Homeಮುಖಪುಟತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

ತೆಹ್ರೀಕ್-ಎ-ಹುರಿಯತ್ ಸಂಘಟನೆ ನಿಷೇಧಿಸಿ ಕೇಂದ್ರ ಗೃಹ ಇಲಾಖೆ ಆದೇಶ

- Advertisement -
- Advertisement -

ಸೈಯದ್ ಅಲಿ ಶಾ ಗಿಲಾನಿ ಅವರ ಜಮ್ಮು-ಕಾಶ್ಮೀರದ ತೆಹ್ರೀಕ್-ಎ-ಹುರಿಯತ್ (ಟಿಇಹೆಚ್) ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯವು ಇಂದು ಆದೇಶವನ್ನು ಹೊರಡಿಸಿದ್ದು, ಟಿಇಹೆಚ್ ಸಂಘಟನೆಯನ್ನು ಕಾನೂನು ಬಾಹಿರ ಸಂಘಟನೆ ಎಂದು ಘೋಷಿಸಿದೆ.

ಈ ಕುರಿತ ನಿರ್ಧಾರವನ್ನು ಪ್ರಕಟಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ಗುಂಪು ಜಮ್ಮು ಮತ್ತು ಕಾಶ್ಮೀರವನ್ನು ಪ್ರತ್ಯೇಕತೆ ದೃಷ್ಟಿಯಿಂದ ಭಾರತ ವಿರೋಧಿ ಕೃತ್ಯ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಿರುವುದು ಕಂಡುಬಂದಿದೆ. ಭಯೋತ್ಪಾದನೆ ವಿರುದ್ಧ ಪ್ರಧಾನಿ ನರೇಂದ್ರ ಮೋದಿಯವರ ಶೂನ್ಯ ಸಹಿಷ್ಣುತೆಯ ನೀತಿಯ ಅಡಿಯಲ್ಲಿ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಯಾವುದೇ ವ್ಯಕ್ತಿ ಅಥವಾ ಸಂಘಟನೆ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ತೆಹ್ರೀಕ್-ಇ-ಹುರಿಯತ್ ಜಮ್ಮು-ಕಾಶ್ಮೀರ (ಟಿಹೆಚ್)ನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆಯಡಿಯಲ್ಲಿ ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿದೆ. ಈ ಸಂಘಟನೆಯು ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸಲು ಮತ್ತು ಇಸ್ಲಾಮಿಕ್ ಆಡಳಿತವನ್ನು ಸ್ಥಾಪಿಸಲು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಅಮಿತ್‌ ಶಾ ಹೇಳಿದ್ದಾರೆ.

ತೆಹ್ರೀಕ್-ಇ-ಹುರಿಯತ್  ಸಂಘಟನೆಯನ್ನು ಸೈಯದ್ ಅಲಿ ಶಾ ಗಿಲಾನಿ ಅವರು ಸ್ಥಾಪಿಸಿದ್ದರು. ಗಿಲಾನಿ ಜಮಾತ್‌-ಎ-ಇಸ್ಲಾಮಿ ಕಾಶ್ಮೀರವನ್ನು ತೊರೆದ ನಂತರ 2004ರ ಆಗಸ್ಟ್‌ 7ರಂದು ಈ ಸಂಘಟನೆಯನ್ನು ಸ್ಥಾಪಿಸಿದ್ದರು. ಅವರ ನಿಧನದ ಬಳಿಕ ಮಸರತ್ ಆಲಂ ಭಟ್ ಅವರು ಉತ್ತರಾಧಿಕಾರಿಯಾದರು. ಭಟ್ ಪ್ರಸ್ತುತ ಜೈಲಿನಲ್ಲಿದ್ದಾರೆ.

ಡಿಸೆಂಬರ್ 27 ರಂದು ಭಾರತ ಸರಕಾರ ಜಮ್ಮು ಕಾಶ್ಮೀರದ ಮುಸ್ಲಿಂ ಲೀಗ್ ಸಂಘಟನೆಯನ್ನು ನಿಷೇಧಿತ ಸಂಘಟನೆ ಎಂದು ಘೋಷಿಸಿತ್ತು. ಜಮ್ಮು ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಮಸರತ್ ಆಲಂ ಭಟ್ ನೇತೃತ್ವದ ಮುಸ್ಲಿಂ ಲೀಗ್ ಸಂಘಟನೆಯನ್ನು ಕೇಂದ್ರ ಸರ್ಕಾರ ದೇಶ ವಿರೋಧಿ ಸಂಘಟನೆ ಎಂದು ಘೋಷಿಸಿ 5 ವರ್ಷಗಳವರೆಗೆ ನಿಷೇಧಿಸಿ ಆದೇಶಿಸಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ದೇಶವಿರೋಧಿ ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಲ್ಲಿ ಸಂಘಟನೆಯ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಂಘಟನೆಯನ್ನು ನಿಷೇಧಿಸಲಾಗಿದೆ ಕೇಂದ್ರ ಗೃಹ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿತ್ತು. ಸೈಯದ್ ಅಲಿ ಶಾ ಗಿಲಾನಿಯವರ ಮರಣದ ನಂತರ ಮಸರತ್ ಆಲಂ ಭಟ್ ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ ಮತ್ತು ತೆಹ್ರೀಕ್-ಎ-ಹುರಿಯತ್ ಸಂಘಟನೆಯ ಮುಂದಾಳತ್ವ ವಹಿಸಿದ್ದರು. ಕಾಶ್ಮೀರ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಭಟ್ 2010ರಿಂದ ಜೈಲಿನಲ್ಲಿದ್ದಾರೆ. 2010ರಲ್ಲಿ ಕಾಶ್ಮೀರದಲ್ಲಿ 100ಕ್ಕೂ ಹೆಚ್ಚು ಯುವಕರ ಸಾವಿಗೆ ಕಾರಣವಾದ ಹಿಂಸಾತ್ಮಕ ಪ್ರತಿಭಟನೆಗಳನ್ನು ಸಂಘಟಿಸುವಲ್ಲಿ ಭಟ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

2015ರಲ್ಲಿ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್ ಅವರು ಪ್ರಮಾಣವಚನ ಸ್ವೀಕರಿಸಿದ ತಕ್ಷಣ ಅವರನ್ನು ಬಿಡುಗಡೆ ಮಾಡಿದ್ದರು. ಇದು ಪಿಡಿಪಿ-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು. ಬಿಜೆಪಿಯ ಒತ್ತಡದ ಮೇರೆಗೆ, ಅಂದಿನ ರಾಜ್ಯ ಸರ್ಕಾರವು ರ್ಯಾಲಿಯಲ್ಲಿ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ ಆರೋಪದಲ್ಲಿ ದೇಶದ್ರೋಹದ ಮತ್ತು ರಾಜ್ಯದ ವಿರುದ್ಧ ಯುದ್ಧಕ್ಕೆ ಪ್ರೇರಣೆ ಆರೋಪದ ಮೇಲೆ ಅವರನ್ನು ಪುನಃಬಂಧಿಸಿತ್ತು.

ಇದನ್ನು ಓದಿ: ಗಾಝಾ- ಈಜಿಪ್ಟ್ ಗಡಿಯಲ್ಲಿ ನಿಯಂತ್ರಣ ಸಾಧಿಸುವುದು ಇಸ್ರೇಲ್‌ ಗುರಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...