Homeಮುಖಪುಟಸಂಸದ ಸುಬ್ರಮಣಿಯನ್ ಸ್ವಾಮಿ, ಸಿಎಂ ಹೇಮಂತ್ ಸೊರೆನ್, ರೈತನಾಯಕ ರಾಕೇಶ್ ಟಿಕಾಯತ್ ಭೇಟಿಯಾದ ತೆಲಂಗಾಣ ಸಿಎಂ

ಸಂಸದ ಸುಬ್ರಮಣಿಯನ್ ಸ್ವಾಮಿ, ಸಿಎಂ ಹೇಮಂತ್ ಸೊರೆನ್, ರೈತನಾಯಕ ರಾಕೇಶ್ ಟಿಕಾಯತ್ ಭೇಟಿಯಾದ ತೆಲಂಗಾಣ ಸಿಎಂ

- Advertisement -
- Advertisement -

ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ ರಾವ್ ಅವರು ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. ಈ ಹಿನ್ನೆಲೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ರೈತ ನಾಯಕರು ಮತ್ತು ಸಮಾನ ಮನಸ್ಕ ರಾಜಕಾರಣಿಗಳನ್ನು ಭೇಟಿಯಾಗುತ್ತಿದ್ದಾರೆ.

ನವದೆಹಲಿಯಲ್ಲಿ ಮೊಕ್ಕಾಂ ಹೂಡಿರುವ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಗುರುವಾರ ಬಿಜೆಪಿ ರಾಜ್ಯಸಭಾ ಸದಸ್ಯ ಡಾ.ಸುಬ್ರಮಣಿಯನ್ ಸ್ವಾಮಿ ಮತ್ತು ಭಾರತೀಯ ಕಿಸಾನ್ ಯೂನಿಯನ್ ವ ಹಾಗೂ ರೈತ ಮುಖಂಡ ರಾಕೇಶ್ ಸಿಂಗ್ ಟಿಕಾಯತ್ ಅವರನ್ನು ಭೇಟಿ ಮಾಡಿದ್ದಾರೆ.

ಇಂದು ಕೆ. ಚಂದ್ರಶೇಖರ ರಾವ್ ನೇತೃತ್ವದ ತೆಲಂಗಾಣ ನಿಯೋಗ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರನ್ನು
ಅವರ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ಬಿಜೆಪಿ ಸರ್ಕಾರದ ನೀತಿಗಳ ವಿರುದ್ಧ ತೀಕ್ಷ್ಣ ಟೀಕೆಗಳಿಗೆ ಹೆಸರುವಾಸಿಯಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ರಾಕೇಶ್ ಟಿಕಾಯತ್ ಅವರು ದೆಹಲಿಯಲ್ಲಿ ಇತ್ತೀಚಿಗೆ ಮುಕ್ತಾಯಗೊಂಡ ಐತಿಹಾಸಿಕ ರೈತ ಹೋರಾಟದ ನೇತೃತ್ವ ವಹಿಸಿದ್ದ ರೈತ ನಾಯಕರಲ್ಲಿ ಒಬ್ಬರು. ಈ ಹೋರಾಟ ಬಿಜೆಪಿ ಸರ್ಕಾರವನ್ನು ರೈತರ ಮುಮದೆ ಸೋಲುವಂತೆ ಮಾಡಿ, ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಮಾಡಿತ್ತು.

 

ಬಿಜೆಪಿಯ “ಜನವಿರೋಧಿ” ನೀತಿಗಳ ವಿರುದ್ಧ ಅವರ ಅಭಿಯಾನ ಆರಂಭಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ನಟ ಪ್ರಕಾಶ್ ರೈ ಜೊತೆಗೆ ಕೆಲ ದಿನಗಳ ಹಿಂದಷ್ಟೇ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಮತ್ತು ದೇಶದ ಹಿರಿಯ ರಾಜಕಾರಣಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿದ್ದರು.

ಬಿಜೆಪಿಯು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕೆಸಿಆರ್‌ ಅವರು ಅಭಿಯಾನ ಆರಂಭಿಸಿದ್ದು, ಬಿಜೆಪಿಯೇತರ ಪಕ್ಷಗಳು, ಸಮಾನ ಮನಸ್ಕರು, ವಿರೋಧ ಪಕ್ಷಗಳ ನಾಯಕರನ್ನು ಭೇಟಿಯಾಗುತ್ತಿದ್ದಾರೆ.


ಇದನ್ನೂ ಓದಿ: ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಅಭಿಯಾನ: ಉದ್ಧವ್ ಠಾಕ್ರೆ ಭೇಟಿಯಾದ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮಹತ್ವಾಕಾಂಕ್ಷಿ ಚಂದ್ರಶೇಖರ್ ನಂಬಲರ್ಹ ವ್ಯಕ್ತಿಯೆಂದು ನನಗನಿಸುತ್ತಿಲ್ಲ. ನರಹಂತಕನನ್ನು ತೊಲಗಿಸಬೇಕಾದ ಅನಿವಾರ್ಯತೆಯಲ್ಲಿ ಅವರ ಜೊತೆ ಕೈಜೋಡಿಸಿ, ಆದರೆ ಇನ್ನೊಬ್ಬ ಸರ್ವಾಧಿಕಾರಿ ಸೃಷ್ಟಿಯಾಗದಂತೆ ಎಚ್ಚರಿಕೆ ವಹಿಸಿ.

LEAVE A REPLY

Please enter your comment!
Please enter your name here

- Advertisment -

Must Read

ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣ: ಅರವಿಂದ್ ಕೇಜ್ರಿವಾಲ್ ನಿವಾಸದ ಹೊಸ ವೀಡಿಯೊ ವೈರಲ್

0
ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಯ ಮನೆಯೊಳಗೆ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಎಎಪಿ ನಾಯಕಿ ಸ್ವಾತಿ ಮಲಿವಾಲ್ ಅವರು,...