Homeಮುಖಪುಟಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಮುಸ್ಲಿಮರು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಒಳಗೊಂಡ ಜಾತಿ ಗಣತಿ ನಡೆಸುವ ನಿರ್ಣಯವನ್ನು ತೆಲಂಗಾಣ ವಿಧಾನಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರು ಬಿಆರ್‌ಎಸ್, ಎಐಎಂಐಎಂ ಮತ್ತು ಸಿಪಿಐ ಸದಸ್ಯರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿದರು. ತಜ್ಞರ ನೇಮಕ ಸೇರಿದಂತೆ ಸದಸ್ಯರು ನೀಡುವ ಪ್ರತಿಯೊಂದು ಸಲಹೆಯನ್ನು ಪರಿಗಣಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಜಾತಿ ಗಣತಿ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕಾನೂನು ಇಲಾಖೆ ಪರಿಶೀಲನೆ ನಡೆಸಿದ ಬಳಿಕ ನಿರ್ಣಯ ಮಂಡನೆಯಾಗಿದೆ.

“ಜಾತಿ ಗಣತಿಗೆ ಯಾವುದೇ ಕಾನೂನು ತೊಡಕು ಉಂಟಾಗದಂತೆ ನಾವು ಕ್ರಮಕೈಗೊಳ್ಳುತ್ತೇವೆ. ಬಿಆರ್‌ಎಸ್ ಮತ್ತು ಇತರ ಪಕ್ಷಗಳ ಕೆಲವು ಶಾಸಕರು ಜಾತಿ ಗಣತಿ ಬಿಹಾರ ಮತ್ತು ಕರ್ನಾಟಕದಲ್ಲಿ ಕಾನೂನು ತೊಡಕುಗಳನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಿರ್ಣಯ ಅಂಗೀಕರಿಸುವ ಮೊದಲೇ ನಾವು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದೇವೆ. ಮತ್ತೊಮ್ಮೆ ಅವರ ಜೊತೆ ಮಾತುಕತೆ ನಡೆಸಲಾಗುವುದು. ವಿರೋಧ ಪಕ್ಷದ ಸದಸ್ಯರು ಸೇರಿದಂತೆ ಎಲ್ಲರು ನೀಡುವ ಸಲಹೆಗಳನ್ನು ಸ್ವೀಕರಿಸುತ್ತೇವೆ” ಎಂದು ಡಿಸಿಎಂ ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಗೂ ಮುನ್ನ ಜಾತಿ ಗಣತಿಯ ಮಾರ್ಗಸೂಚಿ ರೂಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ ಡಿಸಿಎಂ, ಗಣತಿ ಪೂರ್ಣಗೊಂಡ ಬಳಿಕ ಸಮಗ್ರ ಕುಟುಂಬ ಸಮೀಕ್ಷೆಯಂತೆ ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಜನ ಸಂಖ್ಯೆಯ ಶೇಖಡವಾರು ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ವರದಿಯ ಆಧಾರದ ಮೇಲೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಉನ್ನತಿಗಾಗಿ ಕ್ರಾಂತಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಹಿಂದುಳಿದ ವರ್ಗಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಾತಿ ಗಣತಿ ನಿರ್ಣಯವು ಮೊದಲ ಹೆಜ್ಜೆಯಾಗಿದೆ ಎಂದು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ಬಾಗಿಲು ತೆರೆದಿದೆ’ ಎಂಬ ಲಾಲೂ ಹೇಳಿಕೆ; ಸಿಎಂ ನಿತೀಶ್‌ಕುಮಾರ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...