Homeಮುಖಪುಟಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆಯ ಹತ್ಯೆಗೈದ ಆರೋಪಿಗಳು

ಉತ್ತರ ಪ್ರದೇಶ: ಅತ್ಯಾಚಾರ ಸಂತ್ರಸ್ತೆಯ ಹತ್ಯೆಗೈದ ಆರೋಪಿಗಳು

- Advertisement -
- Advertisement -

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ 19 ವರ್ಷದ ಯುವತಿಯೊಬ್ಬಳನ್ನು ಇಬ್ಬರು ಸಹೋದರರು ಹಾಡಹಗಲೇ ಇರಿದು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ಇಂದು (ನ.21) ಬೆಳಿಗ್ಗೆ ತಿಳಿಸಿದ್ದಾರೆ. ಆರೋಪಿಗಳ ಪೈಕಿ ಒಬ್ಬ ಈ ಹಿಂದೆ ಮೃತಳ ಮೇಲೆ ಅತ್ಯಾಚಾರವೆಸಗಿ ಜೈಲು ಸೇರಿದ್ದವನು ಎಂದು ತಿಳಿದುಬಂದಿದೆ.

ಮುಖ್ಯ ರಸ್ತೆಯಲ್ಲೇ ಯುವತಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡುವಾಗ ಸಾರ್ವಜನಿಕರು ಅಸಹಾಯಕರಾಗಿ ನಿಂತು ನೋಡುತ್ತಿದ್ದರು ಎಂದು ರಾಷ್ಟ್ರೀಯ ಮಾಧ್ಯಮ ವರದಿಗಳು ಹೇಳಿವೆ.

ಅಶೋಕ್ ನಿಶಾದ್ ಮತ್ತು ಪವನ್ ನಿಶಾದ್ ಕೊಲೆ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರು ಕೆಲ ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದರು. ಪವನ್ ನಿಶಾದ್ ಮೂರು ವರ್ಷಗಳ ಹಿಂದೆ ಮೃತ ಯುವತಿ ಅಪ್ರಾಪ್ತಳಾಗಿದ್ದ ವೇಳೆ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ. ಈ ಸಂಬಂಧ ಆತನ ವಿರುದ್ದ ಯುವತಿ ದೂರು ದಾಖಲಿಸಿದ್ದಳು. ದೂರು ಹಿಂಪಡೆಯವಂತೆ ಪವನ್ ಮತ್ತು ಆತನ ಸಹಚರರು ಯುವತಿಗೆ ಕಿರುಕುಳ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.

ಪವನ್ ಸಹೋದರ ಅಶೋಕ್ ನಿಶಾದ್ ಪ್ರತ್ಯೇಕ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದಾನೆ. ಯುವತಿಯೊಬ್ಬಳ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಈತ ಎರಡು ದಿನಗಳ ಹಿಂದೆಯಷ್ಟೇ ಜೈಲಿನಿಂದ ಬಿಡುಗಡೆಗೊಂಡಿದ್ದ. ಅಶೋಕ್ ಜೈಲಿನಿಂದ ಹೊರಬಂದ ಬಳಿಕ ಇಬ್ಬರು ಸಹೋದರು ಸೇರಿಕೊಂಡು ಅತ್ಯಾಚಾರ ದೂರು ಹಿಂಪಡೆಯುವಂತೆ ಯುವತಿಯನ್ನು ಪೀಡಿಸುತ್ತಿದ್ದರು. ಆಕೆ ನಿರಾಕರಿಸಿದ್ದಕ್ಕೆ ದನಗಳನ್ನು ಮೇಯಲು ಬಿಟ್ಟು ಮನೆಗೆ ಮರಳುವಾಗ ಹೊಂಚು ಹಾಕಿ ಕುಳಿತು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೌಶಂಬಿ ಜಿಲ್ಲೆಯ ದೇರ್ಹಾ ಗ್ರಾಮದಲ್ಲಿ ಭಯಾನಕ ಕೊಲೆ ಘಟನೆ ನಡೆದಿದೆ. ಪೊಲೀಸರು ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಗಳನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ ಕೌಶಂಬಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀವಾಸ್ತವ ತಿಳಿಸಿದ್ದಾರೆ.

ಇದನ್ನೂ ಓದಿ : ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅತಿಥಿ: ವಿವಾದ ಸೃಷ್ಟಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...