Homeಕರ್ನಾಟಕಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ...

ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಹಾಕಿಸಿಕೊಳ್ಳಿ ಎಂದು ತೇಜಸ್ವಿ ಸೂರ್ಯ ಪ್ರಚಾರ: ತರಾಟೆ ತೆಗೆದುಕೊಂಡ ಜನ

- Advertisement -
- Advertisement -

ಬೆಡ್ ಬ್ಲಾಕಿಂಗ್ ಹಗರಣ ನಡೆಯುತ್ತಿದೆ ಅದನ್ನು ಬಹಿರಂಗ ಪಡಿಸಿದ್ದೇನೆ ಎಂದು ಮಾಧ್ಯಮಗಳ ಮುಂದೆ ಒಂದು ಸಮುದಾಯದ ಜನರ ಪಟ್ಟಿ ಓದಿ ಟೀಕೆಗೆ ಒಳಗಾಗಿದ್ದ ಸಂಸದ ತೇಜಸ್ವಿ ಸೂರ್ಯ ಮತ್ತೆ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಹಾಕಿಸಿಕೊಳ್ಳಿ ಎಂಬ ವಿಚಾರದಲ್ಲಿ ಜನರ ಟೀಕೆಗೆ ಗುರಿಯಾಗಿದ್ದಾರೆ.

ದೇಶವು ಪ್ರಸ್ತುತ ಎದುರಿಸುತ್ತಿರುವ ಪ್ರಮುಖ ಬಿಕ್ಕಟ್ಟಿನ ಮಧ್ಯೆ, ಲಸಿಕೆ ಇಲ್ಲದಿರುವುದು ಒಂದು. ಲಸಿಕೆ ಲಭ್ಯವಿಲ್ಲದ ಬಗ್ಗೆ, ಪೂರೈಕೆ ಬೇಕು ಎಂದು ರಾಜ್ಯಗಳು ಕೇಂದ್ರವನ್ನು ಒತ್ತಾಯಿಸುತ್ತಿವೆ. ಇವುಗಳ ಮಧ್ಯೆ ಸಂಸದ ತೇಜಸ್ವಿ ಸೂರ್ಯ, ಖಾಸಗಿ ಆಸ್ಪತ್ರೆಯಲ್ಲಿ ಹಣ ನೀಡಿ ಲಸಿಕೆ ಪಡೆದುಕೊಳ್ಳಿ ಎಂದು ಪ್ರಚಾರ ನಡೆಸಿದ್ದಾರೆ. ಈ ಬ್ಯಾನರ್‌ಗಳು ಜಯನಗರದ ಮೈದಾನದಲ್ಲಿ ಹಾಕಲಾಗಿವೆ.

ರಾಜ್ಯದಲ್ಲಿ ಲಸಿಕೆ ರಾಜಕೀಯ ಮುಂದುವರೆದಿದ್ದು, ‘ತೇಜಸ್ವಿ ಸೂರ್ಯ ಕಚೇರಿಯಿಂದ ಬೆಂಬಲಿತವಾಗಿದೆ’ ಎಂಬ ಪೋಸ್ಟರ್ ಜಯನಗರದ ಬಿಬಿಎಂಪಿ ಕೇಂದ್ರದ ಪಕ್ಕದಲ್ಲಿ ಕಾಣಿಸಿಕೊಂಡಿವೆ. ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ 900 ರೂಪಾಯಿಗೆ ಲಸಿಕೆ ನೀಡಲಾಗುತ್ತದೆ ಎಂಬ ಬ್ಯಾನರ್‌ಗಳು ಕಾಣಿಸಿಕೊಂಡಿವೆ. ಎಲ್ಲಾ ಬ್ಯಾನರ್‌ಗಳಲ್ಲಿಯೂ ಸಂಸದ ತೇಜಸ್ವಿ ಸೂರ್ಯ ಬೆಂಬಲಿತ ಎಂಬ ಬರಹ ಮತ್ತು ಅವರ ಫೋಟೋ ಹಾಕಲಾಗಿದೆ. ಈ ಪೋಸ್ಟರ್‌ಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಂ ಪಟ್ಟಿ: ಸಂತ್ರಸ್ತರು ಆರೋಪ ಮುಕ್ತರಾದರೂ ಇನ್ನೂ ಮರಳಿ ಸಿಗದ ಉದ್ಯೋಗ

ಹಲವು ನೆಟ್ಟಿಗರು ತಮ್ಮ ಖಾತೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಇರುವ ಬ್ಯಾನರ್‌ಗಳನ್ನು ಹಂಚಿಕೊಂಡು, ಇಂತಹ ರಾಜಕಾರಣ ಬಿಡಿ, ಜನರು ಲಸಿಕೆ ಇಲ್ಲದೆ ಆತಂಕದಲ್ಲಿರುವಾಗ ಖಾಸಗಿ ಆಸ್ಪತ್ರೆಯ ಲಸಿಕೆ ಅಭಿಯಾನ ಹೇಗೆ ಬೆಂಬಲಿಸುತ್ತಿರಿ ಎಂದು ಪ್ರಶ್ನಿಸಿದ್ದಾರೆ.

 

“ಶಾಲಿನಿ ಮೈದಾನದಲ್ಲಿ ವಾಸವಿ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ 900 ರೂಪಾಯಿ ತೆಗೆದುಕೊಳ್ಳುವ ಮೂಲಕ ಲಸಿಕೆ ಹಾಕುತ್ತಾರೆ. ಸಂಪೂರ್ಣ ಕಾರ್ಯಕ್ರಮದ ಕ್ರೆಡಿಟ್ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೆಗೆದುಕೊಳ್ಳುತ್ತಾರೆ. ಬಿಬಿಎಂಪಿಯಲ್ಲಿ ಲಸಿಕೆ ಇಲ್ಲದಿದ್ದಾಗ ಖಾಸಗಿ ಆಸ್ಪತ್ರೆಯನ್ನು ಸಂಸದರು ಹೇಗೆ ಉತ್ತೇಜಿಸಬಹುದು..? ಈ ಕೆಲಸಕ್ಕೆ ಅವರು ಎಷ್ಟು ಕಮಿಷನ್ ಪಡೆಯುತ್ತಿದ್ದಾರೆ..? ವಾಸವಿ ಆಸ್ಪತ್ರೆ ಲಸಿಕೆ ಖರೀದಿ ಸರಕುಪಟ್ಟಿ ತೋರಿಸಬೇಕು” ಎಂದು ಭೂಷಣ್ ಎಂಬುವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬೆಡ್ ಬ್ಲಾಕಿಂಗ್ ಹಗರಣಕ್ಕೆ ಕೋಮುಬಣ್ಣ: ಪತ್ರಕರ್ತರ ಮುಖ್ಯ ಪ್ರಶ್ನೆಗಳಿಗೆ ಸಂಸದ ತೇಜಸ್ವಿ ಸೂರ್ಯ ನಿರುತ್ತರ!

“ತೇಜಸ್ವಿ ಸೂರ್ಯನಂತಹ ಬಿಜೆಪಿ ಸಂಸದರು ಖಾಸಗಿ ಆಸ್ಪತ್ರೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಬಹುದು ಮತ್ತು ಪ್ರತಿ ಡೋಸ್‌ಗೆ 900 ರೂಪಾಯಿ ಶುಲ್ಕ ವಿಧಿಸಬಹುದು. ಆದರೆ ಕಾಂಗ್ರೆಸ್ ಸಂಸದರು, ಶಾಸಕರು, ಸಂಸದರು, ಎಂಎಲ್‌ಎಡಿಎಸ್ ಮತ್ತು ಪಾರ್ಟಿ ಫಂಡ್‌ಗಳನ್ನು ಬಳಸಿಕೊಂಡು ಲಸಿಕೆ ಖರೀದಿಸಲು ಸರ್ಕಾರ ಏಕೆ ಅವಕಾಶ ನೀಡುತ್ತಿಲ್ಲ..? ಈ ಪಕ್ಷಪಾತ ಏಕೆ..?” ಎಂದು ಕಾಂಗ್ರೆಸ್ ಯುವ ನಾಯಕ ಶ್ರೀವತ್ಸಾ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ತೇಜಸ್ವಿ ಸೂರ್ಯ ಓದಿದ ಮುಸ್ಲಿಮರ ಪಟ್ಟಿ: ಬಿಬಿಎಂಪಿ ಇಂತಹ ಲಿಸ್ಟ್ ತಯಾರಿಸಿಲ್ಲ! ಮತ್ತೆ ಯಾರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಈ ತೇಜಸ್ವಿ ಸೂರ್ಯ ಒಬ್ಬ ಗ್ರಾಮ ಪಂಚಾಯತಿ ಸದಸ್ಯನಾಗಿರಲಿಕ್ಕೂ ನಾಲಾಯಕ್.

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...