Homeಮುಖಪುಟತೆಲಂಗಾಣ, ಆಂಧ್ರದಲ್ಲಿ ಭಾರಿ ಮಳೆ: ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ...

ತೆಲಂಗಾಣ, ಆಂಧ್ರದಲ್ಲಿ ಭಾರಿ ಮಳೆ: ಕಾಂಪೌಂಡ್ ಕುಸಿದು 2 ತಿಂಗಳ ಮಗು ಸೇರಿ 9 ಮಂದಿ ದುರ್ಮರಣ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಕಳೆದ 48 ಗಂಟೆಗಳಲ್ಲಿ ತೆಲಂಗಾಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

- Advertisement -
- Advertisement -

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಒಡಿಶಾ ಸೇರಿದಂತೆ ದೇಶದ ಹಲವೆಡೆ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯಿಂದಾಗಿ ಮಂಗಳವಾರ (ಅ.13) ರಾತ್ರಿ 10 ಮನೆಗಳ ಮೇಲೆ ಕಾಂಪೌಂಡ್‌ ಕುಸಿದ ಪರಿಣಾಮ 2 ತಿಂಗಳ ಮಗು ಸೇರಿ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ಈ ಮಳೆಗೆ ಹೈದರಾಬಾದ್‌ನಲ್ಲಿ ಕಾಂಪೌಂಡ್‌ ಕುಸಿತದ ಬಗ್ಗೆ ಸಂಸದ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದಾರೆ. ‘ಬಂಗ್ಲಗುಡದ ಮೊಹಮದೀಯ ಹಿಲ್ಸ್‌ ಸಮೀಪ ದುರಂತ ಸಂಭವಿಸಿದೆ. 9 ಮಂದಿ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಾಯಗಳಾಗಿವೆ’ ಎಂದು ಓವೈಸಿ ಹೇಳಿದ್ದಾರೆ.

ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

ತೆಲಂಗಾಣ ಮತ್ತು ಆಂಧ್ರಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಕಳೆದ 48 ಗಂಟೆಗಳಲ್ಲಿ ತೆಲಂಗಾಣದಲ್ಲಿ ಒಟ್ಟು 12 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಆಂಧ್ರದ 100ಕ್ಕೂ ಹೆಚ್ಚು ಸ್ಥಳಗಳಲ್ಲಿ 11ರಿಂದ 24 ಸೆಂ.ಮೀ. ಪ್ರಮಾಣದ ಮಳೆಯಾಗಿದೆ.

ಹೈದರಾಬಾದ್‌ನಲ್ಲಿ ವರುಣನ ಆರ್ಭಟ ಮತ್ತಷ್ಟು ಹೆಚ್ಚಾಗಲಿದ್ದು, ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ತೆಲಂಗಾಣದ ವಿಕರಾಬಾದ್, ಸಿದ್ದಿಪೇಟೆ ಮತ್ತು ಜಗಾಂವ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಇಂದು ಮತ್ತು ನಾಳೆ ರಜೆಯನ್ನು ಘೋಷಿಸಿದೆ. ಸಾರ್ವಜನಿಕರಿಗೆ ಮನೆಗಳಿಂದ ಹೊರಗೆ ಬರಬೇಡಿ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ತೆಲಂಗಾಣದ ಕನಿಷ್ಠ 14 ಜಿಲ್ಲೆಗಳಲ್ಲಿ ಮತ್ತು ಹೈದರಾಬಾದ್​ನ ಪುರಾನಾ ಪುಲ್, ರೆಡ್ಡಿ ಕಾಲೋನಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಪ್ರವಾಹದಲ್ಲಿ ಸಿಲುಕಿದ್ದ ಜನರನ್ನ ಪೊಲೀಸರು ರಕ್ಷಣೆ ಮಾಡಿ, ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುತ್ತಿದ್ದಾರೆ.


ಇದನ್ನೂ ಓದಿ: ಮಹಾಮಳೆಗೆ ತತ್ತರಿಸಿದ ಮುಂಬೈ, ಕೊರೊನಾ ಆಸ್ಪತ್ರೆಗೂ ನುಗ್ಗಿದ ಮಳೆನೀರು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...