Homeಮುಖಪುಟತೆಲಂಗಾಣ| ಸರ್ಕಾರಿ ಶಾಲೆಗಳಲ್ಲಿ 'ಮುಖ್ಯಮಂತ್ರಿ ಉಪಹಾರ ಯೋಜನೆ' ಘೋಷಿಸಿದ ರೇವಂತ್ ರೆಡ್ಡಿ

ತೆಲಂಗಾಣ| ಸರ್ಕಾರಿ ಶಾಲೆಗಳಲ್ಲಿ ‘ಮುಖ್ಯಮಂತ್ರಿ ಉಪಹಾರ ಯೋಜನೆ’ ಘೋಷಿಸಿದ ರೇವಂತ್ ರೆಡ್ಡಿ

- Advertisement -
- Advertisement -

ತಮಿಳುನಾಡಿನ ‘ಪ್ರವರ್ತಕ’ ಉಪಕ್ರಮ ಯೋಜನೆಯಿಂದ ಪ್ರೇರಿತರಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ತಮ್ಮ ಸರ್ಕಾರ ರಾಜ್ಯದಲ್ಲಿ ‘ಮುಖ್ಯಮಂತ್ರಿ ಉಪಹಾರ ಯೋಜನೆ’ ಯನ್ನು ಪರಿಚಯಿಸಲಿದೆ ಎಂದು ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಘೋಷಿಸಿದರು.

ಶುಕ್ರವಾರ ಚೆನ್ನೈನಲ್ಲಿ ನಡೆದ “ತಮಿಳುನಾಡು ಶಿಕ್ಷಣದಲ್ಲಿ ಶ್ರೇಷ್ಠತೆ” ಕಾರ್ಯಕ್ರಮದಲ್ಲಿ ಮಾತನಾಡಿದ ರೇವಂತ್ ರೆಡ್ಡಿ, ಈ ಯೋಜನೆಯು 1 ರಿಂದ 5 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಯೋಜನವನ್ನು ನೀಡುತ್ತದೆ. ಶಾಲಾ ಹಾಜರಾತಿಯನ್ನು ಸುಧಾರಿಸುತ್ತದೆ, ಶಾಲೆ ಬಿಡುವುದನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದರು. ಈ ಕಾರ್ಯಕ್ರಮವನ್ನು ‘ಹೃದಯಸ್ಪರ್ಶಿ’ ಎಂದು ಬಣ್ಣಿಸಿದ ಅವರು, ಇದನ್ನು ಕಲ್ಪಿಸಿದ್ದಕ್ಕಾಗಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಶ್ಲಾಘಿಸಿದರು.

“ತಮ್ಮ ಪೋಷಕರು ಕೆಲಸಕ್ಕೆ ಬೇಗನೆ ಹೋದಾಗ ಶಾಲಾ ಮಕ್ಕಳು ಹಸಿವಿನಿಂದ ಬಳಲದಂತೆ ನೋಡಿಕೊಳ್ಳಲು ಈ ಯೋಜನೆಯನ್ನು ಜಾರಿಗೆ ತಂದ ಸಿಎಂ ಸ್ಟಾಲಿನ್ ಅವರಿಂದ ನಾನು ಸ್ಫೂರ್ತಿ ಪಡೆಯುತ್ತಿದ್ದೇನೆ. ಮುಂದಿನ ಶೈಕ್ಷಣಿಕ ವರ್ಷದಿಂದ ತೆಲಂಗಾಣ ಈ ಕ್ರಾಂತಿಕಾರಿ ಉಪಕ್ರಮವನ್ನು ಪುನರಾವರ್ತಿಸಲಿದೆ” ಎಂದು ರೆಡ್ಡಿ ಹೇಳಿದರು.

ತಮಿಳುನಾಡು ಸಿಎಂ ಮತ್ತು ಡಿಎಂಕೆ ಅಧ್ಯಕ್ಷ ಸ್ಟಾಲಿನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರೇವಂತ್ ರೆಡ್ಡಿ ವಿಶೇಷ ಆಹ್ವಾನಿತ ಮತ್ತು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಕಾರ್ಯಕ್ರಮವು ದ್ರಾವಿಡ ಮಾದರಿ ಆಡಳಿತದ ಅಡಿಯಲ್ಲಿ ವಿವಿಧ ವಿದ್ಯಾರ್ಥಿ ಕೇಂದ್ರಿತ ಯೋಜನೆಗಳ ಮೂಲಕ ಶಿಕ್ಷಣದಲ್ಲಿ ತಮಿಳುನಾಡಿನ ಪ್ರಗತಿಯನ್ನು ತೋರಿಸುತ್ತಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಸ್ಟಾಲಿನ್, ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಹಾಗೂ ತೆಲಂಗಾಣದಲ್ಲಿ ಉಪಾಹಾರ ಯೋಜನೆಯನ್ನು ಘೋಷಿಸಿದ್ದಕ್ಕಾಗಿ ರೆಡ್ಡಿಗೆ ಧನ್ಯವಾದ ಅರ್ಪಿಸಿದರು. “ಪುದುಮೈ ಪೆನ್, ನಾನ್ ಮುಧಲ್ವನ್ ಮತ್ತು ತಮಿಳು ಪುತಲ್ವನ್‌ನಂತಹ ನಮ್ಮ ಪ್ರಮುಖ ಯೋಜನೆಗಳನ್ನು ಶ್ಲಾಘಿಸುವ ಮೂಲಕ, ಶಿಕ್ಷಣದಲ್ಲಿ ತಮಿಳುನಾಡಿನ ಪ್ರವರ್ತಕ ಮಾರ್ಗವು ಇಡೀ ಭಾರತಕ್ಕೆ ದಾರಿಯನ್ನು ಬೆಳಗಿಸುತ್ತಿದೆ ಎಂದು ನೀವು ಪುನರುಚ್ಚರಿಸಿದ್ದೀರಿ” ಎಂದು ಸ್ಟಾಲಿನ್ ಬರೆದಿದ್ದಾರೆ.

ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಆದೇಶ ಹೊರಡಿಸಿದ ತೆಲಂಗಾಣ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಜೈ ಬಾಂಗ್ಲಾ’ ಘೋಷಣೆ ಕೂಗಿದ ಆರೋಪ: ಮಹಿಳೆಗೆ ಜಾಮೀನು ನೀಡಿದ ಹೈಕೋರ್ಟ್

ಬೆಂಗಳೂರಿನ ಹೆಬ್ಬಗೂಡಿಯಲ್ಲಿ ಅಕ್ರಮ ಎನ್ನಲಾದ ಶೆಡ್‌ಗಳ ತೆರವು ಕಾರ್ಯಾಚರಣೆ ವೇಳೆ 'ಜೈ ಬಾಂಗ್ಲಾ' ಘೋಷಣೆ ಕೂಗಿದ ಆರೋಪದ ಮೇಲೆ ಬಂಧಿತರಾದ ಪಶ್ಚಿಮ ಬಂಗಾಳದ ಮಹಿಳೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನ್ಯಾಯಮೂರ್ತಿ ಎಸ್.ರಾಚಯ್ಯ...

ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಡಿಜೆ, ಐಟಂ ಹಾಡು ನಿಷೇಧಿಸಲು ಕರ್ನಾಟಕ ಯೋಜನೆ; ವಿಧಾನಸಭೆಯಲ್ಲಿ ಸಂತೋಷ್ ಲಾಡ್ ಪ್ರಸ್ತಾಪ

ಬೆಂಗಳೂರು: ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಧಾರ್ಮಿಕ ಮೆರವಣಿಗೆಗಳಲ್ಲಿ ಅಬ್ಬರದ ಸಂಗೀತ ಮತ್ತು "ಐಟಂ ಹಾಡುಗಳನ್ನು" ನುಡಿಸುವ ಡಿಸ್ಕ್ ಜಾಕಿಗಳನ್ನು (ಡಿಜೆ) ನಿಷೇಧಿಸುವ ಪರವಾಗಿ ಕರ್ನಾಟಕ ಸರ್ಕಾರವಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ...

ದೆಹಲಿಯ ಪಾಲಂನಲ್ಲಿರುವ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ ಏಳು ಮಂದಿ ಸಾವು

ರಾಷ್ಟ್ರ ರಾಜಧಾನಿಯ ಪಾಲಂ ಪ್ರದೇಶದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಮೂವರು ಮಕ್ಕಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಮಾಹಿತಿ ತಿಳಿದ ತಕ್ಷಣ...

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...