Homeಮುಖಪುಟಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯ ಅಂಗೀಕರಿಸಿದ ತೆಲಂಗಾಣ

- Advertisement -
- Advertisement -

ರಾಜ್ಯಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿ ಕೇಂದ್ರ ಬಜೆಟ್‌ ತಿರಸ್ಕರಿಸುವ ನಿರ್ಣಯವನ್ನು ತೆಲಂಗಾಣ ಸರ್ಕಾರ ಬುಧವಾರ(ಜು.24) ಅಂಗೀಕರಿಸಿದೆ.

ಆಂಧ್ರ ಪ್ರದೇಶ ಮರು ಸಂಘಟನೆ ಅಥವಾ ರಾಜ್ಯ ವಿಭಜನೆ ಕಾಯ್ದೆಯ ಅನ್ವಯ ಎರಡೂ ರಾಜ್ಯಗಳನ್ನು ಸಮಾನ ರೀತಿಯಲ್ಲಿ ನೋಡಬೇಕಿತ್ತು. ಆದರೆ, ಕೇಂದ್ರದ ಎನ್‌ಡಿಎ ಸರ್ಕಾರ ತನ್ನ ಮಿತ್ರ ಪಕ್ಷಗಳನ್ನು ಓಲೈಸಲು ಬಜೆಟ್‌ನಲ್ಲಿ ಆಂಧ್ರಕ್ಕೆ ಹೆಚ್ಚಿನ ಒತ್ತು ಕೊಟ್ಟಿದೆ, ತೆಲಂಗಾಣವನ್ನು ಕಡೆಗಣಿಸಿದೆ ಎಂದು ವಿಧಾನಸಭೆಯಲ್ಲಿ ಬುಧವಾರ ಆಕ್ರೋಶ ವ್ಯಕ್ತವಾಯಿತು.

ರಾಜ್ಯ ಸರ್ಕಾರದ ಪರವಾಗಿ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ನಿರ್ಣಯವನ್ನು ಮಂಡಿಸಿದರು. ವಿರೋಧ ಪಕ್ಷಗಳಾದ ಭಾರತ ರಾಷ್ಟ್ರ ಸಮಿತಿ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ನಿರ್ಣಯವನ್ನು ಬೆಂಬಲಿಸಿತು. 2014ರಲ್ಲಿ ರಾಜ್ಯ ವಿಭಜನೆಯಾದಾಗಿನಿಂದ ತಾರತಮ್ಯ ಮುಂದುವರೆದಿದೆ ಎಂದು ವಿಧಾನಸಭೆ ಆರೋಪಿಸಿದ್ದು, ಬಜೆಟ್ ತಿರಸ್ಕರಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿತು.

ಆಂಧ್ರ ಪ್ರದೇಶ ಮರುಸಂಘಟನೆ ಕಾಯ್ದೆಯು ಎರಡೂ ರಾಜ್ಯಗಳ ಸ್ಥಿರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆದೇಶಿಸಿದೆ ಎಂದಿರುವ ನಿರ್ಣಯ, ತೆಲಂಗಾಣದ ಅಭಿವೃದ್ಧಿಯ ಮೇಲೆ ಆಳವಾದ ಪರಿಣಾಮ ಬೀರಿರುವ ಕಾಯ್ದೆಯಲ್ಲಿನ ಭರವಸೆಗಳನ್ನು ಕಾರ್ಯಗತಗೊಳಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದೆ.

ತೆಲಂಗಾಣ ರಚನೆಯಾಗಿ ರಾಜ್ಯದಲ್ಲಿ ಸರ್ಕಾರ ಸ್ಥಾಪನೆಯಾದ ನಂತರ, ಮುಖ್ಯಮಂತ್ರಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಹಲವಾರು ಬಾರಿ ಪ್ರಧಾನಿ ಮತ್ತು ಇತರ ಕೇಂದ್ರ ಸಚಿವರನ್ನು ಭೇಟಿಯಾಗಿ ವಿವಿಧ ಯೋಜನೆಗಳಿಗೆ ನೆರವು ಮತ್ತು ನ್ಯಾಯಸಮ್ಮತವಾಗಿ ಹಣ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ, ಇದುವರೆಗೆ ರಾಜ್ಯಕ್ಕೆ ನ್ಯಾಯ ಸಿಕ್ಕಿಲ್ಲ ಎಂದು ನಿರ್ಣಯ ದೂರಿದೆ.

ಮುಖ್ಯಮಂತ್ರಿ ರೇವಂತ್ ರೆಡ್ಡಿಯವರು ತಮ್ಮ ಭಾಷಣದಲ್ಲಿ “ಕೇಂದ್ರ ಸರ್ಕಾರದ ರಾಷ್ಟ್ರೀಯ ತೆರಿಗೆ ಸಂಗ್ರಹಕ್ಕೆ ರಾಜ್ಯವು ಕೊಡುಗೆಯಾಗಿ ನೀಡುತ್ತಿರುವ ಹಣದಲ್ಲಿ ಪ್ರತಿ ರೂಪಾಯಿಗೆ ಕೇವಲ 47 ಪೈಸೆಗಳನ್ನು ಮಾತ್ರ ವಾಪಸ್ ಪಡೆಯುತ್ತಿದೆ. ಆದರೆ, ಬಿಹಾರವು ಪ್ರತಿ ರೂಪಾಯಿಗೆ 7.26 ರೂ. ವಾಪಸ್ ಪಡೆಯುತ್ತಿದೆ. ಕಳೆದ ಐದು ವರ್ಷಗಳಲ್ಲಿ ತೆಲಂಗಾಣ ರೂ. 3.68 ಲಕ್ಷ ಕೋಟಿಗೆ ಬದಲಾಗಿ ಕೇವಲ 1.48 ಲಕ್ಷ ಕೋಟಿ ರೂ. ಮಾತ್ರ ತೆರಿಗೆ ಹಣ ಪಡೆದಿದೆ” ಎಂದು ತಿಳಿಸಿದ್ದಾರೆ.

ಕೇಂದ್ರ ಬಜೆಟ್‌ನಲ್ಲಿ ತೆಲಂಗಾಣಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಯ ಸಂಕೇತವಾಗಿ ಜುಲೈ 27 ರಂದು ಕೇಂದ್ರ ಸರ್ಕಾರ ನಡೆಸಲಿರುವ ನೀತಿ ಆಯೋಗದ ಸಭೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಲಿದೆ ಎಂದು ರೇವಂತ್ ರೆಡ್ಡಿ ಘೋಷಿಸಿದ್ದಾರೆ.

ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ಎನ್‌ಡಿಎ ಮಿತ್ರ ಪಕ್ಷಗಳ ಆಡಳಿತವಿರುವ ಆಂಧ್ರ ಪ್ರದೇಶ ಮತ್ತು ಬಿಹಾರಕ್ಕೆ ಹೆಚ್ಚಿನ ಅನುದಾನ ಮತ್ತು ಯೋಜನೆಗಳನ್ನು ನೀಡಲಾಗಿದೆ. ಈ ಕುರಿತ ವಿವರವಾದ ಲೇಖನ ಕೆಳಗಿದೆ.

ಇದನ್ನೂ ಓದಿ : ಕೇಂದ್ರ ಬಜೆಟ್ 2024: ಎನ್‌ಡಿಎ ಮಿತ್ರಪಕ್ಷಗಳ ಆಡಳಿತವಿರುವ ಬಿಹಾರ, ಆಂಧ್ರಪ್ರದೇಶಕ್ಕೆ ಸಿಕ್ಕಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...