Homeಮುಖಪುಟತೆಲಂಗಾಣ | ಎಲೆಕ್ಟ್ರಿಕ್ ವಾಹನಗಳಿಗೆ 100% ರಸ್ತೆ ತೆರಿಗೆ & ನೋಂದಣಿ ಶುಲ್ಕ ವಿನಾಯಿತಿ!

ತೆಲಂಗಾಣ | ಎಲೆಕ್ಟ್ರಿಕ್ ವಾಹನಗಳಿಗೆ 100% ರಸ್ತೆ ತೆರಿಗೆ & ನೋಂದಣಿ ಶುಲ್ಕ ವಿನಾಯಿತಿ!

- Advertisement -
- Advertisement -

ರಾಜ್ಯದಲ್ಲಿ ಖರೀದಿಸುವ ಎಲ್ಲಾ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕಕ್ಕೆ 100% ವಿನಾಯಿತಿಯನ್ನು ತೆಲಂಗಾಣ ಸರ್ಕಾರವು ನವೆಂಬರ್ 17 ಭಾನುವಾರ ಘೋಷಿಸಿದೆ. ಈ ನೀತಿಯು ಡಿಸೆಂಬರ್ 31, 2026 ರವರೆಗೆ ಎರಡು ವರ್ಷಗಳವರೆಗೆ ಮಾನ್ಯವಾಗಿರುತ್ತದೆ. ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು, ನಾಲ್ಕು ಚಕ್ರಗಳು, ವಾಣಿಜ್ಯ ಪ್ರಯಾಣಿಕ ವಾಹನಗಳು (ಟ್ಯಾಕ್ಸಿಗಳು ಮತ್ತು ಆಟೋ ರಿಕ್ಷಾಗಳು ಸೇರಿದಂತೆ), ಎಲೆಕ್ಟ್ರಿಕ್ ಲೈಟ್‌ವೈಟ್ ಸರಕು ವಾಹಕಗಳು, ಟ್ರ್ಯಾಕ್ಟರ್‌ಗಳು ಮತ್ತು ಬಸ್‌ಗಳಿಗೆ ಇದು ಅನ್ವಯಿಸುತ್ತದೆ.

ತೆಲಂಗಾಣದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್ ಅವರು ಈ ಘೋಷಣೆ ಮಾಡಿದ್ದು, ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಆಗುತ್ತಿರುವ ವಾಯು ಮಾಲಿನ್ಯದ ಸಮಸ್ಯೆಯು ಹೈದರಾಬಾದ್‌ನಲ್ಲಿ ಕೂಡಾ ಆಗದಿರಲಿ ಎಂಬ ಉದ್ದೇಶಕ್ಕಾಗಿ ಈ ಉಪಕ್ರಮ ಜಾರಿಗೆ ತರಲಾಗಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯ ಬಗ್ಗೆ ಜಾಗೃತಿ ಮೂಡಿಸುವ ಮಹತ್ವವನ್ನು ಸಚಿವರು ಒತ್ತಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಬಳಕೆದಾರರ ಅನುಕೂಲಕ್ಕಾಗಿ ಚಾರ್ಜಿಂಗ್ ಸ್ಟೇಷನ್‌ಗಳ ದೃಢವಾದ ಜಾಲವನ್ನು ಸ್ಥಾಪಿಸಲು ಸರ್ಕಾರವು ಎಲೆಕ್ಟ್ರಿಕ್ ವಾಹನ ತಯಾರಕರನ್ನು ಒತ್ತಾಯಿಸಿದೆ. ಈ ವಿನಾಯಿತಿಯು ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ನಿರ್ವಹಿಸಲ್ಪಡುವ ಎಲೆಕ್ಟ್ರಿಕ್ ವಾಹನಗಳು ಮತ್ತು ತಮ್ಮ ಉದ್ಯೋಗಿಗಳನ್ನು ಸಾಗಿಸಲು ಉದ್ಯಮಗಳ ಒಡೆತನದ ಬಸ್‌ಗಳಿಗೆ (ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವುದನ್ನು ಹೊರತುಪಡಿಸಿ) ಅನ್ವಯಿಸುತ್ತದೆ.

ದೆಹಲಿ ಮತ್ತು ಗುಜರಾತ್ ನಂತರ ಎಲೆಕ್ಟ್ರಿಕ್ ವೆಹಿಕಲ್ ಮತ್ತು ಎನರ್ಜಿ ಸ್ಟೋರೇಜ್ ನೀತಿಯನ್ನು ಪ್ರಾರಂಭಿಸಿದ ದೇಶದ ಮೂರನೇ ರಾಜ್ಯವಾಗಿದೆ ತೆಲಂಗಾಣ 2020 ರಲ್ಲಿ ಹೊರಹೊಮ್ಮಿತ್ತು. ರಾಜ್ಯವು ಎಲೆಕ್ಟ್ರಿಕ್ ವಾಹನಗಳು, ಶೇಖರಣಾ ವ್ಯವಸ್ಥೆಗಳು ಮತ್ತು ಘಟಕಗಳ ತಯಾರಿಕೆಯ ಕೇಂದ್ರವಾಗಿದೆ. ರಾಜ್ಯ ಸರ್ಕಾರವು ಈ ಕ್ಷೇತ್ರದಲ್ಲಿ 4ಬಿಲಿಯನ್ ಡಾಲರ್‌ ಮೌಲ್ಯದ ಹೂಡಿಕೆಗಳನ್ನು ಆಕರ್ಷಿಸಲು ಮತ್ತು 2030 ರ ವೇಳೆಗೆ ಈ ವಲಯದಲ್ಲಿ 1,20,000 ಉದ್ಯೋಗಗಳನ್ನು ಸೃಷ್ಟಿಸಲು ಬಯಸಿದೆ.

ಇದನ್ನೂ ಓದಿ: ಮಣಿಪುರದ ಪ್ರಸ್ತುತ ಪರಿಸ್ಥಿತಿ ಕುರಿತು ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ ಬರೆಯುತ್ತಾರೆ: ಜೈರಾಮ್ ರಮೇಶ್

ಮಣಿಪುರದ ಪ್ರಸ್ತುತ ಪರಿಸ್ಥಿತಿ ಕುರಿತು ರಾಷ್ಟ್ರಪತಿಗಳಿಗೆ ಖರ್ಗೆ ಪತ್ರ ಬರೆಯುತ್ತಾರೆ: ಜೈರಾಮ್ ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...