Homeಕರ್ನಾಟಕತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

ತೇಜಸ್ವಿ ಬರೆದ ಕವಿತೆಯನ್ನು ‘ನೈಂಟಿ ಎಮ್ಮೆಲ್‌ ಕವಿತೆ’ ಎಂದಿದ್ದ ಚಕ್ರತೀರ್ಥ; ಕಮೆಂಟ್‌ ವೈರಲ್‌

- Advertisement -
- Advertisement -

ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಕಾರ, ವಿಮರ್ಶಕ ಕೆ.ಪಿ.ಪೂರ್ಣಚಂದ್ರ ತೇಜಸ್ವಿಯವರನ್ನು ಅಣಿಕಿಸಿ ಬಲಪಂಥೀಯ ಬರಹಗಾರ ರೋಹಿತ್‌ ಚಕ್ರತೀರ್ಥ ಮಾಡಿರುವ ಕಮೆಂಟ್‌ನ ಸ್ಕ್ರೀನ್‌ಶಾಟ್ ಈಗ ಹರಿದಾಡುತ್ತಿದೆ.

ತೇಜಸ್ವಿಯವರ ಏಕೈಕ ಕವನ ಸಂಕಲನ ‘ಬೃಹನ್ನಳೆ ಸೋಮುವಿನ ಸ್ವಗತ ಲಹರಿ’. ಈ ಕೃತಿಯು 1962ರಲ್ಲಿ ಪ್ರಕಟವಾಯಿತು. ರಾಜಕೀಯ ವಿಡಂಬನೆ, ಹತಾಶೆ, ಅಸಹಾಯಕತೆ, ಸಿಟ್ಟು ಅಪ್ರಕಟಿತ ಪ್ರೇಮವನ್ನು ಇಲ್ಲಿನ ಕವನಗಳಲ್ಲಿ ಕಾಣಬಹುದು ಎಂದು ವಿಮರ್ಶಕರು ಅಭಿಪ್ರಾಯಪಟ್ಟಿದ್ದಾರೆ. ಅಲ್ಲಿನ ಕವಿತೆಯೊಂದರ ಕುರಿತು ಕಮೆಂಟ್ ಮಾಡಿರುವ ಚಕ್ರತೀರ್ಥ, ‘ನೈಂಟಿ ಎಮ್ಮೆಲ್‌ ಕವಿತೆ’ ಎಂದು ಅಣಕಿಸಿದ್ದಾರೆ.

‘#ನವಇತಿಹಾಸನಿರ್ಮಾಣಗಳು’ ಹ್ಯಾಷ್‌ಟ್ಯಾಗ್‌ ಬಳಸಿ ಮಾಡಿರುವ ಪೋಸ್ಟ್‌ನಲ್ಲಿ “ಪೂರ್ಣಚಂದ್ರ ತೇಜಸ್ವಿಯವರು ತಮ್ಮ ಪ್ರತಿ ಕವನದಲ್ಲಿ ನಮ್ಮ ದೇಶದ Inequality of wealth ಬಗ್ಗೆ ಹೇಳಿದ್ದಾರೆ” ಎಂದು ಚಕ್ರತೀರ್ಥ ಬರೆದಿದ್ದಾರೆ.

ಭಾಗ್ಯ ಸುಭಾಷ್‌ ಎಂಬವರು ‘ಅವರು ಕವಿತೆ ಬರೆದಿದ್ದಾರಾ?’ ಎಂದು ಕಮೆಂಟ್ ಮಾಡಿದ್ದಾರೆ. ಅದಕ್ಕೆ ಸುಮಾ ಆರಾಧ್ಯ ಅವರು ಕವಿತೆಯನ್ನು ಹಂಚಿಕೊಂಡಿದ್ದಾರೆ. ಅದಕ್ಕೆ ರೋಹಿತ್‌ ಚಕ್ರತೀರ್ಥ ಕಮೆಂಟ್ ಮಾಡಿ, “ನೈಂಟಿಎಮ್ಮೆಲ್‌” ಕವಿತೆ ಎಂದಿದ್ದಾರೆ.

‘ಬ್ರಾಹ್ಮಣ ಯುವಕರಿಗೆ’ ಎಂಬ ಕವಿತೆಯನ್ನು ಸುಮಾ ಆರಾಧ್ಯ ಹಂಚಿಕೊಂಡಿರುವುದನ್ನು ಕಾಣಬಹುದು.

ಕನ್ನಡ ಸಾಹಿತಿಗಳು, ಬರಹಗಾರರ ಕುರಿತು ಅವಹೇಳನಕಾರಿಯಾಗಿ ಮಾತನಾಡುತ್ತಾ ಬಂದಿರುವ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಿ, ಆ ಸಮಿತಿ ನೀಡಿರುವ ಪಠ್ಯವನ್ನು ಅಳವಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ನೂತನ ಪಠ್ಯಪುಸ್ತಕಗಳನ್ನು ಕೂಡಲೇ ವಾಪಸ್‌ ಪಡೆಯಬೇಕೆಂಬ ಆಗ್ರಹ ಹೆಚ್ಚಾಗುತ್ತಿದೆ.

ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಎದುರಿಸುತ್ತಿರುವ ರೋಹಿತ್‌ ಚಕ್ರತೀರ್ಥ ಅವರು ಈ ಹಿಂದೆ ಮಾಡಿರುವ ಪೋಸ್ಟ್‌ಗಳು, ಕಮೆಂಟ್‌ಗಳು ಹೊರಬೀಳತೊಡಗಿವೆ. ಅಶ್ಲೀಲವಾಗಿ ಮಾಡಿದ್ದ ಪೋಸ್ಟ್‌ಗಳೆಲ್ಲ ಚರ್ಚೆಗೆ ಬಂದ ಬಳಿಕ ರೋಹಿತ್‌ ಚಕ್ರತೀರ್ಥ ಅವರು ತಮ್ಮ ಎಫ್‌ಬಿ ಪ್ರೊಫೈಲ್‌ ಲಾಕ್ ಮಾಡಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. “ವೈಚಾರಿಕತೆಯನ್ನು ತುಳಿದುಹಾಕದಿದ್ದರೆ ತಟ್ಟೆ ಕಾಸಿಗೆ ಕುತ್ತು ಬರುತ್ತದೆ” ಎಂಬುದು ಮನುವಾದಿಗಳ ಆತಂಕ. ಅದಕ್ಕಾಗಿ ಅವರು ಚಕ್ರತೀರ್ತನಂತಹ ಹೀನಕ್ರಿಮಿಯನ್ನು ಉನ್ನತ ಸ್ಥಾನದಲ್ಲಿ ಕೂರಿಸಿದ್ದಾರೆ. ಈ ನಾಡಿನ ಪ್ರಜ್ಞಾವಂತರು ಇದಕ್ಕೆ ಪ್ರತಿಬಟಿಸದಿದ್ದರೆ, ದೇವನೂರು ಮಹಾದೇವ ಅವರು ಹೇಳಿರುವಂತೆ ಈ ನಾಡಿಗೆ ಕೇಡುಗಾಲ ಕಟ್ಟಿಟ್ಟ ಬುತ್ತಿ.

LEAVE A REPLY

Please enter your comment!
Please enter your name here

- Advertisment -

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...