ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಏಳು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಉರ್ಕೊಂಡಪೇಟ ಗ್ರಾಮದಲ್ಲಿ ಮಹಿಳೆ ತನ್ನ ಪತಿಯೊಂದಿಗೆ ದೇವಸ್ಥಾನ ದರ್ಶನಕ್ಕೆ ಹೋಗಿ ಆವರಣದಲ್ಲಿ ತಂಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದರು.
ಮಹಿಳೆ ಪ್ರಕೃತಿಯ ಕರೆಗೆ ಹೋಗಿದ್ದಾಗ, ಆರೋಪಿಗಳು ಶನಿವಾರದ ಮಧ್ಯರಾತ್ರಿ ಆಕೆಯನ್ನು ಬಲವಂತವಾಗಿ ದೇವಸ್ಥಾನದ ಬಳಿಯ ನಿರ್ಜನ ಸ್ಥಳಕ್ಕೆ ಕರೆದೊಯ್ದು ಪೊದೆಗಳಲ್ಲಿ ಅತ್ಯಾಚಾರ ಎಸಗಿದ್ದಾರೆ, ರಕ್ಷಿಸಲು ಹೋದ ಸಂತ್ರಸ್ತೆಯ ಪತಿಯನ್ನು ಅವರು ಮರಕ್ಕೆ ಕಟ್ಟಿ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದ ತನಿಖೆ ಆರಂಭಿಸಿದ ನಂತರ, ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ. ಎಲೆಕ್ಟ್ರಿಷಿಯನ್, ಆಟೋ ಚಾಲಕ ಮತ್ತು ಇಬ್ಬರು ಅಡುಗೆಯವರು ಸೇರಿದಂತೆ ಆರೋಪಿಗಳು ಈ ಹಿಂದೆ ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಗರ್ಕರ್ನೂಲ್ ಜಿಲ್ಲೆ ಮತ್ತು ಹೈದರಾಬಾದ್‌ನಲ್ಲಿ ನಡೆದ ಲೈಂಗಿಕ ದೌರ್ಜನ್ಯದ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಿ. ಅನಸೂಯ ಸೀತಕ್ಕ, ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಮಹಿಳಾ ಕಲ್ಯಾಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತನಿಖೆಯ ಪ್ರಗತಿ ಮತ್ತು ಸಂತ್ರಸ್ತರ ಆರೋಗ್ಯ ಸ್ಥಿತಿಯ ಬಗ್ಗೆಯೂ ಅವರು ವಿಚಾರಿಸಿದ್ದಾರೆ.
ಸಂತ್ರಸ್ತರಿಗೆ ಸಹಾಯ ಮಾಡಲು ಮತ್ತು ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ನಿರ್ದೇಶನ ನೀಡಿದರು ಎಂದು ಅವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಘಟನೆಗಳು ಬೆಳಕಿಗೆ ಬಂದ ನಂತರ ಸರ್ಕಾರ ತ್ವರಿತವಾಗಿ ಕಾರ್ಯನಿರ್ವಹಿಸಿದೆ ಮತ್ತು ಆರೋಪಿಗಳನ್ನು ಬಂಧಿಸಿದೆ ಮತ್ತುಸಂತ್ರಸ್ತರಿಗೆ ಸಹಾಯ ಮಾಡುತ್ತಿದೆ ಎಂದು ಅವರು ಹೇಳಿದರು.
ತಮಿಳುನಾಡಿನಂತೆ ಕಾನೂನು ಹೋರಾಟ ಮಾಡುತ್ತೇವೆ: ರಾಜ್ಯಪಾಲರಿಗೆ ಪ್ರಿಯಾಂಕ್ ಖರ್ಗೆ ಎಚ್ಚರಿಕೆ


