Homeಮುಖಪುಟರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ

ರಾಜ್ಯಾದ್ಯಂತ ಗುಟ್ಕಾ, ಪಾನ್ ಮಸಾಲಾ ನಿಷೇಧಿಸಿದ ತೆಲಂಗಾಣ ಸರ್ಕಾರ

- Advertisement -
- Advertisement -

ತಂಬಾಕು ಮತ್ತು ನಿಕೋಟಿನ್ ಹೊಂದಿರುವ ಗುಟ್ಕಾ ಮತ್ತು ಪಾನ್ ಮಸಾಲಾ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ರಾಜ್ಯದಾದ್ಯಂತ ಒಂದು ವರ್ಷದ ಅವಧಿಗೆ ನಿಷೇಧಿಸಿ ತೆಲಂಗಾಣ ಸರ್ಕಾರ  ಆದೇಶ ಹೊರಡಿಸಿದೆ.

ಆಹಾರ ಸುರಕ್ಷತಾ ಆಯುಕ್ತರು ಮೇ 24 ರಂದು ಸಾರ್ವಜನಿಕ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ಆದೇಶ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಮಾನದಂಡಗಳ (ನಿಷೇಧ ಮತ್ತು ಮಾರಾಟದ ನಿರ್ಬಂಧ) ನಿಯಮಾವಳಿ 2011ರ ನಿಯಮಾವಳಿ 2.3.4ರ ಜೊತೆಗೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ಸೆಕ್ಷನ್ 30ರ ಉಪ-ವಿಭಾಗ (2) ರ ಷರತ್ತು (ಎ) ಅಡಿಯಲ್ಲಿ ನಿಷೇಧವನ್ನು ಜಾರಿಗೊಳಿಸಲಾಗಿದೆ.

ಈ ಆದೇಶವು ಹೈದರಾಬಾದ್ ನಗರದ ಮಾರುಕಟ್ಟೆಗಳಲ್ಲಿ ಭಾನುವಾರ (ಮೇ 26) ಮಧ್ಯಾಹ್ನದ ಬಳಿಕ ಪ್ರಭಾವ ಬೀರಿದೆ. ಪಾನ್ ಶಾಪ್ ಮಾಲೀಕರು ಆದೇಶ ಪಾಲನೆಗೆ ಒಪ್ಪಿದ್ದಾರೆ. ಆದರೆ, ಈ ವಲಯದ ಎಲ್ಲರು ಸಹಕಾರ ನೀಡಿಲ್ಲ ಎಂದು ದಿ ಹಿಂದೂ ವರದಿ ಮಾಡಿದೆ.

“ತೆಲಂಗಾಣದಲ್ಲಿ ಸುಮಾರು 1.5 ಲಕ್ಷ ಪಾನ್ ಶಾಪ್‌ಗಳಿವೆ. ನಾವು ಗುಟ್ಕಾ ನಿಷೇಧವನ್ನು ಬೆಂಬಲಿಸುತ್ತೇವೆ ಮತ್ತು ಅನೇಕ ಅಂಗಡಿಗಳು ಈಗಾಗಲೇ ಅದರ ಮಾರಾಟವನ್ನು ನಿಲ್ಲಿಸಿವೆ. ಆದರೆ, ಲಕ್ಷಾಂತರ ಕುಟುಂಬಗಳು ತಮ್ಮ ಜೀವನೋಪಾಯಕ್ಕಾಗಿ ಗುಟ್ಕಾ ಮಾರಾಟ ಅವಲಂಬಿಸಿರುವುದರಿಂದ ಜಗಿಯುವ ತಂಬಾಕು ಮತ್ತು ಜರ್ದಾಕ್ಕೆ ನಿಷೇಧದಿಂದ ವಿನಾಯಿತಿ ನೀಡುವಂತೆ ನಾವು ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತೆಲಂಗಾಣ ಪಾನ್ ಶಾಪ್ ಮಾಲೀಕರ ಸಂಘದ ಅಧ್ಯಕ್ಷ ಮೊಹಮ್ಮದ್ ಸಲಾವುದ್ದೀನ್ ದಖ್ನಿ ಹೇಳಿದ್ದಾರೆ ಎಂದು ದಿ ಹಿಂದೂ ತಿಳಿಸಿದೆ.

ನಮ್ಮ ಸಂಘ ಗುಟ್ಕಾ ನಿಷೇಧ ಸಂಬಂಧ ಈ ಹಿಂದೆ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಮನವಿ ಸಲ್ಲಿಸಿತ್ತು. ರಾಜ್ಯಾದ್ಯಂತ ಅನೇಕ ಪಾನ್ ಶಾಪ್‌ಗಳಲ್ಲಿ ಗುಟ್ಕಾ ಮಾರಾಟ ಮಾಡುವುದಿಲ್ಲ ಎಂಬ ಪೋಸ್ಟರ್‌ಗಳನ್ನು ಸಹ ಪ್ರದರ್ಶಿಸಲಾಗಿದೆ ಎಂದು ಸಲಾವುದ್ದೀನ್ ತಿಳಿಸಿದ್ದಾರೆ ಎಂದು ಹಿಂದೂ ಹೇಳಿದೆ.

ಸರ್ಕಾರದ ಆದೇಶವನ್ನು ನಾವು ಪಾಲಿಸುತ್ತೇವೆ. ಆದರೆ, ನಿಯಮ ಸರಿಯಾದ ರೀತಿಯಲ್ಲಿ ಜಾರಿಯಾಗಬೇಕು. ಇಲ್ಲದಿದ್ದರೆ, ಅಧಿಕಾರಿಗಳು ಜರ್ದಾದಲ್ಲಿ ಸ್ವಲ್ಪ ತಂಬಾಕು ಕಂಡರೆ ಗುಟ್ಕಾ ಮಾರಾಟ ಮಾಡ್ತಿದ್ದಾರೆ ಎಂದು ಅಂಗಡಿ ಮಾಲೀಕರಿಗೆ ತೊಂದರೆ ಕೊಡಬಹುದು ಎಂಬ ಆತಂಕವನ್ನು ಯೂಸುಫ್‌ಗುಡಾದ ವ್ಯಕ್ತಿಯೊಬ್ಬರು ಹೇಳಿದ್ದಾಗಿ ಹಿಂದೂ ತಿಳಿಸಿದೆ.

ಇದನ್ನೂ ಓದಿ : ಪೋರ್ಶೆ ಕಾರು ಅಪಘಾತ ಪ್ರಕರಣ: ಆರೋಪಿಯ ರಕ್ತ ಪರೀಕ್ಷೆ ವರದಿ ತಿರುಚಿದ್ದ ಇಬ್ಬರು ವೈದ್ಯರ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಎನ್‌ಸಿಇಆರ್‌ಟಿ’ಯು ಆರ್‌ಎಸ್‌ಎಸ್‌ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ: ಜೈರಾಮ್ ರಮೇಶ್

0
ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳ ಪರಿಷ್ಕರಣೆ ವಿವಾದದ ಮಧ್ಯೆ, ಸಂಸ್ಥೆಯು 2014 ರಿಂದ ಆರ್‌ಎಸ್‌ಎಸ್ ಅಂಗಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ ಮತ್ತು ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಸೋಮವಾರ ಆರೋಪಿಸಿದ್ದಾರೆ. ನೀಟ್ 2024...