Homeಮುಖಪುಟತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು: ಜೆಡಿಯು ಆಗ್ರಹ

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ" ಎಂದಿದ್ದಾರೆ.

- Advertisement -
- Advertisement -

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಎನ್‌ಡಿಎ ಮೈತ್ರಿಕೂಟಕ್ಕೆ ತೀವ್ರ ಪೈಪೋಟಿ ನೀಡಿದ ಆರ್‌ಜೆಡಿ ಪಕ್ಷದ ಮುಖಂಡ ತೇಜಸ್ವಿ ಯಾದವ್ ಬಿಹಾರ ವಿರೋಧ ಪಕ್ಷದ ನಾಯಕನಾಗಬಾರದು ಎಂದು ಜೆಡಿಯು ಆಗ್ರಹಿಸಿದೆ.

ರಾಷ್ಟ್ರೀಯ ಜನತಾದಳದ ನಾಯಕ(ಆರ್‌ಜೆಡಿ) ತೇಜಶ್ವಿ ಯಾದವ್ ಅವರ ಹೆಸರು ಹಲವಾರು ಭ್ರಷ್ಟಾಚಾರ ಮತ್ತು ಕ್ರಿಮಿನಲ್ ಪ್ರಕರಣಗಳಲ್ಲಿ ಇರುವುದರಿಂದ, ಅವರು ಪ್ರತಿಪಕ್ಷದ ನಾಯಕರಾಗುವುದನ್ನು ತಡೆಯಬೇಕೆಂದು ಬಿಹಾರದಲ್ಲಿ ಆಡಳಿತಾರೂಢ ಜೆಡಿಯು ಒತ್ತಾಯಿಸಿದೆ.

ಜೆಡಿಯು ಪಕ್ಷದ ಮುಖಂಡ ಮೇವಾಲಾಲ್ ಚೌಧರಿ ಅವರು ಭ್ರಷ್ಟಾಚಾರದ ಕಳಂಕ ಸಂಬಂಧಿಸಿದಂತೆ ಮೊನ್ನೆ ತಾನೇ ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎರಡು ದಿನಗಳ ನಂತರ ಜೆಡಿಯುನಿಂದ ಈ ಬೇಡಿಕೆ ಬಂದಿದೆ.

ಮೇವಾಲಾಲ್ ಚೌಧರಿ ಅವರನ್ನು ನಿತೀಶ್ ಕುಮಾರ್ ಸಂಪುಟದಲ್ಲಿ ಶಿಕ್ಷಣ ಸಚಿವರನ್ನಾಗಿಸಿದ್ದಕ್ಕೆ ಸರ್ಕಾರದ ವಿರುದ್ಧ ವಾಗ್ದಳಿ ನಡೆಸಿದ್ದಕ್ಕಾಗಿ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮೇಲೆ ಜೆಡಿಯು ರಾಜ್ಯಾಧ್ಯಕ್ಷ ವಸಿಷ್ಠ ನಾರಾಯಣ್ ಸಿಂಗ್, ಕಾರ್ಯಕಾರಿ ಅಧ್ಯಕ್ಷ ಅಶೋಕ್ ಚೌಧರಿ ಮತ್ತು ವಕ್ತಾರರಾದ ಸಂಜಯ್ ಸಿಂಗ್, ನೀರಜ್ ಕುಮಾರ್ ಮತ್ತು ಅಜಯ್ ಅಲೋಕ್ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಮೂರೇ ದಿನದಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಹಾರದ ಶಿಕ್ಷಣ ಸಚಿವ!

2010-15ರ ಅವಧಿಯಲ್ಲಿ ಭಾಗಲ್ಪುರ್ ಜಿಲ್ಲೆಯ ಬಿಹಾರ ಕೃಷಿ ವಿಶ್ವವಿದ್ಯಾಲಯದ ಉಪಕುಲಪತಿಯಾಗಿದ್ದ ಅವಧಿಯಲ್ಲಿ ನೇಮಕಾತಿಗಳಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ 67 ವರ್ಷದ ಮೇವಾಲಾಲ್ ಚೌಧರಿ ಅವರನ್ನು 2017 ರಲ್ಲಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯುನಿಂದ ಅಮಾನತುಗೊಳಿಸಲಾಗಿತ್ತು. ಆದರೆ ಈ ಚುನಾವಣೆಯ ನಂತರ ಅವರಿಗೆ ಶಿಕ್ಷಣ ಖಾತೆ ನೀಡಲಾಗಿತ್ತು.

ನಿತೀಶ್ ಕುಮಾರ್‌ ತಮ್ಮ ಸಂಪುಟಕ್ಕೆ “ಭ್ರಷ್ಟ” ವ್ಯಕ್ತಿಯನ್ನು ಸೇರಿಸಿಕೊಂಡಿದ್ದಕ್ಕಾಗಿ ಮುಖ್ಯಮಂತ್ರಿಯ ಮೇಲೆ ಆರ್‌ಜೆಡಿಯ ತೇಜಸ್ವಿ ಯಾದವ್ ವಾಗ್ದಾಳಿ ಹಲ್ಲೆ ನಡೆಸಿದ್ದರು.

ಚೌಧರಿ ಅವರು ತಮ್ಮ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದನ್ನು ಬಂಡವಾಳ ಮಾಡಿಕೊಂಡ  ಜೆಡಿಯು ನಾಯಕರು, ತಮ್ಮ ಸರ್ಕಾರ “ಅಪರಾಧ, ಭ್ರಷ್ಟಾಚಾರ ಮತ್ತು ಕೋಮುವಾದಕ್ಕೆ ವಿರೋಧವಾಗಿದೆ” ಎಂದಿದ್ದಾರೆ.

ತೇಜಸ್ವಿ ಯಾದವ್ ಅವರ ವಿರುದ್ಧ “ಐಪಿಸಿಯ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ. ಅಲ್ಲದೇ ಎಸ್‌ಸಿ / ಎಸ್‌ಟಿ ಕಾಯ್ದೆಯಡಿ ಕೂಡ ಪ್ರಕರಣ ದಾಖಲಾಗಿವೆ” ಎಂದು ಆರೋಪಿಸಿದ್ದಾರೆ.

ಆಡಳಿತ ಪಕ್ಷದ ಶಾಸಕರಾದ ಚೌಧರಿ ಅವರನ್ನು ಕೂಡ ಸರ್ಕಾರ ರಕ್ಷಿಸುತ್ತಿಲ್ಲ. ಪ್ರಕರಣದ ತನಿಖೆ ಮುಂದುವರೆಸುವಂತೆ ರಾಜ್ಯಸರ್ಕಾರ ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಕೇಳಿದೆ. ಈ ವಿಷಯದಲ್ಲಿ ರಾಜ್ಯಪಾಲರ ಒಪ್ಪಿಗೆಗೆ ಸರ್ಕಾರ ಕಾಯುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜೆಡಿಯು ನಾಯಕರು ತಿಳಿಸಿದ್ದಾರೆ.

ಇನ್ನು ರಾಘೋಪುರ ವಿಧಾನಸಭಾ ಸ್ಥಾನದಿಂದ ತಮ್ಮ ನಾಮಪತ್ರಗಳನ್ನು ಸಲ್ಲಿಸುವಾಗ, ತೇಜಸ್ವಿ ಯಾದವ್ ಅವರು ತಮ್ಮ ಮೇಲೆ ದಾಖಲಾಗಿರುವ ಪ್ರಕರಣಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಿಲ್ಲ ಎಂಬುದನ್ನು “ಉದ್ದೇಶಪೂರ್ವಕ ಲೋಪ”ಎಂದು ಚುನಾವಣಾ ಆಯೋಗ ಗಮನಿಸಬೇಕು ಎಂದು ಜೆಡಿಯು ನಾಯಕರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಿಹಾರ: ರಾಷ್ಟ್ರಗೀತೆ ಹೇಳಲು ಹೆಣಗಾಡಿದ ನೂತನ ಶಿಕ್ಷಣ ಸಚಿವನ ವಿಡಿಯೋ ವೈರಲ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...