Homeಮುಖಪುಟಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಅಭಿಯಾನ: ಉದ್ಧವ್ ಠಾಕ್ರೆ ಭೇಟಿಯಾದ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

ಬಿಜೆಪಿಯ ಜನವಿರೋಧಿ ನೀತಿಗಳ ವಿರುದ್ಧ ಅಭಿಯಾನ: ಉದ್ಧವ್ ಠಾಕ್ರೆ ಭೇಟಿಯಾದ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್

- Advertisement -
- Advertisement -

ಬಿಜೆಪಿಯ “ಜನವಿರೋಧಿ” ನೀತಿಗಳ ವಿರುದ್ಧ ಅವರ ಅಭಿಯಾನ ಆರಂಭಿಸಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಇಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾಗಿದ್ದಾರೆ. ಜೊತೆಗೆ ದೇಶದ ಹಿರಿಯ ರಾಜಕಾರಣಿ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಲಿದ್ದಾರೆ.

ಮಹಾರಾಷ್ಟ್ರದ ಆಡಳಿತಾರೂಢ ಶಿವಸೇನೆಯ ಅಧ್ಯಕ್ಷ ಉದ್ಧವ್ ಠಾಕ್ರೆ ಕಳೆದ ವಾರ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಅವರಿಗೆ ದೂರವಾಣಿ ಕರೆ ಮಾಡಿ ಮುಂಬೈಗೆ ಆಹ್ವಾನಿಸಿದ್ದರು. ಬಿಜೆಪಿಯು ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿರುವ ಕೆಸಿಆರ್‌ ಅವರು ಅಭಿಯಾನ ಆರಂಭಿಸಿದ್ದು, ಇವರ ಈ ಹೋರಾಟಕ್ಕೆ ಉದ್ಧವ್ ಠಾಕ್ರೆ ಸಂಪೂರ್ಣ ಬೆಂಬಲ ಘೋಷಿಸಿದ್ದರು.

ಇಂದು ಮಧ್ನಾಹ್ನ ಚಂದ್ರಶೇಖರ್‌ ರಾವ್ ಪ್ರಸ್ತುತ ಠಾಕ್ರೆ ಮತ್ತು ಅವರ ಸಚಿವ ಸಂಪುಟವನ್ನು ಭೇಟಿಯಾಗಿದ್ದಾರೆ. ಇವರಿಗೆ ನಟ ಪ್ರಕಾಶ್ ರೈ ಸಾಥ್ ನೀಡಿದ್ದಾರೆ. ಸಂಜೆ ಶರದ್ ಪವಾರ್ ಅವರನ್ನು ಭೇಟಿ ಮಾಡಲಿದ್ದಾರೆ.

ಕಳೆದ ವರ್ಷ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಠಾಕ್ರೆ ಮತ್ತು ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದರು.

ಇದನ್ನೂ ಓದಿ: ಸಿಂಧೂರ ಧರಿಸುವುದು ನನ್ನ ಆಯ್ಕೆ, ಹಿಜಾಬ್ ಧರಿಸುವುದು ಮುಸ್ಕಾನ್ ಆಯ್ಕೆ: ’ಹಮ್ ಸಬ್ ಹಿಂದೂಸ್ತಾನಿ’ ಎಂದ ತೆಲಂಗಾಣ ಸಿಎಂ ಪುತ್ರಿ ಕವಿತಾ

“ದೇಶವನ್ನು ವಿಭಜಕ ಶಕ್ತಿಗಳಿಂದ ರಕ್ಷಿಸಲು ಸರಿಯಾದ ಸಮಯದಲ್ಲಿ ಧ್ವನಿ ಎತ್ತಿದ್ದಾರೆ” ಎಂದು ಉದ್ಧವ್ ಠಾಕ್ರೆ ಸೂಚಿಸಿದ್ದಾರೆ. ರಾವ್ ಅವರನ್ನು ಭೇಟಿಯಾದಾಗ ಈ ವಿಷಯದ ಬಗ್ಗೆ ಮುಂದಿನ ಕ್ರಮವನ್ನು ಚರ್ಚಿಸಲಾಗುವುದು ಎಂದು ಸಿಎಂ ಕಚೇರಿ ತಿಳಿಸಿತ್ತು.

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಅದರ “ಜನವಿರೋಧಿ” ನೀತಿಗಳಿಗಾಗಿ ಹೊರಹಾಕಬೇಕು ಎಂದು ಹೇಳಿರುವ ರಾವ್, ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುವುದಾಗಿ ಹೇಳಿದ್ದರು. ತೆಲಂಗಾಣದಲ್ಲಿ ಟಿಆರ್‌ಎಸ್ ಮತ್ತು ಬಿಜೆಪಿ ನಡುವೆ ಹಲವು ತಿಂಗಳುಗಳಿಂದ ವಿವಿಧ ವಿಷಯಗಳ ಕುರಿತು ತೀವ್ರ ಮಾತಿನ ಚಕಮಕಿ ನಡೆಯುತ್ತಿವೆ.

ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್ ಅವರು 2018 ರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳ ಮೈತ್ರಿಯನ್ನು ಒಟ್ಟುಗೂಡಿಸಲು ಪ್ರಯತ್ನಿಸುತ್ತಿದ್ದಾರೆ. 2019ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ, ರಾವ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಸೇರಿದಂತೆ ಹಲವಾರು ರಾಜಕೀಯ ನಾಯಕರನ್ನು ಭೇಟಿಯಾಗಿದ್ದರು.


ಇದನ್ನೂ ಓದಿ: ಬಿಜೆಪಿಯನ್ನು ಬಂಗಾಳಕೊಲ್ಲಿಗೆ ಎಸೆಯಿರಿ: ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್‌ ಕರೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...