Homeಕರ್ನಾಟಕತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತೇಜಸ್ವಿ ಸೂರ್ಯ, ನಿಮ್ಮ ಮೆದುಳಲ್ಲಿರುವ ಕೋಮು ವೈರಸ್‌ ಕೊರೊನಾಗಿಂತಲೂ ಅಪಾಯಕಾರಿ, ಚಿಕಿತ್ಸೆ ಪಡ್ಕೊಳ್ಳಿ: ಸಿದ್ದರಾಮಯ್ಯ

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವುದು ನಿಮ್ಮದು ಕೊಳಕು ಬುದ್ದಿ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ವಿರುದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವದು ಬುಧವಾರ ಕಿಡಿ ಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, “ತೇಜಸ್ವಿಸೂರ್ಯ, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು ಬಿಬಿಎಂಪಿಯಲ್ಲಿರುವ ಅಧಿಕಾರಿಗಳ ವಿರುದ್ಧ ಅಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿಗಳು,‌ ಸಚಿವರು ಮತ್ತು ಬಿಜೆಪಿ‌ ಶಾಸಕರು‌ ಮತ್ತು ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ’ಬಂಗಾಳದಲ್ಲಿ ಮುಸ್ಲಿಮರ ಮೇಲೆ ಭೀಕರ ದಾಳಿ ನಡೆಯಲಿದೆ’- ಕೋಮುಗಲಭೆಗೆ ಪ್ರಚೋದನೆ ನೀಡಿದ ಪ್ರಕಾಶ್‌‌ ಬೆಳವಾಡಿ

“ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು ಮುಖ್ಯಮಂತ್ರಿಗಳ‌ ಮೇಲೆ ಒತ್ತಡ ಹೇರಿ” ಎಂದು ಅವರು ಸಲಹೆ ನೀಡಿದ್ದಾರೆ.

“ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ? ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು?” ಎಂದು ಅವರು ಕೇಳಿದ್ದಾರೆ.

“ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದುತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ” ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ನಟಿ ಕಂಗನಾ ರಣಾವತ್‌ ಖಾತೆಯನ್ನು ಶಾಶ್ವತವಾಗಿ ಅಮಾನತು ಮಾಡಿದ ಟ್ವಿಟರ್‌!

“ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ ತೇಜಸ್ವಿ ಸೂರ್ಯ ಅವರೇ, ಮುಖ್ಯ ಆರೋಪಿಗಳಾದ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ” ಎಂದು ಅವರು ಹೇಳಿದ್ದಾರೆ.

“‘ಯಥಾ ರಾಜಾ ತಥಾ‌ ಮಂತ್ರಿ, ಮೈ ಬೀ ಕಾವೂಂಗಾ, ತುಮ್ ಬಿ ಕಾವೋ’ ಎನ್ನುವುದೇ ನಿಮ್ಮ ನರೇಂದ್ರ ಮೋದಿಯವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ” ಎಂದು ಅವರು ಹೇಳಿದ್ದಾರೆ.

“ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ?. ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದುಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ” ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ವಾರಣಾಸಿ, ಅಯೋಧ್ಯ, ಮಥುರಾ ಪಂಚಾಯತ್‌ ಚುನಾವಣೆ: ಆದಿತ್ಯನಾಥ್‌ ಸರ್ಕಾರಕ್ಕೆ ಭಾರಿ ಮುಖಭಂಗ!

“ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿಯೇ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ ನರೇಂದ್ರ ಮೋದಿಯವರ ಅಚ್ಚೇ ದಿನ್? ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ರಾಜ್ಯಕ್ಕೆ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ ಮೋದಿ ರಕ್ಷಿಸುತ್ತಿರುವುದು ಯಾರನ್ನು? ತಮ್ಮನ್ನೋ? ಅಧಿಕಾರಿಗಳನ್ನೋ?” ಎಂದು ಅವರು ಸರಣಿ ಪ್ರಶ್ನೆಗಳನ್ನು ಹಾಕಿದ್ದಾರೆ.

“ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು ಮುಖ್ಯಮಂತ್ರಿಗಳು ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 ಬಿಜೆಪಿ‌ ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?” ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಟಿಎಂಸಿಯಿಂದ ಹಾರಿದ 148 ಜನರಿಗೆ BJP ಟಿಕೆಟ್, ಗೆದ್ದವರು 6 ಜನ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

4 COMMENTS

  1. Nimma rajakeeyana ivaga thorisbedi..
    Thu nim janmakke..
    Ashtu neravagi sikkakondidru avrannella vahoskondu mathadthiyalla hottege yen thinthiya..
    Thakath idre yar yar hana hodithidare hidkodu..
    Manasika kushtarogi neenu…

  2. ಸಿದ್ಧರಾಮಯ್ಯ ಬಹಳ ಕರಾರುವಾಕ್ಕಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಒಂದೊಂದು ವಾಕ್ಯವೂ ನಿಖರವಾಗಿದೆ. ಅವರ ಪಕ್ಷದವರೂ ಹೀಗೇ ಎಲ್ಲಾ ಕಡೆ ಬಾಯಿ ಬಿಟ್ಟಿದ್ದಲ್ಲಿ ಬಿಜೆಪಿಗರ ಆಟಾಟೋಪ ಸ್ವಲ್ಪವಾದರೂ ತಗ್ಗುತ್ತಿತ್ತು.

    ಹ್ಯಾಟ್ಸಾಫ್ ಸಿದ್ಧರಾಮಯ್ಯ!

  3. ಸತ್ಯ ಹೇಳಿದರೆ ಪಿತ್ತ ನೆತ್ತಿಗೇರ ಬಹುದು ತೇಜಸ್ವಿಗೆ.

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...