Homeಮುಖಪುಟತೆಲಂಗಾಣ: ಪೊಲೀಸ್ ಠಾಣೆಯಲ್ಲಿ ದಲಿತ ಮಹಿಳೆಗೆ ಚಿತ್ರಹಿಂಸೆ ಆರೋಪ; ತನಿಖೆಗೆ ಆದೇಶ

ತೆಲಂಗಾಣ: ಪೊಲೀಸ್ ಠಾಣೆಯಲ್ಲಿ ದಲಿತ ಮಹಿಳೆಗೆ ಚಿತ್ರಹಿಂಸೆ ಆರೋಪ; ತನಿಖೆಗೆ ಆದೇಶ

- Advertisement -
- Advertisement -

ಇಲ್ಲಿಗೆ ಸಮೀಪದ ಶಾದ್‌ನಗರ ಪೊಲೀಸ್ ಠಾಣೆಯಲ್ಲಿ ತನಗೆ ಪೊಲೀಸರು ಚಿತ್ರಹಿಂಸೆ ನೀಡಿದ್ದಾರೆ ಎಂದು ದಲಿತ ಮಹಿಳೆಯೊಬ್ಬರು ಆರೋಪಿಸಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಚಿನ್ನ ಕಳ್ಳತನದ ಆರೋಪದ ಮೇಲೆ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆಸಿದ ನಂತರ, ಆಕೆಯ ಅಪ್ರಾಪ್ತ ಮಗನ ಸಮ್ಮುಖದಲ್ಲಿ ಹಲ್ಲೆ ನಡೆಸಲಾಯಿತು ಎಂದು ಹೇಳಲಾಗಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮಹಿಳೆ, “ತನ್ನ ಪತಿಯನ್ನು ಮೊದಲು ಥಳಿಸಿ ನಂತರ ಬಿಡುಗಡೆ ಮಾಡಲಾಯಿತು. ನಂತರ, ನನ್ನ ಸೀರೆ ತೆಗೆದು ಶಾರ್ಟ್ಸ್ ಧರಿಸುವಂತೆ ಒತ್ತಾಯಿಸಲಾಯಿತು. ನನ್ನ ಮೇಲೆ ಹಲ್ಲೆ ನಡೆಸುವ ಮುನ್ನ ಪೊಲೀಸ್ ಸಿಬ್ಬಂದಿ ಕೈ ಕಾಲುಗಳನ್ನು ಕಟ್ಟಿ ಹಾಕಿದ್ದರು. ಎಷ್ಟೇ ಮನವಿ ಮಾಡಿದರೂ ಅವರು ನನ್ನನ್ನು ಬಿಡಲಿಲ್ಲ” ಎಂದು ಹೇಳಿದ್ದಾರೆ.

ಆರೋಪಗಳಿಗೆ ಪ್ರತಿಕ್ರಿಯಿಸಿದ ಸೈಬರಾಬಾದ್ ಪೊಲೀಸ್ ಕಮಿಷನರ್ ಅವಿನಾಶ್ ಮೊಹಂತಿ, “ಶಾದ್‌ನಗರದ ಡಿಐ (ಡಿಟೆಕ್ಟಿವ್ ಇನ್ಸ್‌ಪೆಕ್ಟರ್) ಅವರನ್ನು ಕಮಿಷನರೇಟ್ ಪ್ರಧಾನ ಕಚೇರಿಗೆ ವರ್ಗಾವಣೆ ಮಾಡಲಾಗಿದೆ, ಅವರ ಮೇಲಿನ ಆರೋಪಗಳ ವಿಚಾರಣೆ ಬಾಕಿಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾದ್‌ನಗರದ ಎಸಿಪಿ ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದು, ತನಿಖಾ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಸುಪ್ರೀಂ ಕೋರ್ಟ್‌ ‘ಒಳ ಮೀಸಲಾತಿ’ ತೀರ್ಪು; ‘ಎಲ್ಲವನ್ನೂ ಒಪ್ಪುವುದಿಲ್ಲ’ ಎಂದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...