Homeಮುಖಪುಟತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

ತೆಲಂಗಾಣ | ತಮ್ಮದೇ ಸರ್ಕಾರದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್‌ಸಿ!

- Advertisement -
- Advertisement -

ತೆಲಂಗಾಣದ ಕಾಂಗ್ರೆಸ್ ಸರ್ಕಾರ ಮಂಗಳವಾರ (ಫೆ.4) ವಿಧಾನಸಭೆಯಲ್ಲಿ ಮಂಡಿಸಿದ ಸಾಮಾಜಿಕ-ಆರ್ಥಿಕ, ರಾಜಕೀಯ, ಜಾತಿ, ಶಿಕ್ಷಣ ಮತ್ತು ಉದ್ಯೋಗ ಸಮೀಕ್ಷೆ (ಜಾತಿ ಸಮೀಕ್ಷೆ) ವರದಿಯನ್ನು ವಿಧಾನಪರಿಷತ್‌ನ ಕಾಂಗ್ರೆಸ್‌ ಸದಸ್ಯ ಚಿಂತಪಾಂಡು ನವೀನ್ ಅಲಿಯಾಸ್ ತೀನ್ಮಾರ್ ಮಲ್ಲಣ್ಣ ಸುಟ್ಟು ಹಾಕಿದ್ದಾರೆ.

ನಾನು ಈ ವರದಿಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದು ಹಿಂದುಳಿದ ಜಾತಿಗಳ ಭವಿಷ್ಯವನ್ನು ನಾಶ ಮಾಡುವ ಪಿತೂರಿ ಎಂದು ಮಲ್ಲಣ್ಣ ಹೇಳಿದ್ದಾರೆ. ವರದಿಯಲ್ಲಿರುವ ಅಂಕಿ ಅಂಶಗಳು ನಕಲಿ. ಹಿಂದುಳಿದ ಜಾತಿಗಳು ಇದನ್ನು ಒಪ್ಪುವುದಿಲ್ಲ. ಸಮೀಕ್ಷೆ ವೇಳೆ 40 ಲಕ್ಷ ಹಿಂದುಳಿದ ಜಾತಿಗಳ ಜನರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಸರ್ಕಾರ ನಕಲಿ ಅಂಕಿ ಅಂಶಗಳೊಂದಿಗೆ ಹಿಂದುಳಿದ ಜಾತಿಗಳನ್ನು ದಾರಿ ತಪ್ಪಿಸಿದೆ ಮತ್ತು ವಂಚಿಸಿದೆ. ರಾಜ್ಯದ ಜನ ಸಂಖ್ಯೆಯಲ್ಲಿ ಹಿಂದುಳಿದ ಹಿಂದೂಗಳ ಸಂಖ್ಯೆ ಶೇಖಡ 60ರಷ್ಟಿದೆ. ಆದರೆ, ಸಮೀಕ್ಷೆ ಕೇವಲ 46 ಶೇಖಡ ಎಂದು ತೋರಿಸಿದೆ. ಇತರ ಜಾತಿಗಳ ಜನ ಸಂಖ್ಯೆ ಶೇಖಡ 15 ಎಂದಿದೆ. ವಾಸ್ತವದಲ್ಲಿ ಅವರು ಕೇವಲ 8 ಶೇಖಡ ಮಾತ್ರ ಇದ್ದಾರೆ ಎಂದು ಮಲ್ಲಣ್ಣ ಹೇಳಿದ್ದಾರೆ.

ಈ ಸಮೀಕ್ಷೆಯ ಹಿಂದೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಮಾಜಿ ಸಚಿವ ಕೆ. ಜನಾ ರೆಡ್ಡಿ ಅವರ ಕೈವಾಡವಿದೆ ಎಂದು ಮಲ್ಲಣ್ಣ ಆರೋಪಿಸಿದ್ದಾರೆ.

ಮಲ್ಲಣ್ಣ ಅವರ ನಡೆಗೆ ಕಾಂಗ್ರೆಸ್ ಪಕ್ಷದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಜಾತಿ ಸಮೀಕ್ಷೆ ವರದಿಗೆ ಬೆಂಕಿ ಹಚ್ಚಿದ್ದಕ್ಕಾಗಿ ಮತ್ತು ರೆಡ್ಡಿ ಸಮುದಾಯದ ವಿರುದ್ಧ ಮಲ್ಲಣ್ಣ ನೀಡಿರುವ ಹೇಳಿಕೆಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿಯ (ಟಿಪಿಸಿಸಿ) ಶಿಸ್ತು ಸಮಿತಿ ಮಲ್ಲಣ್ಣ ಅವರಿಗೆ ಶೋಕಾಸ್ (ಕಾರಣ ಕೇಳಿ) ನೋಟಿಸ್ ನೀಡಿದೆ. ನಿಮ್ಮ ವಿರುದ್ದ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? ಎಂದು ಪ್ರತಿಕ್ರಿಯೆ ಕೇಳಿದೆ.

ಮಲ್ಲಣ್ಣ ವಿರುದ್ಧ ಕ್ರಮ ಕೈಗೊಳ್ಳುವಂತೆ ಟಿಪಿಸಿಸಿ ಅಧ್ಯಕ್ಷ ಮಹೇಶ್ ಕುಮಾರ್ ಗೌಡ್ ಅವರಿಗೆ ಹಲವಾರು ನಾಯಕರು ಮತ್ತು ಕಾರ್ಯಕರ್ತರು ಮನವಿ ಮಾಡಿದ್ದಾರೆ. ಮಲ್ಲಣ್ಣ ತಮ್ಮ ಮಿತಿಯನ್ನು ಮೀರುತ್ತಿದ್ದಾರೆ ಎಂದು ಯಾದಾದ್ರಿ ಭೋಂಗಿರ್‌ನ ಕಾಂಗ್ರೆಸ್ ಶಾಸಕ ಕುಂಭಮ್ ಅನಿಲ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಪಕ್ಷದ ನಾಯಕತ್ವ ಶೀಘ್ರದಲ್ಲೇ ಅವರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.

ಈ ನಡುವೆ ರೆಡ್ಡಿ ಸಮುದಾಯದ ಮುಖಂಡರು ಮಲ್ಲಣ್ಣ ವಿರುದ್ಧ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ದೂರು ನೀಡಿದ್ದಾರೆ. ಎರಡು ದಿನಗಳ ಹಿಂದೆ ವಾರಂಗಲ್‌ನಲ್ಲಿ ಹಿಂದುಳಿದ ಜಾತಿಗಳ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮಲ್ಲಣ್ಣ, ರೆಡ್ಡಿಗಳ ವಿರುದ್ಧ ಅಸಭ್ಯ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿದ್ದಾರೆ.

ತೀನ್ಮಾರ್ ಮಲ್ಲಣ್ಣ ಎಂದೇ ಪ್ರಸಿದ್ಧರಾಗಿರುವ ಚಿಂತಪಾಂಡು ನವೀನ್ ಅವರು ಸಾಮಾಜಿಕ ಮಾಧ್ಯಮ (ಯೂಟ್ಯೂಬ್) ಚಾನೆಲ್ ನಡೆಸುತ್ತಿದ್ದಾರೆ. ಹಿಂದಿನ ಬಿಆರ್‌ಎಸ್ ಸರ್ಕಾರದ ಕಟು ಟೀಕಾಕಾರರಾಗಿದ್ದ ಇವರು, ನಂತರ ಬಿಜೆಪಿ ಸೇರಿದ್ದರು. ನವೆಂಬರ್ 2023ರಲ್ಲಿ ಕೇಸರಿ ಪಕ್ಷ ತೊರೆದು ಕಾಂಗ್ರೆಸ್ ಸೇರಿದರು. ಜೂನ್ 2024ರಲ್ಲಿ ಕಾಂಗ್ರೆಸ್ ಟಿಕೆಟ್‌ನಲ್ಲಿ ವಾರಂಗಲ್-ನಲ್ಗೊಂಡ-ಖಮ್ಮಾಮ್ ಪದವೀಧರ ಎಂಎಲ್‌ಸಿ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

ತೆಲಂಗಾಣ | ವಿಧಾನಸಭೆಯಲ್ಲಿ ಜಾತಿ ಸಮೀಕ್ಷೆ ಮಂಡಿಸಿದ ಸಿಎಂ ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...