Homeಮುಖಪುಟಒಳ ಮೀಸಲಾತಿ ಜಾರಿಗೆ ತಂದ ಮೊದಲ ರಾಜ್ಯ ತೆಲಂಗಾಣ; ಅಂಬೇಡ್ಕರ್‌ ಜಯಂತಿಯಂದೇ ಮಹತ್ವದ ಹೆಜ್ಜೆ

ಒಳ ಮೀಸಲಾತಿ ಜಾರಿಗೆ ತಂದ ಮೊದಲ ರಾಜ್ಯ ತೆಲಂಗಾಣ; ಅಂಬೇಡ್ಕರ್‌ ಜಯಂತಿಯಂದೇ ಮಹತ್ವದ ಹೆಜ್ಜೆ

- Advertisement -
- Advertisement -

ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ದಿದಂದೇ ಸಾಮಾಜಿಕ ನ್ಯಾಯದ ಐತಿಹಾಸಿಕ ಸಂದರ್ಭಕ್ಕೆ ತೆಲಂಗಾಣ ಸಾಕ್ಷಿಯಾಗಿದೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ಸೋಮವಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ವರ್ಗೀಕರಣವನ್ನು ಜಾರಿಗೆ ತರುವ ಅಧಿಕೃತ ಆದೇಶವನ್ನು ಹೊರಡಿಸಿದೆ ಎಂದು ನೀರಾವರಿ ಸಚಿವ ಎನ್. ಉತ್ತಮ್ ಕುಮಾರ್ ರೆಡ್ಡಿ ಘೋಷಿಸಿದರು.

ಪರಿಶಿಷ್ಟರ ಮೀಸಲಾತಿ ವರ್ಗೀಕರಣವನ್ನು ಬೆಂಬಲಿಸುವ ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಈ  ನೀತಿಯನ್ನು ಜಾರಿಗೆ ತಂದ ದೇಶದ ಮೊದಲ ರಾಜ್ಯ ತೆಲಂಗಾಣವಾಗಿದೆ.

ಎಸ್‌ಸಿ ವರ್ಗೀಕರಣವನ್ನು ಅಧ್ಯಯನ ಮಾಡಲು ರಾಜ್ಯವು ಈ ಹಿಂದೆ ನಿವೃತ್ತ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಶಮೀಮ್ ಅಕ್ತರ್ ನೇತೃತ್ವದಲ್ಲಿ ಆಯೋಗವನ್ನು ರಚಿಸಿತ್ತು. ಅದರ ಶಿಫಾರಸುಗಳ ಆಧಾರದ ಮೇಲೆ, ಸರ್ಕಾರವು 59 ಎಸ್‌ಸಿ ಸಮುದಾಯಗಳನ್ನು ಸರ್ಕಾರಿ ಉದ್ಯೋಗಗಳು ಮತ್ತು ಶಿಕ್ಷಣದಲ್ಲಿ ಎಸ್‌ಸಿಗಳಿಗೆ ಅಸ್ತಿತ್ವದಲ್ಲಿರುವ ಶೇಕಡಾ 15 ಕೋಟಾದೊಳಗೆ ಮೂರು ವಿಭಿನ್ನ ಗುಂಪುಗಳಾಗಿ ವಿಂಗಡಿಸಲು ನಿರ್ಧರಿಸಿದೆ. ಗ್ರೂಪ್ I, ಗ್ರೂಪ್ II ಮತ್ತು ಗ್ರೂಪ್ III ಎಂದು ವಿಭಾಗಿಸಲಾಗಿದೆ.

ಆಯೋಗದ ವರದಿಯ ಪ್ರಕಾರ, ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ 15 ಎಸ್‌ಸಿ ಸಮುದಾಯಗಳನ್ನು ಒಳಗೊಂಡಿರುವ ಗ್ರೂಪ್ I ಗೆ ಶೇಕಡಾ ಒಂದು ಮೀಸಲಾತಿಯನ್ನು ನಿಗದಿಪಡಿಸಲಾಗಿದೆ. ಮಧ್ಯಮ ಪ್ರಯೋಜನ ಪಡೆದ 18 ಸಮುದಾಯಗಳನ್ನು ಒಳಗೊಂಡಿರುವ ಗುಂಪು II, ಶೇಕಡಾ ಒಂಬತ್ತು ಪಡೆಯುತ್ತದೆ. ಆದರೆ, ಗಮನಾರ್ಹವಾಗಿ ಪ್ರಯೋಜನ ಪಡೆದ 26 ಎಸ್‌ಸಿ ಗುಂಪುಗಳನ್ನು ಒಳಗೊಂಡಿರುವ ಗುಂಪು III, ಮೀಸಲಾತಿ ಪಾಲಿನ ಶೇಕಡಾ ಐದರಷ್ಟು ಪಡೆಯಲು ಅರ್ಹರಾಗಿರುತ್ತಾರೆ.

“ತೆಲಂಗಾಣ ಶಾಸಕಾಂಗದ ಈ ಕೆಳಗಿನ ಕಾಯಿದೆಯು ಏಪ್ರಿಲ್ 8, 2025 ರಂದು ತೆಲಂಗಾಣ ರಾಜ್ಯಪಾಲರ ಒಪ್ಪಿಗೆಯನ್ನು ಪಡೆದುಕೊಂಡಿದೆ. ಈ ಒಪ್ಪಿಗೆಯನ್ನು ಮೊದಲು ಏಪ್ರಿಲ್ 14, 2025 ರಂದು ಸಾಮಾನ್ಯ ಮಾಹಿತಿಗಾಗಿ ತೆಲಂಗಾಣ ಗೆಜೆಟ್‌ನಲ್ಲಿ ಪ್ರಕಟಿಸಲಾಗಿದೆ” ಎಂದು ಸರ್ಕಾರಿ ಆದೇಶದಲ್ಲಿ ತಿಳಿಸಲಾಗಿದೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಸಚಿವ ಉತ್ತಮ್ ಕುಮಾರ್ ರೆಡ್ಡಿ, ಎಸ್‌ಸಿ ವರ್ಗೀಕರಣದ ಉಪಸಮಿತಿಯ ನೇತೃತ್ವ ವಹಿಸಿದ್ದರು. ಆದೇಶದ ಮೊದಲ ಪ್ರತಿಯನ್ನು ಸೋಮವಾರ ಬೆಳಿಗ್ಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರಿಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿದರು.

“ಇಂದಿನಿಂದ, ಈ ಕ್ಷಣದಿಂದ, ತೆಲಂಗಾಣದಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‌ಸಿ ವರ್ಗೀಕರಣವನ್ನು ಜಾರಿಗೆ ತರಲಾಗುವುದು. ನಾವು ಆ ಮಟ್ಟಿಗೆ ಸರ್ಕಾರಿ ಆದೇಶವನ್ನು ಹೊರಡಿಸಿದ್ದೇವೆ. ಮೊದಲ ಪ್ರತಿಯನ್ನು ಮುಖ್ಯಮಂತ್ರಿಗೆ ನೀಡಿದ್ದೇವೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ತೆಲಂಗಾಣದಲ್ಲಿ ಹಿಂದಿನ ಸರ್ಕಾರಗಳು ಎಸ್‌ಸಿ ವರ್ಗೀಕರಣದ ಕುರಿತು ನಿರ್ಣಯಗಳನ್ನು ಅಂಗೀಕರಿಸುವುದಕ್ಕೆ ತಮ್ಮನ್ನು ಸೀಮಿತಗೊಳಿಸಿಕೊಂಡಿವೆ, ಯಾವುದೇ ನಿಜವಾದ ಬದಲಾವಣೆಗಳನ್ನು ಜಾರಿಗೆ ತರುವಲ್ಲಿ ವಿಫಲವಾಗಿವೆ ಎಂದು ಸಚಿವರು ಆರೋಪಿಸಿದರು.

“ಸುಪ್ರೀಂ ಕೋರ್ಟ್ ತೀರ್ಪುಗಳ ನಂತರ ಎಸ್‌ಸಿ ವರ್ಗೀಕರಣವನ್ನು ಜಾರಿಗೆ ತಂದ ಮೊದಲ ರಾಜ್ಯ ತೆಲಂಗಾಣ” ಎಂದು ಅವರು ಹೇಳಿದರು.

ರಾಜ್ಯ ಸರ್ಕಾರದಲ್ಲಿನ ಎಲ್ಲ ಉದ್ಯೋಗ ಖಾಲಿ ಹುದ್ದೆಗಳನ್ನು ಈಗ ಹೊಸ ಉಪ-ವರ್ಗೀಕರಣದ ಪ್ರಕಾರ ಭರ್ತಿ ಮಾಡಲಾಗುವುದು. ಚೌಕಟ್ಟನ್ನು ಅಂತಿಮಗೊಳಿಸುವ ಮೊದಲು ಎಲ್ಲಾ ಪಾಲುದಾರರಿಂದ ಪ್ರತಿಕ್ರಿಯೆಯನ್ನು ಸಂಗ್ರಹಿಸುವಲ್ಲಿ ಸಂಪುಟ ಉಪ-ಸಮಿತಿಯು ವ್ಯಾಪಕವಾದ ತಯಾರಿ ನಡೆಸಿದೆ ಎಂದು ಅವರು ಹೇಳಿದರು. 2026 ರ ಜನಗಣತಿಯಲ್ಲಿ ಎಸ್‌ಸಿ ಜನಸಂಖ್ಯೆ ಹೆಚ್ಚಾದರೆ, ಮೀಸಲಾತಿ ಪಾಲನ್ನು ಅದಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗುವುದು ಎಂದು ರೆಡ್ಡಿ ಗಮನಿಸಿದರು.

ಫೆಬ್ರವರಿಯಲ್ಲಿ ತೆಲಂಗಾಣ ಶಾಸಕಾಂಗವು ನ್ಯಾಯಮೂರ್ತಿ ಅಖ್ತರ್ ಅವರ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿತು. ಎಸ್‌ಸಿಗಳಲ್ಲಿ ಕೆನೆಪದರವನ್ನು ವರ್ಗೀಕರಣದಿಂದ ಹೊರಗಿಡಬೇಕು ಎಂಬ ಸಲಹಾ ಟಿಪ್ಪಣಿಯನ್ನು ತಿರಸ್ಕರಿಸಿತು. ನಂತರ ಮಾರ್ಚ್‌ನಲ್ಲಿ ಪರಿಶಿಷ್ಟ ಜಾತಿಗಳ (ಮೀಸಲಾತಿಯ ತರ್ಕಬದ್ಧಗೊಳಿಸುವಿಕೆ) ಮಸೂದೆ, 2025 ಅನ್ನು ಅಂಗೀಕರಿಸಲಾಯಿತು, ಇದು ಈ ಐತಿಹಾಸಿಕ ಅನುಷ್ಠಾನಕ್ಕೆ ದಾರಿ ಮಾಡಿಕೊಟ್ಟಿತು.

ನನ್ನ ಸೋಲಿಗೆ ಸಾವರ್ಕರ್ ಕಾರಣ ಎಂದು ಅಂಬೇಡ್ಕರ್ ಅವರೇ ಬರೆದಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...