Homeಮುಖಪುಟತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

ತೆಲಂಗಾಣ: ಪ್ರವಾದಿ ಮುಹಮ್ಮದ್‌ರನ್ನು ನಿಂದಿಸಿದ್ದ ಶಾಸಕನನ್ನು ಅಮಾನತು ಮಾಡಿದ ಬಿಜೆಪಿ

- Advertisement -
- Advertisement -

ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಬಂಧನಕ್ಕೊಳಗಾಗಿದ್ದಾರೆ. ನಿಂದನೆ ಹೇಳಿಕೆ ಹೊರಬಿದ್ದ ನಂತರ ನಿನ್ನೆ ರಾತ್ರಿ ಹೈದರಾಬಾದ್‌ನಲ್ಲಿ ಪ್ರತಿಭಟನೆಗಳು ನಡೆದಿದ್ದು, ತಕ್ಷಣ ಎಚ್ಚೆತ್ತುಕೊಂಡ ಬಿಜೆಪಿ ರಾಜ್‌ ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿದೆ.

ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯ ಕಾರ್ಯದರ್ಶಿ ಓಂ ಪಾಠಕ್ ರಾಜ್‌ಸಿಂಗ್‌ಗೆ ನೋಟೀಸ್ ನೀಡಿದ್ದು, “ನೀವು ಸಂವಿಧಾನವನ್ನು ಉಲ್ಲಂಘಿಸಿದ್ದೀರಿ. ಪಕ್ಷದ ನಿಲುವಿಗೆ ವಿರುದ್ಧವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದೀರಿ. ಮುಂದಿನ ವಿಚಾರಣೆ ಬಾಕಿಯಿದೆ, ನಿಮ್ಮನ್ನು ಪಕ್ಷದಿಂದ ಹಾಗೂ ಎಲ್ಲಾ ಜವಾಬ್ದಾರಿಗಳಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದಕ್ಕೂ ಮುನ್ನ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಕಾರ್ಯಕರ್ತರು ರಾಜಾ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿ ಹೈದರಾಬಾದ್ ಪೊಲೀಸ್ ಮುಖ್ಯಸ್ಥರ ಕಚೇರಿ ಎದುರು ಧರಣಿ ನಡೆಸಿದರು. ತಮ್ಮ ಉದ್ರೇಕಕಾರಿ ಭಾಷಣಗಳಿಂದ ಆಗಾಗ್ಗೆ ಸುದ್ದಿಯಲ್ಲಿರುವ ರಾಜಾ ಅವರನ್ನು 24 ಗಂಟೆಗಳ ಒಳಗೆ ಬಂಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಅವರು ಎಚ್ಚರಿಸಿದ್ದರು.

ಧಾರ್ಮಿಕ ನಂಬಿಕೆಗಳನ್ನು ಅವಮಾನಿಸಿದ ಹಿನ್ನೆಲೆಯಲ್ಲಿ ಕಾನೂನಿನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೈದರಾಬಾದ್‌ನ ದಕ್ಷಿಣ ವಲಯದ ಉಪ ಪೊಲೀಸ್ ಆಯುಕ್ತ ಪಿ.ಸಾಯಿ ಚೈತನ್ಯ ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿರುವ ವಿಡಿಯೊವನ್ನು ಬಿಜೆಪಿ ಶಾಸಕ ರಾಜಾ ಸಿಂಗ್ ಬಿಡುಗಡೆ ಮಾಡಿದ ನಂತರದಲ್ಲಿ ಪ್ರತಿಭಟನೆಗಳು ನಡೆದಿವೆ. ಸೋಮವಾರ ರಾತ್ರಿ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಎದುರು ಮತ್ತು ಹೈದರಾಬಾದ್‌ನ ಇತರ ಭಾಗಗಳಲ್ಲಿ ಪ್ರತಿಭಟನೆಗಳು ಜರುಗಿವೆ.

 

ನಗರದ ಗೋಶಾಮಹಲ್‌ನ ಶಾಸಕ ಟಿ ರಾಜಾ ಸಿಂಗ್‌ ಕಳೆದ ವಾರ ಕಾಮಿಡಿ ಪ್ರೊಗ್ರಾಂಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನಾವರ್ ಫರೂಕಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲು ಒತ್ತಾಯಿಸಿದ್ದರು. ಸುಮಾರು 50 ಮಂದಿ ಬೆಂಬಲಿಗರೊಂದಿಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ಅಡ್ಡಿಪಡಿಸಲು ಪ್ರಯತ್ನಿಸಿದ್ದರು. ಪೊಲೀಸರು ಕ್ರಮ ಜರುಗಿಸಿದ ಬಳಿಕ, ಕಾರ್ಯಕ್ರಮ ಸುಗಮವಾಗಿ ನಡೆಯಿತು.

ಪ್ರವಾದಿ ನಿಂದನೆಗೆ ಮತ್ತೊಂದು ಫ್ರಿಂಜ್ ಸೇರ್ಪಡೆ!

ಪ್ರವಾದಿ ಮುಹಮ್ಮದ್‌ ಅವರ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಮತ್ತು ನವೀನ್ ಜಿಂದಾಲ್‌ ಅವರನ್ನು ಪಕ್ಷವು ಪ್ರಾಥಮಿಕ ಸದಸ್ಯತ್ವದಿಂದ ಅಮಾನತು ಮಾಡಿತ್ತು. ಈಗ ಆ ಸಾಲಿಗೆ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನೂಪುರ್‌‌ ವಿದ್ಯಮಾನದ ಸಂದರ್ಭದಲ್ಲಿ ಬಿಜೆಪಿ, “ಇಂತಹ ಜನರನ್ನು ಅಥವಾ ತತ್ವವನ್ನು ನಾವು ಪ್ರಚಾರ ಮಾಡುವುದಿಲ್ಲ” ಎಂದಿತ್ತು.

“ಭಾರತದ ಸಾವಿರಾರು ವರ್ಷಗಳ ಇತಿಹಾಸದಲ್ಲಿ, ಇಲ್ಲಿ ಪ್ರತಿಯೊಂದು ಧರ್ಮವೂ ಅರಳಿವೆ. ಪ್ರವರ್ಧಮಾನಕ್ಕೆ ಬಂದಿವೆ. ಬಿಜೆಪಿಯು ಎಲ್ಲಾ ಧರ್ಮಗಳನ್ನು ಗೌರವಿಸುತ್ತದೆ. ಯಾವುದೇ ಧರ್ಮದ ಯಾವುದೇ ಧಾರ್ಮಿಕ ವ್ಯಕ್ತಿಗಳನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ” ಎಂದು ತಿಳಿಸಿತ್ತು.

“ಯಾವುದೇ ಪಂಥ ಅಥವಾ ಧರ್ಮವನ್ನು ಅವಮಾನಿಸುವುದನ್ನು ಬಿಜೆಪಿ ಬಲವಾಗಿ ವಿರೋಧಿಸುತ್ತದೆ. ಬಿಜೆಪಿ ಅಂತಹ ಜನರನ್ನು ಅಥವಾ ತತ್ವವನ್ನು ಪ್ರಚಾರ ಮಾಡುವುದಿಲ್ಲ. ಭಾರತದ ಸಂವಿಧಾನವು ಪ್ರತಿಯೊಬ್ಬ ಪ್ರಜೆಗೂ ತನ್ನ ಆಯ್ಕೆಯ ಯಾವುದೇ ಧರ್ಮವನ್ನು ಆಚರಿಸಲು ಮತ್ತು ಪ್ರತಿ ಧರ್ಮವನ್ನು ಗೌರವಿಸುವ ಹಕ್ಕನ್ನು ನೀಡುತ್ತದೆ” ಎಂದು ಸ್ಪಷ್ಟಪಡಿಸಿತ್ತು.

ನೂಪುರ್‌ ಶರ್ಮಾ ಮತ್ತು ನವೀನ್ ಕುಮಾರ್ ಜಿಂದಾಲ್ ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು 15 ಪ್ರಮುಖ ರಾಷ್ಟ್ರಗಳು ಕಟು ಶಬ್ದಗಳಲ್ಲಿ ಖಂಡಿಸಿದ್ದವು. ಇರಾನ್, ಇರಾಕ್, ಕುವೈತ್, ಕತಾರ್, ಸೌದಿ ಅರೇಬಿಯಾ, ಓಮನ್, ಯುಎಇ, ಜೋರ್ಡಾನ್, ಅಫ್ಘಾನಿಸ್ತಾನ, ಬಹ್ರೇನ್, ಮಾಲ್ಡೀವ್ಸ್, ಲಿಬಿಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಹಲವು ರಾಷ್ಟ್ರಗಳು ತಮ್ಮ ಪ್ರತಿಭಟನೆಯನ್ನು ದಾಖಲಿಸಿದ್ದವು.

ಇದನ್ನೂ ಓದಿರಿ: ಎಎಪಿ ತೊರೆದರೆ ಸಿಬಿಐ ತನಿಖೆ ನಿಲ್ಲಿಸುತ್ತೇವೆ: ಸಿಸೋಡಿಯಾಗೆ ಬಿಜೆಪಿ ಆಮಿಷ?

ಕತಾರ್, ಇರಾನ್ ಮತ್ತು ಬಹ್ರೇನ್ ದೇಶಗಳು ಭಾರತೀಯ ರಾಯಭಾರಿಯನ್ನು ಕರೆಸಿ, ತಮ್ಮ ವಿರೋಧವನ್ನು ತಿಳಿಸಿದ್ದವು. ಭಾರತ ಸರ್ಕಾರವು ಸಾರ್ವಜನಿಕವಾಗಿ ಈ ಬಗ್ಗೆ ಕ್ಷಮೆಯಾಚನೆ ಮಾಡುವುದನ್ನು ನಿರೀಕ್ಷಿಸುವುದಾಗಿ ಕತಾರ್‌ ಹೇಳಿತ್ತು. ಜೊತೆಗೆ ಪಕ್ಷದ ವಕ್ತಾರರ ವಿರುದ್ಧ ಬಿಜೆಪಿ ಕೈಗೊಂಡಿರುವ ಕ್ರಮವನ್ನು ಬಹ್ರೇನ್ ಮತ್ತು ಸೌದಿ ಅರೇಬಿಯಾ ಸ್ವಾಗತಿಸಿದ್ದವು.

ಇಷ್ಟೆಲ್ಲ ಬೆಳವಣಿಗೆಗಳ ನಡುವೆ ಪ್ರವಾದಿ ನಿಂದನೆ ಮಾಡಿದವರನ್ನು ‘ಪ್ರಿಂಜ್ ಎಲಿಮೆಂಟ್ಸ್‌’ (ಕೊನೆಯ ಎಳಸುಗಳು) ಎಂದು ಸರ್ಕಾರ ಕರೆದಿತ್ತು. ಆ ಸಾಲಿಗೆ ಈಗ ತೆಲಂಗಾಣ ಶಾಸಕ ಟಿ.ರಾಜಾ ಸಿಂಗ್ ಸೇರ್ಪಡೆಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....