Homeಕರ್ನಾಟಕಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

ಕೋಮು ಸಾಮರಸ್ಯ ಕದಡುವ ಯತ್ನ: ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಲಿದೆಯೇ?

- Advertisement -
- Advertisement -

`ಬೆಂಗಳೂರು ದಕ್ಷಿಣ ಸಂಸದ, ಬಿಜೆಪಿ ಯುವಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಬಿಬಿಎಂಪಿ ವಾರ್‌ರೂಮಿಗೆ ದಾಳಿ ಮಾಡಿ, ಬೆಡ್ ಬ್ಲಾಕಿಂಗ್ ಹಗರಣದ ಹೆಸರಲ್ಲಿ ಕೋಮು ಸಾಮರಸ್ಯ ಕದಡುವ ಕೆಲಸ ಮಾಡಿದ್ದಾರೆ. ಹೀಗಾಗಿ ಇವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಕೆಲವು ಸಾಮಾಜಿಕ ಕಾರ್ಯಕರ್ತರು ಮತ್ತು ವಕೀಲರು ಬೆಂಗಳೂರು ಜಿಲ್ಲಾಧಿಕಾರಿ ಮತ್ತು ಬೆಂಗಳೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರಿಗೆ ಅರ್ಜಿ ಸಲ್ಲಿಸಿದ್ದಾರೆ.

ವತ್ತು ತೇಜಸ್ವಿ ಸೂರ್ಯ ಜೊತೆಗೆ ಇದ್ದ ಬೆಂಗಳೂರಿನ ಬಸವನಗುಡಿಯ ಶಾಸಕ ರವಿ ಸುಬ್ರಮಣ್ಯ, ಚಿಕ್ಕಪೇಟೆಯ ಶಾಸಕ ಉದಯ್ ಗರುಡಾಚಾರ್ ಮತ್ತು ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಅವರ ಮೇಲೂ ದೂರು ದಾಖಲಿಸಲು ಅನುಮತಿ ನೀಡಿ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಇದನ್ನೂ ಓದಿ: ಆಮ್ಲಜನಕ ಪೂರೈಕೆಯ ಹೊಣೆ ಹೊರಬೇಕಾದ ಕೈಗಾರಿಕಾ ಸಚಿವ ಶೆಟ್ಟರ್ ಎಲ್ಲಿ?

ಸಾಮಾಜಿಕ ಕಾರ್ಯಕರ್ತ ವರದ ರಾಜೇಂದ್ರ ಮತ್ತು ಹಲವು ವಕೀಲರು ಈ ದೂರು ಸಲ್ಲಿಸಿದ್ದು, `206 ಉದ್ಯೋಗಿಗಳ ಪೈಕಿ 16 ಮುಸ್ಲಿಂ ಉದ್ಯೋಗಿಗಳ ಹೆಸರು ಹೇಳುವ ಮೂಲಕ ತೇಜಸ್ವಿ ಸೂರ್ಯ ಮತ್ತು ಅವರ ತಂಡ ಕೋಮು ಸಾಮರಸ್ಯಕ್ಕೆ ಧಕ್ಕೆ ತರುವ ಯತ್ನ ಮಾಡಿದೆ. ಇದೇನು ಮದರಸಾನಾ ಎಂದು ನೇರವಾಗಿ ಮುಸ್ಲಿಮರ ವಿರುದ್ಧ ಅಸಂವಿಧಾನಿಕ ಮಾತುಗಳನ್ನು ಆಡಿದ್ದಾರೆ. ಹೀಗಾಗಿ ಸಂಸದರು ಮತ್ತು ಅವರ ಜೊತೆಗಿದ್ದ ಜನಪ್ರತಿನಿಧಿಗಳು ಕೋಮು ಸಾಮರಸ್ಯ ಕದಡುವ ಉದ್ದೇಶದಿಂದಲೇ ಈ ಕೆಲಸ ಮಾಡಿದ್ದಾರೆ. ಅವರ ವಿರುದ್ಧ ದೂರು ದಾಖಲಿಸಲು ಅನುಮತಿ ನೀಡಿ’ ಎಂದು ಅರ್ಜಿಯಲ್ಲಿ ಕೇಳಲಾಗಿದೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ವರದ ರಾಜೇಂದ್ರ `ಸಾಂಕ್ರಾಮಿಕ ತಡೆ ಕಾಯ್ದೆ ಪ್ರಕಾರ, ಜನಪ್ರತಿನಿಧಿ ಅಥವಾ ಯಾರದೇ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸುವ ಮುನ್ನ ಜಿಲ್ಲಾಧಿಕಾರಿ ಅವರ ನೇತೃತ್ವದ ಜಿಲ್ಲಾ ಮ್ಯಾಜಿಸ್ಟ್ರೇಟ್ ವ್ಯವಸ್ಥೆಯ ಅನುಮತಿ ಪಡೆಯುವ ಅಗತ್ಯವಿರುವ ಕಾರಣ, ನಾವು ಮನವಿ ಸಲ್ಲಿಸಿದ್ದೇವೆ’ ಎಂದು ಹೇಳಿದರು.

`ಈ ಮನವಿ ಪುರಸ್ಕರಿಸದಿದ್ದರೆ, ನಾವು ಹೈಕೋರ್ಟ್ ಮೆಟ್ಟಿಲು ಏರುತ್ತೇವೆ’ ಎಂದು ಅವರು ತಿಳಿಸಿದರು.

ಕೋಮು ಸಾಮರಸ್ಯ ಕದಡುವ ಉದ್ದೇಶದಲ್ಲಿ ಕಂಗನಾ ರಾಣಾವತ್ ಮಾಡಿದ ಟ್ವೀಟ್ ಕಾರಣಕ್ಕೆ, ಟ್ವಿಟರ್ ಅವರ ಖಾತೆಯನ್ನು ಶಾಶ್ವತವಾಗಿ ಸ್ಥಗಿತಗೊಳಿಸಿದೆ. ನಿನ್ನೆ ಶುಕ್ರವಾರ ಕೋಲ್ಕೊತ್ತದಲ್ಲಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಇದೇ ಮಾದರಿಯ ಪೋಸ್ಟ್ ಹಾಕಿದ್ದ ರಂಗಕರ್ಮಿ ಪ್ರಕಾಶ್ ಬೆಳವಾಡಿ ವಿರುದ್ಧ ಹಲವರು ಕೇಸ್ ಹಾಕುವ ಪ್ರಕ್ರಿಯೆಯಲ್ಲಿ ಇದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಆಮ್ಲಜನಕ ನೀಡುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಆದೇಶ- ’ಬೆಡ್’ ವಿಚಾರದಲ್ಲೇ ಇರುವ BJP ಸಂಸದರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ. ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ....

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...