Homeಮುಖಪುಟತೆಲಂಗಾಣದ ರೈತರಿಗೆ ಅಭಯ ನೀಡಿದ ಸಿಎಂ ರೇವಂತ್‌ ರೆಡ್ಡಿ: ಕಾಂಗ್ರೆಸ್‌ ಸರಕಾರದಿಂದ 2 ಲಕ್ಷದವರೆಗಿನ ರೈತರ...

ತೆಲಂಗಾಣದ ರೈತರಿಗೆ ಅಭಯ ನೀಡಿದ ಸಿಎಂ ರೇವಂತ್‌ ರೆಡ್ಡಿ: ಕಾಂಗ್ರೆಸ್‌ ಸರಕಾರದಿಂದ 2 ಲಕ್ಷದವರೆಗಿನ ರೈತರ ಕೃಷಿ ಸಾಲಮನ್ನಾ

- Advertisement -
- Advertisement -

ತೆಲಂಗಾಣ ಕಾಂಗ್ರೆಸ್‌ ಸರಕಾರದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಹತ್ವದ ಹೇಳಿಕೆಯನ್ನು ನೀಡಿದ್ದು, ಆಗಸ್ಟ್ 15ರೊಳಗೆ 2 ಲಕ್ಷ ರೂ.ವರೆಗಿನ ಕೃಷಿ ಸಾಲವನ್ನು ಮನ್ನಾ ಮಾಡುವುದಾಗಿ ಹೇಳಿದ್ದಾರೆ.

ಲೋಕಸಭೆ ಚುನಾವಣೆಯ ಪ್ರಚಾರದ ಅಂಗವಾಗಿ ಸೋಮವಾರ ಸಂಜೆ ನಾರಾಯಣಪೇಟೆಯಲ್ಲಿ ನಡೆದ ಕಾಂಗ್ರೆಸ್ ‘ಜನ ಜಾತ್ರೆ ಸಭಾ’ದಲ್ಲಿ ಮಾತನಾಡಿದ ರೇವಂತ್‌ ರೆಡ್ಡಿ, ಆಗಸ್ಟ್ 15 ರೊಳಗೆ ರೈತರ ಸಾಲಮನ್ನಾ ಮಾಡುವುದಾಗಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡುವ ಭರವಸೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ ರೇವಂತ್‌ ರೆಡ್ಡಿ, ಲೋಕಸಭೆ ಚುನಾವಣೆಯ ಮಾದರಿ ನೀತಿ ಸಂಹಿತೆಯಿಂದಾಗಿ ಇಲ್ಲಿಯವರೆಗೆ ಸಾಲ ಮನ್ನಾ ಮಾಡಲು ಸಾಧ್ಯವಾಗಲಿಲ್ಲ. ಮುಂದಿನ ಬೆಳೆ ಹಂಗಾಮಿನಿಂದ ರೈತರಿಗೆ ಪ್ರತಿ ಕ್ವಿಂಟಾಲ್ ಭತ್ತಕ್ಕೆ 500 ರೂಪಾಯಿ ಬೋನಸ್ ನೀಡಲಿದೆ ಎಂದು ರೇವಂತ್ ರೆಡ್ಡಿ ರೈತರಿಗೆ ಭರವಸೆ ನೀಡಿದ್ದಾರೆ.

ಲೋಕಸಭೆ ಚುನಾವಣೆ ಮುಗಿದ ಎರಡು ತಿಂಗಳೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ, ಸರ್ಕಾರದ ಯೋಜನೆಗಳನ್ನು ‘ಇಂದಿರಮ್ಮ’ ಸಮಿತಿಗಳ ಮೂಲಕ ಜಾರಿಗೊಳಿಸಲಾಗುವುದು, ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ಸಮಿತಿಗೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿರುವ 17 ಲೋಕಸಭಾ ಸ್ಥಾನಗಳ ಪೈಕಿ ಐದರಲ್ಲಿ ಗೆಲುವು ಸಾಧಿಸಲು ಬಿಜೆಪಿಯೊಂದಿಗೆ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ರಹಸ್ಯ ಒಪ್ಪಂದ ಮಾಡಿಕೊಂಡಿದೆ ಎಂದು ಅವರು ಆರೋಪಿಸಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿನ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಜೈಲಿನಲ್ಲಿರುವ ಮಗಳು ಕೆ.ಕವಿತಾಗೆ ಜಾಮೀನು ಪಡೆಯಲು ಬಿಆರ್‌ಎಸ್ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಅವರು ತಮ್ಮ ಪಕ್ಷವನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಡಮಾನವಿಟ್ಟಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ 15 ಲೋಕಸಭಾ ಸ್ಥಾನಗಳನ್ನು ಕಾಂಗ್ರೆಸ್ ಗೆದ್ದರೆ ರಾಜ್ಯ ಸಚಿವ ಸಂಪುಟದಲ್ಲಿ ಮುದಿರಾಜ್ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲಾಗುವುದು ಎಂದು ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಹೇಳಿದ್ದಾರೆ. ಇದಲ್ಲದೆ ರಾಜ್ಯದ ಜನಸಂಖ್ಯೆಯ ಶೇ.10ರಷ್ಟಿರುವ ಮುದಿರಾಜ್ ಸಮುದಾಯಕ್ಕೆ ಕೆಸಿಆರ್ ಅವರು ಒಂದೇ ಒಂದು ಟಿಕೆಟ್ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿ.ಆರ್.ಎಸ್ ಸರ್ಕಾರ 10 ವರ್ಷಗಳಿಂದ ಮುದಿರಾಜ್ ಸಮುದಾಯಕ್ಕೆ ಏನೂ ಮಾಡಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಣಿಪುರದಲ್ಲಿ ಹಿಂಸಾಚಾರಕ್ಕೆ ಉತ್ತೇಜನ ನೀಡಿದ ಬಿಜೆಪಿ ಸಿಎಂ ಬಿರೇನ್ ಸಿಂಗ್: ಅಸ್ಸಾಂ ರೈಫಲ್ಸ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...