Homeಕರೋನಾ ತಲ್ಲಣಜೂನ್‌ 21 ರಿಂದ ‘ಅನ್‌‌ಲಾಕ್‌‌-2.0’ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ?

ಜೂನ್‌ 21 ರಿಂದ ‘ಅನ್‌‌ಲಾಕ್‌‌-2.0’ ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಸಲಹೆ?

- Advertisement -
- Advertisement -

ಕೊರೊನಾ ಎರಡನೆ ಅಲೆಯ ಪ್ರಭಾವ ಕಡಿಮೆಯಾಗುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೆ ಲಾಕ್‌ಡೌನ್‌ ನಿರ್ಬಂಧಗಳು ಸಡಿಲಿಕೆಯಾಗಿದೆ. ಇದೀಗ ತಾಂತ್ರಿಕ ಸಲಹಾ ಸಮಿತಿಯು ಜೂನ್‌ 21 ರಿಂದ ಎರಡನೆ ಹಂತದ ಅನ್‌ಲಾಕ್‌ ಮಾಡಲು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ ಎಂದು ವರದಿಯಾಗಿದೆ.

ಜೂನ್‌ 21 ರ ನಂತರ ರಾಜ್ಯದಲ್ಲಿ ಮಾಲ್, ಹೋಟೆಲ್, ಚಿಕ್ಕ‌ಪುಟ್ಟ ಮಾರುಕಟ್ಟೆ, ಸೆಲೂನ್‌‌ ಅಂಗಡಿಗಳು ಮತ್ತು ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಲಾಗುವುದು. ಬಟ್ಟೆ ಅಂಗಡಿ ಸೇರಿದಂತೆ ಆಭರಣಗಳ ಅಂಗಡಿಗಳನ್ನು ಕೂಡಾ ದಿನದ 8 ಗಂಟೆಗಳ ಕಾಲ ತೆರೆದಿಡಲು ಅವಕಾಶ ನೀಡಲಾಗುತ್ತದೆ. ಹೋಟೆಲ್‌ ಹಾಗೂ ರೆಸ್ಟೋರೆಂಟ್‌‌ಗಳಲ್ಲಿ 50% ದಷ್ಟು ಸಾಮರ್ಥ್ಯದೊಂದಗೆ ಗ್ರಾಹಕರಿಗೆ ಅವಕಾಶ ನೀಡಲಾಗಿದೆ. ಜೊತೆಗೆ 50% ಪ್ರಯಾಣಿಕರೊಂದಿಗೆ ಬಸ್‌ ಸಂಚಾರ ಕೂಡಾ ಪ್ರಾರಂಭವಾಗಲಿದೆ ಎನ್ನಲಾಗಿದೆ.

ಇದನ್ನೂ ಓದಿ: ಜಗತ್ತಿಗೆ ಬೋಧಿಸುವುದನ್ನು ಭಾರತದಲ್ಲಿ ಪಾಲಿಸಿ: ಮೋದಿಗೆ ಪಿ. ಚಿದಂಬರಂ ತಿರುಗೇಟು

ಕಳೆದ ದಿನ ರಾಜ್ಯದಲ್ಲಿ 1.49 ಲಕ್ಷ ಪರೀಕ್ಷೆಗಳು ನಡೆಸಲಾಗಿದ್ದು, ಇದರಲ್ಲಿ 6,835 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮಂತ್ರಿ ಕೆ. ಸುಧಾಕರ್‌ ತಿಳಿಸಿದ್ದಾರೆ. ಈ ಪ್ರಕರಣಗಳೊಂದಿಗೆ ರಾಜ್ಯದ ಕೊರೊನಾ ಪಾಸಿಟಿವಿಟಿ ಪ್ರಮಾಣ 4.56% ರಷ್ಟಿದೆ ಎಂದು ಅವರು ತಿಳಿಸಿದ್ದಾರೆ.

ದೇಶದಲ್ಲೇ ಅತೀ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದ ಬೆಂಗಳೂರಿನಲ್ಲಿ ಕೂಡಾ ಪ್ರಕರಣಗಳು ಕಡಿಮೆಯಾಗಿದೆ. ಕಳೆದ ದಿನ ನಗರದ 1,470 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ವರದಿಯಾಗಿದೆ. ಅಲ್ಲದೆ ಒಂದೇ ದಿನದಲ್ಲಿ 2,409 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಕಳೆದ ಒಂದು ದಿನದಲ್ಲಿ 60,471 ಹೊಸ ಕೊರೊನಾ ವೈರಸ್‌ ಏರಿಕೆ ಕಂಡಿದ್ದು, 75 ದಿನಗಳ ನಂತರ ದಾಖಲಾದ ಅತಿ ಕಡಿಮೆ ಏರಿಕೆ ಇದಾಗಿದೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಕೊರೊನಾ ಪ್ರಕರಣಗಳು 2.95 ಕೋಟಿಗೆ ತಲುಪಿದೆ. ಜೊತೆಗೆ ದೈನಂದಿನ ಪಾಸಿಟಿವಿಟಿ ದರದ ಪ್ರಮಾಣವು 3.45% ಕ್ಕೆ ಇಳಿದಿದೆ ಎಂದು ಒಕ್ಕೂಟ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದನ್ನೂ ಓದಿ: ರಮೇಶ್ ಜಾರಕಿಹೋಳಿ ಸಂಪುಟ ಸೇರ್ಪಡೆಗೆ ಬಿಜೆಪಿಯಲ್ಲಿ ತೆರೆಮರೆಯ ಕಸರತ್ತು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...