Homeಮುಖಪುಟಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

ಬಿಹಾರ| ಮತದಾರರ ಪಟ್ಟಿಯಿಂದ ನನ್ನ ಹೆಸರು ಕಾಣೆಯಾಗಿದೆ: ತೇಜಸ್ವಿ ಯಾದವ್ ಆರೋಪ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗ (ಇಸಿಐ) ಶುಕ್ರವಾರ (ಆ.1) ಬಿಡುಗಡೆ ಮಾಡಿರುವ ಬಿಹಾರದ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿಲ್ಲ ಎಂದು ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ನಾಯಕ ತೇಜಸ್ವಿ ಪ್ರಸಾದ್ ಯಾದವ್ ಶನಿವಾರ (ಆ.2) ಹೇಳಿದ್ದಾರೆ.

ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಯಾದವ್, “ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಸಮಯದಲ್ಲಿ ನೋಂದಣಿ ನಮೂನೆಯನ್ನು (enumeration form) ಭರ್ತಿ ಮಾಡಿದ್ದೇನೆ ಎಂದಿದ್ದಾರೆ.

“ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾನು ಹೇಗೆ ಸ್ಪರ್ಧಿಸಲಿ?” ಎಂದು ಅವರು ಪ್ರಶ್ನಿಸಿದ್ದಾರೆ.

EPIC ಸಂಖ್ಯೆಯ ಮೂಲಕ ತನ್ನ ಹೆಸರನ್ನು ಹುಡುಕಿದಾಗ ಯಾವುದೇ ಮಾಹಿತಿ ಕಂಡುಬಂದಿಲ್ಲ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ವೈಯಕ್ತಿಕವಾಗಿ ತನ್ನ ಭರ್ತಿ ಮಾಡಿದ ಫಾರ್ಮ್ ಅನ್ನು ಸಂಗ್ರಹಿಸಿದ್ದಾರೆ. ಆದರೆ, ಕರಡು ಮತದಾರರ ಪಟ್ಟಿಯಲ್ಲಿ ತನ್ನ ಹೆಸರು ಇಲ್ಲ ಎಂದು ತೇಜಸ್ವಿ ಯಾದವ್ ಹೇಳಿಕೊಂಡಿದ್ದಾರೆ.

“ಪ್ರತಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 20 ರಿಂದ 30 ಸಾವಿರ ಹೆಸರುಗಳನ್ನು ತೆಗೆದುಹಾಕಲಾಗಿದೆ. ಒಟ್ಟು ಸುಮಾರು 65 ಲಕ್ಷ ಅಂದರೆ, ಸುಮಾರು 8.5% ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದೆ. ಚುನಾವಣಾ ಆಯೋಗ ಜಾಹೀರಾತು ನೀಡಿದಾಗಲೆಲ್ಲಾ, ಇಷ್ಟೊಂದು ಜನರು ಸ್ಥಳಾಂತರಗೊಂಡಿದ್ದಾರೆ, ಇಷ್ಟೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು ಇಷ್ಟೊಂದು ಜನರು ನಕಲಿ ಹೆಸರುಗಳನ್ನು ಹೊಂದಿದ್ದಾರೆ ಎಂದು ಉಲ್ಲೇಖಿಸಿತ್ತು” ಎಂದು ತೇಜಸ್ವಿ ವಿವರಿಸಿದ್ದಾರೆ.

“ಆದರೆ ಚುನಾವಣಾ ಆಯೋಗವು ನಮಗೆ ಒದಗಿಸಿದ ಪಟ್ಟಿಯಲ್ಲಿ, ಅವರು ಯಾವುದೇ ಮತದಾರರ ವಿಳಾಸ, ಬೂತ್ ಸಂಖ್ಯೆ ಮತ್ತು ಎಪಿಕ್ ಸಂಖ್ಯೆಯನ್ನು ನೀಡಿಲ್ಲ. ಆದ್ದರಿಂದ, ಮತದಾರರ ಪಟ್ಟಿಯಿಂದ ಯಾರ ಹೆಸರುಗಳನ್ನು ತೆಗೆದುಹಾಕಲಾಗಿದೆ ಎಂಬುದನ್ನು ನಾವು ಕಂಡುಹಿಡಿಯಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಆರೋಪ ನಿರಾಕರಿಸಿದ ಚುನಾವಣಾ ಆಯೋಗ

ತೇಜಸ್ವಿ ಯಾದವ್ ಆರೋಪವನ್ನು ಭಾರತೀಯ ಚುನಾವಣಾ ಆಯೋಗ ತಳ್ಳಿ ಹಾಕಿದೆ. ಅವರ ಹೆಸರು ಕರಡು ಮತದಾರರ ಪಟ್ಟಿಯಲ್ಲಿದೆ ಎಂದು ಹೇಳಿದೆ. ಇದಕ್ಕೆ ಪೂರಕವಾಗಿ ತೇಜಸ್ವಿ ಹೆಸರು ಇರುವ ಪಟ್ಟಿಯ ಪ್ರತಿಯನ್ನು ಬಿಡುಗಡೆ ಮಾಡಿದೆ.

ಅವರ ಹೆಸರು ಕ್ರಮ ಸಂಖ್ಯೆ 416, ಮನೆ ಸಂಖ್ಯೆ 10 ಮತ್ತು EPICಸಂಖ್ಯೆ RABO456228ನೊಂದಿಗೆ ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ತೇಜಸ್ವಿ ಯಾದವ್ ತಮ್ಮ ಹಳೆಯ EPIC ಸಂಖ್ಯೆಯನ್ನು ಬಳಸಿಕೊಂಡು ಹುಡುಕಿರಬಹುದು. ಹಾಗಾಗಿ, ಅವರ ವಿವರಗಳು ಕಂಡುಬಂದಿರಲಿಕ್ಕಿಲ್ಲ ಎಂದು ಚುನಾವಣಾ ಆಯೋಗದ ಪ್ರಕಾರ ಹೇಳಿದೆ.

ಛತ್ತೀಸ್‌ಗಢ: ಬಂಧಿತ ಕೇರಳ ಸನ್ಯಾಸಿನಿಯರಿಗೆ ಜಾಮೀನು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...

ಎಐ ಶೃಂಗಸಭೆ ಪ್ರತಿಭಟನೆ | ಆರೋಪಿಗಳ ಬಂಧನ ವೇಳೆ ಭಾರೀ ಹೈಡ್ರಾಮ : ದೆಹಲಿ ಪೊಲೀಸರನ್ನೇ ವಶಕ್ಕೆ ಪಡೆದ ಶಿಮ್ಲಾ ಪೊಲೀಸರು

ದೆಹಲಿಯ ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ಯುವ ಕಾಂಗ್ರೆಸ್‌ ಕಾರ್ಯಕರ್ತರ ಬಂಧನ ವೇಳೆ ಭಾರೀ ಹೈಡ್ರಾಮ ನಡೆದಿದೆ. ಆರೋಪಿಗಳನ್ನು ಬಂಧಿಸಿ ಕರೆತರಲು ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಗೆ ತೆರಳಿದ್ದ ದೆಹಲಿ ಪೊಲೀಸರನ್ನು ಅಲ್ಲಿನ...

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...