Homeಮುಖಪುಟಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರ ಅಭಿವೃದ್ಧಿ; ಮುಖ್ಯಮಂತ್ರಿ ಅಭ್ಯರ್ಥಿಗಳ ನೇರ ಚರ್ಚೆ: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು!

ಬಿಹಾರದ ವೈಶಾಲಿಯಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಸ್ಥಾಪನೆಯಾದ ಕಾರಣ, ಇಲ್ಲಿ ನಾವು ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ಚರ್ಚೆ ನಡೆಯಬೇಕು ಎನ್ನುವ ಈ ಸಂಪ್ರದಾಯವನ್ನು ಪ್ರಾರಂಭಿಸೋಣ ಎಂದು ಅವರು ಹೇಳಿದರು.

- Advertisement -
- Advertisement -

ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಬಿಹಾರ ವಿಧಾನಸಭೆಯ ಪ್ರತಿಪಕ್ಷದ ನಾಯಕ ತೇಜಸ್ವಿ ಯಾದವ್ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ನೇರ ಚರ್ಚೆ ಮಾಡಲು ಆಹ್ವಾನಿಸಿ ಸವಾಲು ಹಾಕಿದ್ದಾರೆ.

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ, ಸರ್ಕಾರದ ಮುಖ್ಯಸ್ಥರಾಗಿ ಕಳೆದ 15 ವರ್ಷಗಳಲ್ಲಿ ಅವರು ಮಾಡಿದ ಸಾಧನೆಗಳ ಬಗ್ಗೆ ಚರ್ಚಿಸಲು ಅಭಿವೃದ್ಧಿಯ ವಿಷಯದಲ್ಲಿ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲು ಯಾವುದೇ ಸಮಯ ಮತ್ತು ಸ್ಥಳವನ್ನು ಆಯ್ಕೆ ಮಾಡಬಹುದು ಎಂದು ತೇಜಸ್ವಿ ಯಾದವ್ ನಿತೀಶ್ ಕುಮಾರ್ ಅವರಿಗೆ ಸವಾಲು ಹಾಕಿದರು.

“ಕಳೆದ 15 ವರ್ಷಗಳಲ್ಲಿ ನಿತೀಶ್ ಕುಮಾರ್ ಅವರು ತಮ್ಮ ಸಾಧನೆಗಳ ಬಗ್ಗೆ ನನ್ನೊಂದಿಗೆ ಚರ್ಚಿಸಲಿ ಎಂದು ನಾನು ಒತ್ತಾಯಿಸುತ್ತೇನೆ. ಬಿಹಾರದ ವೈಶಾಲಿಯಲ್ಲಿ ಮೊದಲ ಬಾರಿಗೆ ಪ್ರಜಾಪ್ರಭುತ್ವ ಸ್ಥಾಪನೆಯಾದ ಕಾರಣ, ಇಲ್ಲಿ ನಾವು ಮುಖ್ಯಮಂತ್ರಿ ಅಭ್ಯರ್ಥಿಗಳ ನಡುವೆ ನೇರ ಚರ್ಚೆ ನಡೆಯಬೇಕು ಎನ್ನುವ ಈ ಸಂಪ್ರದಾಯವನ್ನು ಪ್ರಾರಂಭಿಸೋಣ” ಎಂದಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆ: ಚಿರಾಗ್ ಪಾಸ್ವಾನ್ ಪರ ನಿಂತ ತೇಜಸ್ವಿ ಯಾದವ್ – ನಿತೀಶ್‌ ಕುಮಾರ್‌ಗೆ ತಲೆನೋವು!

“ಜನರು ರಾಜ್ಯ ಸರ್ಕಾರದ ಮೇಲೆ ತೀವ್ರ ಕೋಪಗೊಂಡಿದ್ದು, ಮಹಾ ಘಟಬಂಧನ್ ಸ್ಪಷ್ಟ ಬಹುಮತದೊಂದಿಗೆ ಸರ್ಕಾರವನ್ನು ರಚಿಸುತ್ತದೆ ಎಂದು ತೇಜಸ್ವಿ ಯಾದವ್ ಹೇಳಿದರು.

ಪ್ರತಿ ಚುನಾವಣಾ ಸಭೆಯಲ್ಲೂ ನಿರುದ್ಯೋಗ ಮತ್ತು ವಲಸೆಯ ವಿಷಯಗಳ ಬಗ್ಗೆ ತೇಜಸ್ವಿ ಯಾದವ್ ನಿರಂತರವಾಗಿ ಆಡಳಿತ ಪಕ್ಷವನ್ನು ಗುರಿಯಾಗಿಸಿಕೊಂಡಿದ್ದಾರೆ.

ಇದರ ನಡುವೆ, ಸವಾಲಿಗೆ ಪ್ರತಿಕ್ರಿಯಿಸಿದ ಬಿಹಾರದ ಮಾಜಿ ಬಿಜೆಪಿ ಅಧ್ಯಕ್ಷ ಮತ್ತು ಕೇಂದ್ರ ಸಚಿವ ನಿತ್ಯಾನಂದ್ ರೈ, “ಅಭಿವೃದ್ಧಿಯ ವಿಷಯದಲ್ಲಿ ಎಲ್ಲಿಯಾದರೂ ಚರ್ಚಿಸಲು ಅವರು ಸಿದ್ಧರಾಗಿದ್ದಾರೆ. ಆದರೆ ಈಗ ನಿತೀಶ್ ಕುಮಾರ್ ಎನ್‌ಡಿಎ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದು, ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ” ಎಂದರು.

ಬಿಹಾರದಲ್ಲಿ, 243 ಸದಸ್ಯರ ವಿಧಾನಸಭಾ ಚುನಾವಣೆಗೆ ಮೂರು ಹಂತಗಳಲ್ಲಿ ಮತದಾನ ನಡೆಯಲಿದ್ದು, ಅಕ್ಟೋಬರ್ 28, ನವೆಂಬರ್ 3 ಮತ್ತು ನವೆಂಬರ್ 7 ರಂದು ಮತದಾನ ನಡೆಯಲಿದೆ. ನವೆಂಬರ್ 10 ರಂದು ಫಲಿತಾಂಶ ಹೊರಬೀಳಲಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಿಹಾರ ಚುನಾವಣೆಗಾಗಿ ಪ್ರಿಯಾಂಕಾ ಇಂದಿರಾ ಗಾಂಧಿಯವರ ಸೀರೆ ಧರಿಸಿದ್ದಾರೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....