Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

ತೆಲಂಗಾಣ: ಪ್ರವಾದಿ ಮುಹಮ್ಮದ್‌ ನಿಂದನೆ ಮಾಡಿದ ಬಿಜೆಪಿ ಶಾಸಕ ಅರೆಸ್ಟ್‌

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಯಿತು. ಬಳಿಕ ಪೊಲೀಸರು ಕ್ರಮ ಜರುಗಿಸಲಾಗಿದೆ.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

ಅವಹೇಳನಕಾರಿ ಹೇಳಿಕೆ ನೀಡಿರುವ ಸಿಂಗ್‌, ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು. ಅವರನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿದರು.

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಫ್ರಿಂಜ್‌ ಎಲಿಮೆಂಟ್‌ ಆಗುತ್ತಾರೆಯೇ ಬಿಜೆಪಿ ಶಾಸಕ?

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು.

“ಇಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ” ಎಂದು ಬಿಜೆಪಿ ಹೇಳಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದ್ದ ಘಟನೆ ತಾಜಾ ಉದಾಹರಣೆ ನಿಂತಿರುವಾಗ ಮತ್ತೊಮ್ಮೆ ಬಿಜೆಪಿ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಕ್ಷವು ಇವರನ್ನು ‘ಪ್ರಿಂಜ್ ಎಲಿಮೆಂಟ್’ ಎಂದು ಕರೆದು ಕ್ರಮ ಜರುಗಿಸುತ್ತದೆಯೋ ಇಲ್ಲವೋ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...