾರೆ ಎಂದು ‘ಲೈವ್ ಲಾ’ ವರದಿ ಮಾಡಿದೆ. “ಯಾರೂ ಏನನ್ನೂ ಹೇಳುವುದಿಲ್ಲ. ಇಂತಹ ಸಿನಿಮಾಗಳನ್ನು ನೀವು ಹಿಂದಿ ಮತ್ತು ಮಲಯಾಳಂನಲ್ಲಿ ನೋಡಿರಬಹುದು. ಕೇರಳದಲ್ಲಿ ನಾವು ಜಾತ್ಯತೀತರು” ಎಂದಿದ್ದಾರೆ.

ಆದಾಗ್ಯೂ, 32,000 ಮಹಿಳೆಯರ ಮತಾಂತರದ ವಿಷಯ ಹೇಗೆ ಬಂದಿದೆ ಎಂದು ನ್ಯಾಯಮೂರ್ತಿ ನಾಗರೇಶ್ ಚಿತ್ರದ ನಿರ್ಮಾಪಕರ ವಕೀಲರನ್ನು ಪ್ರಶ್ನಿಸಿದರು. “ಸಿನಿಮಾ ನಿರ್ಮಾಪಕರು ಪಡೆದಿರುವ ಮಾಹಿತಿಯನ್ನು ಇದು ಆಧರಿಸಿದೆ” ಎಂದು ಪ್ರತಿಕ್ರಿಯಿಸಿರುವ ವಕೀಲರು, “ಟ್ರೇಲರ್‌ನಲ್ಲಿ ಇದನ್ನು ತೆಗೆದುಹಾಕಲಾವುದು” ಎಂದು ಒಪ್ಪಿಕೊಂಡರು.

ಸಿನಿಮಾ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಲು ನಿರಾಕರಿಸಿತು. “ಚಲನಚಿತ್ರದ ನಿರ್ಮಾಪಕರು ಈ ಸಿನಿಮಾಕ್ಕೆ ಹಣವನ್ನು ಸುರಿದಿದ್ದಾರೆ, ನಟರ ಪರಿಶ್ರಮದ ಬಗ್ಗೆಯೂ ಅರ್ಜಿದಾರರು ಯೋಚಿಸಬೇಕು” ಎಂದಿತು.

ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯವರು ಈ ಸಿನಿಮಾವನ್ನು ರಾಜಕೀಯವಾಗಿ ಬಳಸಿಕೊಳ್ಳಲು ಯತ್ನಿಸಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ನಿಮಿತ್ತ ಬಳ್ಳಾರಿಯಲ್ಲಿ ನಡೆದ ಬಿಜೆಪಿ ರ್‍ಯಾಲಿಯಲ್ಲಿ ಮಾತನಾಡಿದ ಅವರು, “ದಕ್ಷಿಣ ರಾಜ್ಯದಲ್ಲಿ ಭಯೋತ್ಪಾದಕ ಪಿತೂರಿಗಳು ಇರುವುದನ್ನು ಕೇರಳ ಸ್ಟೋರಿ ಬಹಿರಂಗಪಡಿಸಿದೆ. ಭಯೋತ್ಪಾದಕ ಮನಸ್ಥಿತಿ ಹೊಂದಿರುವ ಜನರೊಂದಿಗೆ ಕಾಂಗ್ರೆಸ್ ರಹಸ್ಯವಾಗಿ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದರು.

‘ದಿ ಕೇರಳ ಸ್ಟೋರಿ’ಯನ್ನು ಮಧ್ಯಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗಿದೆ. ಮೋದಿಯವರ ಹೇಳಿಕೆಗಳ ನಂತರ, ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಶನಿವಾರ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ಘೋಷಿಸಿತು ಎಂದು ಪಿಟಿಐ ವರದಿ ಮಾಡಿದೆ.

ಒಂದು ಚಲನಚಿತ್ರವನ್ನು ತೆರಿಗೆ ಮುಕ್ತಗೊಳಿಸಿದಾಗ, ಅದರ ಮೇಲೆ ಮನರಂಜನಾ ತೆರಿಗೆಯನ್ನು ವಿಧಿಸಲಾಗುವುದಿಲ್ಲ, ಹೀಗಾಗಿ ಟಿಕೆಟ್ ದರ ಕಡಿಮೆಯಾಗುತ್ತದೆ. ಐತಿಹಾಸಿಕ ವಿಷಯಗಳನ್ನು ಒಳಗೊಂಡ ಅಥವಾ ಸಾಮಾಜಿಕ ಕಾರಣಗಳನ್ನು ಒಳಗೊಂಡ ಸಿನಿಮಾಗಳಿಗೆ ಮಾತ್ರ ತೆರಿಗೆ ವಿನಾಯಿತಿಯನ್ನು ಸರ್ಕಾರಗಳು ಸಾಮಾನ್ಯವಾಗಿ ನೀಡುತ್ತವೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರೊಪೊಗಾಂಡ ಸಿನಿಮಾಗಳಿಗೆ ತೆರಿಗೆ ವಿನಾಯಿತಿ ನೀಡಿರುವ ಉದಾಹರಣೆಗಳಿವೆ.

ಇದನ್ನೂ ಓದಿರಿ: ಚುನಾವಣಾ ಪ್ರಚಾರದಲ್ಲಿ ಕೋಮುದ್ವೇಷ ಭಾಷಣ: ಅಡ್ಡಂಡ ಕಾರ್ಯಪ್ಪ ವಿರುದ್ಧ ಎಫ್‌ಐಆರ್‌

“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನನ್ನು ಮಾಡಿದ್ದೇವೆ” ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಪಿಟಿಐಗೆ ತಿಳಿಸಿದ್ದಾರೆ. “ಈ ಚಿತ್ರವು ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ವೀಕ್ಷಿಸಬೇಕು” ಎಂದು ಮನವಿ ಮಾಡಿದ್ದಾರೆ.

‘ಲವ್ ಜಿಹಾದ್’, ಧಾರ್ಮಿಕ ಮತಾಂತರ ಮತ್ತು ಭಯೋತ್ಪಾದನೆಯ ಪಿತೂರಿಗಳನ್ನು ಸಿನಿಮಾ ಬಯಲಿಗೆಳೆಯುತ್ತದೆ ಎಂದು ಚೌಹಾಣ್ ಹೇಳಿದ್ದಾರೆ.

‘ಲವ್ ಜಿಹಾದ್’ ಎಂಬುದು ಹಿಂದುತ್ವವಾದಿಗಳು ಸೃಷ್ಟಿಸಿರುವ ಪಿತೂರಿ ಸಿದ್ಧಾಂತವಾಗಿದೆ. ಹಿಂದೂ ಯುವತಿಯರನ್ನು ಇಸ್ಲಾಂಗೆ ಮತಾಂತರಿಸಲು ಮುಸ್ಲಿಂ ಪುರುಷರು ಪ್ರೇಮದೊಳಗೆ ಸಿಲುಕಿಸುತ್ತಾರೆಂಬುದು ಈ ಪಿತೂರಿ ಸಿದ್ಧಾಂತದ ಸಾರಾಂಶವಾಗಿದೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಏಪ್ರಿಲ್ 30 ರಂದು ಪ್ರತಿಕ್ರಿಯಿಸಿ, ಈ ಸಿನಿಮಾದ ಮೂಲಕ ಕೇರಳ ರಾಜ್ಯವನ್ನು ಧಾರ್ಮಿಕ ಉಗ್ರವಾದದ ಕೇಂದ್ರವೆಂದು ಬಿಂಬಿಸಲು ಆರ್‌ಎಸ್‌ಎಸ್ ಯತ್ನಿಸಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...