Homeಮುಖಪುಟಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಜಾತಿ ಗಣತಿಗೆ ನಿರ್ಣಯ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಮುಸ್ಲಿಮರು ಸೇರಿದಂತೆ ರಾಜ್ಯದ ಎಲ್ಲಾ ಸಮುದಾಯಗಳನ್ನು ಒಳಗೊಂಡ ಜಾತಿ ಗಣತಿ ನಡೆಸುವ ನಿರ್ಣಯವನ್ನು ತೆಲಂಗಾಣ ವಿಧಾನಸಭೆ ಶುಕ್ರವಾರ ಸರ್ವಾನುಮತದಿಂದ ಅಂಗೀಕರಿಸಿದೆ.

ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಅವರು ಬಿಆರ್‌ಎಸ್, ಎಐಎಂಐಎಂ ಮತ್ತು ಸಿಪಿಐ ಸದಸ್ಯರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಿದರು. ತಜ್ಞರ ನೇಮಕ ಸೇರಿದಂತೆ ಸದಸ್ಯರು ನೀಡುವ ಪ್ರತಿಯೊಂದು ಸಲಹೆಯನ್ನು ಪರಿಗಣಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘ ಚರ್ಚೆಯ ನಂತರ ಜಾತಿ ಗಣತಿ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿದೆ. ಕಾನೂನು ಇಲಾಖೆ ಪರಿಶೀಲನೆ ನಡೆಸಿದ ಬಳಿಕ ನಿರ್ಣಯ ಮಂಡನೆಯಾಗಿದೆ.

“ಜಾತಿ ಗಣತಿಗೆ ಯಾವುದೇ ಕಾನೂನು ತೊಡಕು ಉಂಟಾಗದಂತೆ ನಾವು ಕ್ರಮಕೈಗೊಳ್ಳುತ್ತೇವೆ. ಬಿಆರ್‌ಎಸ್ ಮತ್ತು ಇತರ ಪಕ್ಷಗಳ ಕೆಲವು ಶಾಸಕರು ಜಾತಿ ಗಣತಿ ಬಿಹಾರ ಮತ್ತು ಕರ್ನಾಟಕದಲ್ಲಿ ಕಾನೂನು ತೊಡಕುಗಳನ್ನು ಎದುರಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಗಾಗಿ, ನಿರ್ಣಯ ಅಂಗೀಕರಿಸುವ ಮೊದಲೇ ನಾವು ಕಾನೂನು ತಜ್ಞರ ಜೊತೆ ಚರ್ಚೆ ನಡೆಸಿದ್ದೇವೆ. ಮತ್ತೊಮ್ಮೆ ಅವರ ಜೊತೆ ಮಾತುಕತೆ ನಡೆಸಲಾಗುವುದು. ವಿರೋಧ ಪಕ್ಷದ ಸದಸ್ಯರು ಸೇರಿದಂತೆ ಎಲ್ಲರು ನೀಡುವ ಸಲಹೆಗಳನ್ನು ಸ್ವೀಕರಿಸುತ್ತೇವೆ” ಎಂದು ಡಿಸಿಎಂ ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಸಾರ್ವತ್ರಿಕ ಚುನಾವಣೆಗೂ ಮುನ್ನ ಜಾತಿ ಗಣತಿಯ ಮಾರ್ಗಸೂಚಿ ರೂಪಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ ಡಿಸಿಎಂ, ಗಣತಿ ಪೂರ್ಣಗೊಂಡ ಬಳಿಕ ಸಮಗ್ರ ಕುಟುಂಬ ಸಮೀಕ್ಷೆಯಂತೆ ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಜನ ಸಂಖ್ಯೆಯ ಶೇಖಡವಾರು ಮಾಹಿತಿ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದ್ದಾರೆ.

ಜಾತಿ ಗಣತಿಯ ವರದಿಯ ಆಧಾರದ ಮೇಲೆ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಉನ್ನತಿಗಾಗಿ ಕ್ರಾಂತಿಕಾರಿ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಹಿಂದುಳಿದ ವರ್ಗಗಳಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಜಾತಿ ಗಣತಿ ನಿರ್ಣಯವು ಮೊದಲ ಹೆಜ್ಜೆಯಾಗಿದೆ ಎಂದು ಭಟ್ಟಿ ವಿಕ್ರಮಾರ್ಕ ತಿಳಿಸಿದ್ದಾರೆ.

ಇದನ್ನೂ ಓದಿ: ‘ಮೈತ್ರಿ ಬಾಗಿಲು ತೆರೆದಿದೆ’ ಎಂಬ ಲಾಲೂ ಹೇಳಿಕೆ; ಸಿಎಂ ನಿತೀಶ್‌ಕುಮಾರ್ ಪ್ರತಿಕ್ರಿಯೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

0
ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ. ಕಿರ್ಗಿಸ್ತಾನ್‌ನಲ್ಲಿರುವ ಭಾರತದ...