Homeಮುಖಪುಟಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ...

ಟ್ರಾಫಿಕ್ ಪೊಲೀಸ್ ಜೊತೆ ವಾಗ್ವಾದದ ನಂತರ ಸಾಫ್ಟ್ ವೇರ್ ಉದ್ಯೋಗಿಯ ಮರಣ.. ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ಮೊದಲ ಬಲಿ??

- Advertisement -
- Advertisement -

ನೋಯ್ಡಾದ ಗಾಜಿಯಾಬಾದ್‌ನಲ್ಲಿ ರಸ್ತೆ ಸಂಚಾರ ಉಲ್ಲಂಘನೆಯ ವಿಚಾರಕ್ಕೆ ಸಂಚಾರ ಪೊಲೀಸರೊಂದಿಗೆ ವಾಗ್ವಾದ ನಡೆಸಿದ ನಂತರ 35 ವರ್ಷದ ಸಾಫ್ಟ್ ವೇರ್ ಉದ್ಯೋಗಿಯಾದ ತನ್ನ ಮಗ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ನಗರದ ನಿವಾಸಿಯೊಬ್ಬರು ಆರೋಪಿಸಿದ್ದಾರೆ.

ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ವಾಗ್ವಾದ ನಡೆಸಿದ ಸಂಚಾರ ಪೊಲೀಸ್ ಸಿಬ್ಬಂದಿ ಕೂಡ ಅದೇ ಜಿಲ್ಲೆಯವರು ಎಂದು ನೋಯ್ಡಾ ಪೊಲೀಸರು ತಿಳಿಸಿದ್ದಾರೆ.

“ಈ ಕುರಿತು ವಿಚಾರಣೆ ನಡೆಸುತ್ತಿದ್ದೇವೆ. ಆ ವ್ಯಕ್ತಿಯು ಮಧುಮೇಹ ಮತ್ತು ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ಬೆಳಕಿಗೆ ಬಂದಿದೆ. ಸಂಜೆ 6 ಗಂಟೆ ಸುಮಾರಿಗೆ ಗಾಜಿಯಾಬಾದ್ ಜಿಲ್ಲೆಯ ಸಿಐಎಸ್ಎಫ್ ಕಟ್ ಬಳಿ ಘಟನೆ ಸಂಭವಿಸಿದೆ. ಮಾಹಿತಿಯನ್ನು ಗಾಜಿಯಾಬಾದ್ ಪೊಲೀಸರಿಗೆ ತಲುಪಿಸಲಾಗಿದೆ” ಎಂದು ಗೌತಮ್ ಬುದ್ಧ ನಗರ ಎಸ್‌ಎಸ್‌ಪಿ ವೈಭವ್ ಕೃಷ್ಣ ಹೇಳಿದ್ದಾರೆ.

ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಈ ವ್ಯಕ್ತಿ ತನ್ನ ವಯಸ್ಸಾದ ಹೆತ್ತವರೊಂದಿಗೆ ತನ್ನ ಕಾರಿನಲ್ಲಿದ್ದಾಗ ಸಿಐಎಸ್ಎಫ್ ಕಟ್ ಬಳಿ ತಪಾಸಣೆ ನಡೆಸಲು ಟ್ರಾಫಿಕ್ ಪೊಲೀಸರು ತಡೆದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ವ್ಯಕ್ತಿಯ 65 ವರ್ಷದ ತಂದೆ ‘ಕಟ್ಟುನಿಟ್ಟಾದ ಹೊಸ ಮೋಟಾರು ವಾಹನ ಕಾಯ್ದೆ’ ಅಡಿಯಲ್ಲಿ ಪರಿಶೀಲಿಸುವ ಹೆಸರಿನಲ್ಲಿ ‘ಸಂಚಾರ ಪೊಲೀಸರು ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ’ ಎಂದು ಆರೋಪಿಸಿದ್ದಾರೆ. “ಯಾವುದಕ್ಕೂ ಒಂದು ರೀತಿ-ನೀತಿ ಇರಬೇಕು. ಸಂಚಾರ ನಿಯಮಗಳನ್ನು ಬದಲಾಯಿಸಲಾಗಿದೆ ಸರಿ. ಆದರೆ ಪೊಲೀಸರು ಸಭ್ಯರಾಗಿ ತಪಾಸಣೆ ನಡೆಸಬೇಕು. ಅದು ಬಿಟ್ಟು ಅಮಾನವೀಯವಾಗಿ ವರ್ತಿಸಬಾರದು. ನಾವು ಯಾವುದೇ ತಪ್ಪು ಮಾಡಿಲ್ಲ. ಆದರೂ ಕಾರಿನೊಳಗೆ ಇಬ್ಬರು ವೃದ್ಧರು ಕುಳಿತಿದ್ದರೂ ಸಹ ಪೊಲೀಸರು ಲಾಠಿಗಳಿಂದ ಕಾರಿಗೆ ಹೊಡೆದು ಭಯ ಹುಟ್ಟಿಸಿದರು. ಇದನ್ನು ಪ್ರಶ್ನಿಸಿದ್ದಕ್ಕೆ ಮತ್ತಷ್ಟು ಜೋರಾಗಿ ಬೈಯ್ದರು … ಇದು ಪರೀಕ್ಷಿಸುವ ವಿಧಾನವಲ್ಲ. ಈ ರೀತಿ ಮಾಡಲು ಅನುಮತಿಸುವ ಯಾವುದೇ ನಿಯಮವಿದೆ ಎಂದು ನಾನು ಭಾವಿಸುವುದಿಲ್ಲ” ಎಂದು ಮೃತ ವ್ಯಕ್ತಿಯ ತಂದೆ ಹೇಳಿದ್ದಾರೆ.

ಸೆಪ್ಟಂಬರ್ ನಿಂದ ಜಾರಿಗೆ ಬಂದಿರುವ ಹೊಸ ಮೋಟಾರು ವಾಹನ ತಿದ್ದುಪಡಿ ಕಾಯ್ದೆಗೆ ದೇಶದೆಲ್ಲೆಡೆ ತೀವ್ರ ವಿರೋಧ ಬಂದಿದೆ. ಈಗಾಗಲೇ ದಿನವೊಂದಕ್ಕೆ ಲಕ್ಷಾಂತರ ರೂ ದಂಡ ವಸೂಲಿಯಾಗುತ್ತಿದೆ ಎಂದು ವರದಿಗಳು ಹೇಳುತ್ತಿವೆ. ಇದನ್ನು ಹಿಂಪಡೆಯಬೇಕು, ಇಲ್ಲದಿದ್ದಲ್ಲಿ ತೈಲ ಸರಬರಾಜು ನಿಲ್ಲಿಸಿ ಪ್ರತಿಭಟಿಸಬೇಕಾಗುತ್ತದೆ ಎಂದು ಲಾರಿ ಮಾಲೀಕರ ಸಂಘ ಎಚ್ಚರಿಕೆ ಸಹ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...