Homeಮುಖಪುಟತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

ತೆಲಂಗಾಣ ವಿಧಾನಸಭಾ ಚುನಾವಣೆ: ಇಂದು ಮತದಾನ

- Advertisement -
- Advertisement -

ತೆಲಂಗಾಣ ವಿಧಾನಸಭೆಯ 119 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ. ಬೆಳಿಗ್ಗೆ 8 ಗಂಟೆಯಿಂದ ಮತದಾನ ಆರಂಭಗೊಂಡಿದ್ದು, ಸಂಜೆ 6ರವರೆಗೆ ಮುಂದುವರಿಯಲಿದೆ.

ತೆಲುಗು ರಾಜ್ಯದ 3.17 ಕೋಟಿ ಮತದಾರರು ರಾಷ್ಟ್ರೀಯ, ಪ್ರಾದೇಶಿಕ ಸೇರಿ 109 ಪಕ್ಷಗಳ 2,290 ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲಿದ್ದಾರೆ. ಈ ಚುನಾವಣೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಯ ಕೆ ಚಂದ್ರಶೇಖರ ರಾವ್ ಅವರಂತಹ ಪ್ರಮುಖ ನಾಯಕರಿಗೆ ಪ್ರತಿಷ್ಠೆಯ ವಿಷಯವಾಗಿದೆ.

ಅಭ್ಯರ್ಥಿಗಳ ಪೈಕಿ 221 ಮಹಿಳೆಯರು, ಒಬ್ಬರು ತೃತೀಯ ಲಿಂಗಿ ಒಳಗೊಂಡಿದ್ದಾರೆ. 103 ಮಂದಿ ಶಾಸಕರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

ರಾಜ್ಯದ್ಯಾಂತ 35, 665 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಪೈಕಿ 12 ಸಾವಿರ ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಲಾಗಿದೆ. 2.8 ಲಕ್ಷ ಸಿಬ್ಬಂದಿ ಚುನಾವಣಾ ಕರ್ತವ್ಯ ನಿರ್ವಹಿಸಲಿದ್ದಾರೆ. ಪೊಲೀಸರು ಬಿಗಿ ಬಂದೋ ಬಸ್ತ್ ಕೈಗೊಂಡಿದ್ದಾರೆ.

ತೆಲಂಗಾಣದಲ್ಲಿ ಪ್ರಪ್ರಥಮ ಬಾರಿಗೆ 80 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು ವಿಶೇಷ ಚೇತನರಿಗೆ ಮನೆಯಿಂದಲೇ ಹಕ್ಕು ಚಲಾಯಿಸುವ ಅವಕಾಶ ಕಲ್ಪಿಸಲಾಗಿದೆ. 27, 600 ಜನರು ಇದಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ.

ನಕ್ಸಲ್ ಪೀಡಿತ ಪ್ರದೇಶಗಳ ಮತಗಟ್ಟೆಗಳಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 4 ರವರೆಗೆ ಮತದಾನ ನಡೆಯಲಿದೆ ಎಂದು ಮುಖ್ಯ ಚುನಾವಣಾಧಿಕಾರಿ ವಿಕಾಸ್ ರಾಜ್ ತಿಳಿಸಿದ್ದಾರೆ.

ಡಿಸೆಂಬರ್ 3ರಂದು ದೇಶದ ಇತರ ನಾಲ್ಕು ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ಜೊತೆ ತೆಲಂಗಾಣದ ಮತ ಎಣಿಕೆಯೂ ನಡೆಯಲಿದೆ.

ಪಂಚರಾಜ್ಯ ಚುನಾವಣೆಯ ಕೊನೆಯ ಮತದಾನ :

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ಸೇರಿ ಐದು ರಾಜ್ಯಗಳ ವಿಧಾನಸಭೆಗೆ ಚುನಾವಣೆ ನಡೆಯುತ್ತಿದೆ. ತೆಲಂಗಾಣ ಹೊರತು ಇತರ ನಾಲ್ಕು ರಾಜ್ಯಗಳಲ್ಲಿ ನವೆಂಬರ್ 7 ಮತ್ತು 26ರಂದು ಎರಡು ಹಂತಗಳಲ್ಲಿ ಈಗಾಗಲೇ ಮತದಾನ ನಡೆದಿದೆ. ಇಂದು ಕೊನೆಯದಾಗಿ ತೆಲಂಗಾಣದ ಮತದಾನ ನಡೆಯುತ್ತಿದೆ.

ಆಡಳಿತಾರೂಢ ಬಿಆರ್‌ಎಸ್ ಪಕ್ಷ ಎಲ್ಲಾ 119 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಗೆ ಒಂದು ಸ್ಥಾನವನ್ನು ಬಿಟ್ಟು ಕೊಟ್ಟಿದೆ. ಉಳಿದ 118 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ಗ್ಯಾರಂಟಿ ಕೊಟ್ಟ ಕಾಂಗ್ರೆಸ್‌ :

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಕಾಂಗ್ರೆಸ್‌ ಘೋಷಿಸಿದ್ದ ಅನ್ನಭಾಗ್ಯ, ಗೃಹಲಕ್ಷಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಈ ಐದು ಗ್ಯಾರಂಟಿಗಳು ಪಕ್ಷಕ್ಕೆ ಅಭೂತಪೂರ್ವ ಗೆಲುವನ್ನು ತಂದು ಕೊಟ್ಟಿತ್ತು. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಗೆ ಕಾರಣವಾಗಿತ್ತು.

ಇದೇ ಗ್ಯಾರಂಟಿ ದಾಳವನ್ನು ತೆಲುಗು ರಾಜ್ಯದಲ್ಲೂ ಕಾಂಗ್ರೆಸ್ ಉರುಳಿಸಿದೆ. ತೆಲಂಗಾಣದಲ್ಲೂ, ಪ್ರತಿ ತಿಂಗಳು ಅತ್ತೆಗೆ 4,000 ರೂ., ಸೊಸೆಗೆ 2,500 ರೂ. ಪ್ರತಿ ಹೆಣ್ಣುಮಗುವಿನ ಖಾತೆಗೆ ಪ್ರತಿ ತಿಂಗಳು 2,500 ರೂ. (ಮಹಾಲಕ್ಷ್ಮಿ ಯೋಜನೆ), ಪಿಂಚಣಿ ಮೊತ್ತ 2,000 ರೂ.ನಿಂದ 4,000 ರೂ.ಗೆ ಹೆಚ್ಚಳ, 500 ರೂಪಾಯಿಗೆ ಒಂದು ಗ್ಯಾಸ್ ಸಿಲಿಂಡರ್, ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ನೆರವು ಬಡವರಿಗೆ 200 ಯೂನಿಟ್‍ವರೆಗೂ ಉಚಿತ ವಿದ್ಯುತ್, ಹೀಗೆ 6 ಗ್ಯಾರಂಟಿಗಳನ್ನು ಘೋಷಿಸಿದೆ.

ಬಿಆರ್‌ಎಸ್‌ ಭರವಸೆ ಏನು?

ಸಾಮಾಜಿಕ ಭದ್ರತಾ ಪಿಂಚಣಿ ಮೊತ್ತ ಏರಿಕೆ, ರೈತರಿಗೆ ‘ರೈತಬಂಧು’ ಹೂಡಿಕೆ ಯೋಜನೆಯಡಿ ಆರ್ಥಿಕ ನೆರವು, 400 ರೂ.ಗೆ ಎಲ್‌ಪಿಜಿ ಸಿಲಿಂಡರ್ ಪೂರೈಕೆ, ಬಿಪಿಎಲ್‌ ವರ್ಗದ 93 ಲಕ್ಷ ಕುಟುಂಬಗಳಿಗೆ 5 ಲಕ್ಷ ರೂ.ಗಳ ಜೀವವಿಮೆ. ವಿಕಲಾಂಗರಿಗೆ ನೀಡುತ್ತಿರುವ ಪಿಂಚಣಿ ಮೊತ್ತ 4,016 ರೂ. ನಿಂದ ಮುಂದಿನ ಐದು ವರ್ಷಗಳಲ್ಲಿ 6,016 ರೂ.ಗೆ ಏರಿಕೆ. ಹೀಗೆ ಹಲವು ಭರವಸೆಗಳನ್ನು ಆಢಳಿತರೂಡ ಬಿಆರ್‌ಎಸ್‌ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ನೀಡಿದೆ.

ಬಿಜೆಪಿ ವಾಗ್ದಾನ ಏನು?

ಬಿಜೆಪಿ ಪಕ್ಷ ಸಮಾನ ನಾಗರಿಕ ಸಂಹಿತೆ ಜಾರಿ, ಉಜ್ವಲ ಯೋಜನೆಯಡಿ ಉಚಿತ ಎಲ್‌ಪಿಜಿ ಸಿಲಿಂಡರ್ ವಿತರಣೆ, ಕೃಷ್ಣ ನದಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಬರಬೇಕಿರುವ ನ್ಯಾಯಯುತ ಪಾಲು ದೊರಕಿಸುವುದು, ಧರ್ಮಾಧಾರಿತ ಮೀಸಲು ರದ್ದು, ತೈಲದ ಮೇಲಿನ ವ್ಯಾಟ್‌ ತೆರಿಗೆ ಕಡಿತ ಹೀಗೆ ಹಲವು ಭರವಸೆಗಳನ್ನು ಕೊಟ್ಟಿದೆ.

ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದೇನು?

ಲೋಕ್‌ಪೋಲ್‌ ನಡೆಸಿದ ಚುನಾವಣಾ ಪೂರ್ವ ಸಮೀಕ್ಷೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಲಿದೆ ಎಂದು ತಿಳಿಸಿದೆ. ಕಾಂಗ್ರೆಸ್‌ 69-72 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ. ಆಢಳಿತರೂಡ ಬಿಆರ್‌ಎಸ್‌ 36-39, ಎಐಎಂಐಎಂ 5-6, ಬಿಜೆಪಿ 2-3, ಇತರರು 0-1 ಕ್ಷೇತ್ರಗಳಲ್ಲಿ ಗೆಲುವು ದಾಖಲಿಸಬಹುದು ಎಂದಿದೆ.

ಸೌತ್ ಫಸ್ಟ್ ಮಾಡಿರುವ ಸಮೀಕ್ಷೆಯು ಕೂಡ ಕಾಂಗ್ರೆಸ್‌ ಗೆಲುವು ದಾಖಲಿಸಲಿದೆ ಎಂದಿದೆ. ಕಾಂಗ್ರೆಸ್‌ 57-62, ಬಿಆರ್‌ಎಸ್‌ 41-46, ಎಐಎಂಐಎಂ 6-7, ಬಿಜೆಪಿ, 3-6 ಮತ್ತು ಇತರರು 1-2 ಸ್ಥಾನಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಹೇಳಿದೆ.

ಇದನ್ನೂ ಓದಿ : ಸಿಎಎ ಜಾರಿಯನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ: ಅಮಿತ್‌ ಶಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...