Homeಕರ್ನಾಟಕಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

ಮತಾಂತರ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್‌ ಆರೋಪ ತಳ್ಳಿಹಾಕಿ ವರದಿ ನೀಡಿದ್ದ ತಹಸೀಲ್ದಾರ್ ವರ್ಗಾವಣೆ!

- Advertisement -
- Advertisement -

ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕೆಲವು ಗ್ರಾಮಗಳಲ್ಲಿ ಬಲವಂತದ ಮತಾಂತರ ನಡೆದಿದೆ ಎಂದ ಬಿಜೆಪಿ ಶಾಸಕರ ಹೇಳಿಕೆಗೆ ವ್ಯತಿರಿಕ್ತ ವರದಿ ಸಲ್ಲಿಸಿದ ಕೆಲವೇ ದಿನಗಳಲ್ಲಿ ತಹಸೀಲ್ದಾರ್ ತಿಪ್ಪೇಸ್ವಾಮಿ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಮುಂದಿನ ಹುದ್ದೆಗಾಗಿ ತಿಪ್ಪೇಸ್ವಾಮಿ ಕಾಯುವಂತಾಗಿದೆ.

ಹೊಸದುರ್ಗದಲ್ಲಿ ಹೊಸ ತಹಸೀಲ್ದಾರ್ ಅಧಿಕಾರ ವಹಿಸಿಕೊಂಡಿದ್ದಾರೆ. “ಹಲವು ಮಾಧ್ಯಮಗಳು ಬಲವಂತದ ಮತಾಂತರದ ಬಗ್ಗೆ ವರದಿ ಮಾಡಿದ ನಂತರ ನಾನು ಸಮೀಕ್ಷೆ ನಡೆಸಿದೆ. ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚಿಸಿತ್ತು. ಜನರು ಹೇಳಿದ್ದನ್ನು ನನ್ನ ವರದಿಯಲ್ಲಿ ನಾನು ಹೈಲೈಟ್ ಮಾಡಿದ್ದೇನೆ” ಎಂದು ತಿಪ್ಪೇಸ್ವಾಮಿ ತಿಳಿಸಿರುವುದಾಗಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜೊತೆಗೆ “ವರ್ಗಾವಣೆಗೂ ಹಾಗೂ ವರದಿಗೂ ಯಾವುದೇ ಸಂಬಂಧವಿಲ್ಲ” ಎಂದೂ ತಿಳಿಸಿದ್ದಾರೆ.

ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ತಮ್ಮ ಕ್ಷೇತ್ರದಲ್ಲಿ ಬಲವಂತದ ಮತಾಂತರಗಳು ಹೆಚ್ಚಾಗಿವೆ ಎಂದು ರಾಜ್ಯದ ವಿಧಾನಸಭೆಯಲ್ಲಿ ಸೆಪ್ಪೆಂಬರ್‌‌ನಲ್ಲಿ ಆರೋಪಿಸಿದ್ದರು. ಹೊಸದುರ್ಗ ತಾಲೂಕು ಆಡಳಿತ ಕೆಲ ಗ್ರಾಮಗಳಲ್ಲಿ ಮತಾಂತರ ಸಂಬಂಧ ಸಮೀಕ್ಷೆ ನಡೆಸಿತ್ತು.

ಆದರೆ, ಕುಟುಂಬಗಳು ಸ್ವಇಚ್ಛೆಯಿಂದ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿರುವುದನ್ನು ತಹಸೀಲ್ದಾರ್‌‌ ತಿಪ್ಪೇಸ್ವಾಮಿ ನೇತೃತ್ವದ ತಂಡ ವರದಿ ಸಲ್ಲಿಸಿತ್ತು. ತಾಲೂಕಿನ ಎರಡು ಗ್ರಾಮಗಳಲ್ಲಿ 46 ಕುಟುಂಬಗಳು ತಾವಾಗಿಯೇ ಕ್ರೈಸ್ತ ಧರ್ಮ ಸ್ವೀಕರಿಸಿದ್ದು, ಯಾರೂ ಕೂಡ ಬಲವಂತ ಮಾಡಿಲ್ಲ ಎಂಬುದು ಬಯಲಾಗಿತ್ತು. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಯಾರೂ ಒತ್ತಾಯಿಸಲಿಲ್ಲ ಎಂದು ಕುಟುಂಬಗಳು ಅಧಿಕೃತ ಹೇಳಿಕೆ ನೀಡಿದ್ದವು.

“ಯಾರೂ ಬಲವಂತಪಡಿಸಿಲ್ಲ ಎಂದು ಕುಟುಂಬಗಳು ನಮಗೆ ತಿಳಿಸಿದವು. ಅಲ್ಲದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಾಗಿನಿಂದ ಈ ಕುಟುಂಬಗಳು ಸಂತೋಷವಾಗಿವೆ, ಮಾನಸಿಕ ಶಾಂತಿಯನ್ನೂ ಹೊಂದಿವೆ. ಕ್ರಿಶ್ಚಿಯನ್ ಧರ್ಮವನ್ನು ಸ್ವೀಕರಿಸಲು ಕೆಲವರು ಆಮಿಷ ಒಡ್ಡುತ್ತಿದ್ದಾರೆ ಎಂಬ ವರದಿಗಳ ಬಗ್ಗೆ ನಾವು ಕೇಳಿದಾಗ, ಕುಟುಂಬಗಳು ಆ ವರದಿಗಳನ್ನು ತಳ್ಳಿಹಾಕಿದವು” ಎಂದು ತಿಪ್ಪೇಸ್ವಾಮಿ ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದರು.

ಮತಾಂತರ ಹೆಸರಲ್ಲಿ ಕ್ರಿಶ್ಚಿಯನ್ನರ ಮೇಲೆ ದ್ವೇಷ ರಾಜಕಾರಣ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕದ (ಪಿಯುಸಿಎಲ್‌) ವರದಿಯು ಆತಂಕವನ್ನು ವ್ಯಕ್ತಪಡಿಸಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...