Homeಮುಖಪುಟದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

- Advertisement -
- Advertisement -

ರೈತ ಹೋರಾಟದಲ್ಲಿ ಹುತಾತ್ಮರಾದ 750ಕ್ಕೂ ಹೆಚ್ಚು ರೈತರಿಗೆ ತೆಲಂಗಾಣ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಶನಿವಾರ ಈ ಘೋಷಣೆ ಮಾಡಿದ್ದಾರೆ. ರೈತ ಹೋರಾಟಕ್ಕೆ ನವೆಂಬರ್‌ 26 ರಂದು ಒಂದು ವರ್ಷ ತುಂಬಲಿದೆ.

ವಿವಾದಿತ ಕೃಷಿ ಕಾನೂನುಗಳ ರದ್ದತಿ ಮತ್ತು ಕನಿಷ್ಟ ಬೆಂಬಲ ಬೆಲೆ ಖಾತರಿ ನೀಡುವ ಕಾನೂನು ಜಾರಿಗಾಗಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಒಕ್ಕೂಟ ಸರ್ಕಾರ ನವೆಂಬರ್‌ 19 ರಂದು ಈ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಆದರೆ, ಸಂವಿಧಾನಾತ್ಮಕವಾಗಿ ಕಾಯ್ದೆಗಳನ್ನು ರದ್ದುಗೊಳಿಸುವವರೆಗೂ ಪ್ರತಿಭಟನೆ ಹಿಂತೆಗೆದುಕೊಳ್ಳುವುದಿಲ್ಲ ಎಂದು ರೈತ ನಾಯಕರು ಎಚ್ಚರಿಸಿದ್ದಾರೆ.

“ರೈತ ಆಂದೋಲನದ ವೇಳೆ ಸಾವನ್ನಪ್ಪಿದ ರೈತರ ಕುಟುಂಬಕ್ಕೆ ತಮ್ಮ ಸರ್ಕಾರ ತಲಾ 3 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಿದೆ. ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ರೂಪಾಯಿ ಪರಿಹಾರವನ್ನು ಕೇಂದ್ರ ಸರ್ಕಾರ ಘೋಷಿಸಬೇಕು” ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ರೈತರ ಹೋರಾಟದ ಗೆಲುವು ಮುಂದಿನ ಸಂಘಟನೆಗೆ ಚಿಮ್ಮು ಹಲಗೆಯಾಗಲಿದೆ: ಶ್ರೀಪಾದ್ ಭಟ್

ಪರಿಹಾರವನ್ನು ಘೋಷಿಸುವ ಜೊತೆಗೆ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಹೂಡಿರುವ ಎಲ್ಲಾ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ಕೆಸಿಆರ್‌ ಒತ್ತಾಯಿಸಿದ್ದಾರೆ. ಪ್ರಧಾನಮಂತ್ರಿ ಗುರುನಾನಕ್ ಜಯಂತಿಯ ಸಂದರ್ಭದಲ್ಲಿ ಮೂರು ಕಾನೂನುಗಳ ರದ್ದುಗೊಳಿಸಲಾಗವುದು ಎಂದು ಘೋಷಿಸಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ ಕೂಡ ಟ್ವೀಟ್ ಮಾಡಿ, “ಕೃಷಿ‌ ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕು” ಎಂದು ಒತ್ತಾಯಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ತೆಲಂಗಾಣದ ರೈತರಿಗೆ ಅಭಯ ನೀಡಿದ ಸಿಎಂ ರೇವಂತ್‌ ರೆಡ್ಡಿ: ಕಾಂಗ್ರೆಸ್‌ ಸರಕಾರದಿಂದ 2 ಲಕ್ಷದವರೆಗಿನ...

0
ತೆಲಂಗಾಣ ಕಾಂಗ್ರೆಸ್‌ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಹತ್ವದ ಹೇಳಿಕೆಯನ್ನು ನೀಡಿದ್ದು, ಆಗಸ್ಟ್ 15ರೊಳಗೆ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಪ್ರಚಾರದ ಅಂಗವಾಗಿ ಸೋಮವಾರ ಸಂಜೆ...