Homeಮುಖಪುಟತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ...

ತೆಲಂಗಾಣ| ಕೆಸಿಆರ್ ಹೊಗಳಿ, ಸಿಎಂ ರೇವಂತ್ ರೆಡ್ಡಿಯನ್ನು ಟೀಕಿಸಿದ ರೈತನ ವಿಡಿಯೋ ಪೋಸ್ಟ್ : ಪತ್ರಕರ್ತನ ಬಂಧನ

- Advertisement -
- Advertisement -

ಡಿಜಿಟಲ್ ನ್ಯೂಸ್ ಪೋರ್ಟಲ್ ‘ತೆಲುಗು ಸ್ಕ್ರೈಬ್‌’ನ ಪತ್ರಕರ್ತ ಗೌತಮ್ ಪೋತಗೋನಿ ಅವರನ್ನು ಅಕ್ಟೋಬರ್ 7ರಂದು ಸೋಮವಾರ ತೆಲಂಗಾಣದಲ್ಲಿ ಬಂಧಿಸಲಾಗಿದೆ. ಅವರ ವಿರುದ್ದ ರಾಜಕೀಯ ಸಂಘರ್ಷ ಸೃಷ್ಟಿಗೆ ಪ್ರಯತ್ನ, ಸಾರ್ವಜನಿಕ ಸಾಮರಸ್ಯ ಕದಡುವುದು ಮತ್ತು ಸಿಎಂ ರೇವಂತ್ ರೆಡ್ಡಿಯನ್ನು ಅವಮಾನಿಸಿದ ಆರೋಪ ಹೊರಿಸಲಾಗಿದೆ.

ಗೌತಮ್ ಅವರು ತನ್ನ ಎಕ್ಸ್ ಖಾತೆಯಲ್ಲಿ ಏಳು ತಿಂಗಳ ಹಿಂದೆ, ಅಂದರೆ ಕಳೆದ ಮಾರ್ಚ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದರು. ವಿಡಿಯೋದಲ್ಲಿ ರೈತರೊಬ್ಬರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಹೊಗಳಿ, ಕಾಂಗ್ರೆಸ್ ನೇತೃತ್ವದ ಪ್ರಸ್ತುತ ಸರ್ಕಾರದ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ ದೃಶ್ಯವಿತ್ತು ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

ಸೆಪ್ಟೆಂಬರ್‌ನಲ್ಲಿ ಪತ್ರಕರ್ತ ಗೌತಮ್ ಪೋತಗೋನಿ ವಿರುದ್ಧ ದಾಖಲಿಸಲಾದ ನಾಲ್ಕು ಎಫ್‌ಐಆರ್‌ಗಳನ್ನು ಆಧರಿಸಿ ಬಂಧನ ನಡೆದಿದೆ. ಅವುಗಳಲ್ಲಿ ಮೂರು ಈ ಅವರು ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಸಂಬಂಧಿಸಿವೆ. ಮಾರ್ಚ್‌ನಲ್ಲಿ ವೈರಲ್ ಆದ ವಿಡಿಯೋ ಸಂಬಂಧ ಸೆಪ್ಟೆಂಬರ್‌ನಲ್ಲಿ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುವುದು ಸ್ಪಷ್ಟವಾಗಿಲ್ಲ ಎಂದು ವರದಿ ತಿಳಿಸಿದೆ.

ಮಾರ್ಚ್ 12, 2024 ರಂದು, ಗೌತಮ್ ಅವರು ನಲ್ಗೊಂಡದ ರೈತರೊಬ್ಬರ ವಿಡಿಯೋವನ್ನು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಜೊತೆಗೆ “ನನ್ನ ಪ್ರವಾಸದ ಸಮಯದಲ್ಲಿ, ನಾನು ನಿನ್ನೆ ಹೃದಯವಿದ್ರಾವಕ ಘಟನೆಯೊಂದನ್ನು ಎದುರಿಸಿದೆ. ನಲ್ಗೊಂಡ ಜಿಲ್ಲೆಯ ಮುಶಂಪಲ್ಲಿ ಗ್ರಾಮದ ಮಲ್ಲಯ್ಯ ಎಂಬ ರೈತ ನನಗೆ ಖುದ್ದಾಗಿ ವಿಡಿಯೋ ರೆಕಾರ್ಡ್ ಮಾಡಿ ಕೆಸಿಆರ್ ಅವರಿಗೆ ಕಳುಹಿಸುವಂತೆ ಕೇಳಿಕೊಂಡರು” ಎಂದು ಬರೆದುಕೊಂಡಿದ್ದರು.

ಗೌತಮ್ ಹಂಚಿಕೊಂಡಿದ್ದ ವಿಡಿಯೋದಲ್ಲಿ ರೈತ ಮಲ್ಲಯ್ಯ ಅವರು ಮಾಜಿ ಸಿಎಂ ಕೆಸಿಆರ್ ನೇತೃತ್ವದ ಬಿಆರ್‌ಎಸ್ ಸರ್ಕಾರದ ಕಾರ್ಯಕ್ರಮವಾದ ರೈತ ಬಂಧು ಅನ್ನು ಹೊಗಳಿದ್ದರು. ಬಿಆರ್‌ಎಸ್ ಸರ್ಕಾರ ಪರಿಚಯಿಸಿದ ರೈತರ ಹೂಡಿಕೆ ಬೆಂಬಲ ಯೋಜನೆ ಬಗ್ಗೆ ಹೆಚ್ಚು ಮಾತನಾಡಿದ್ದರು. ಪ್ರಸ್ತುತ ಆಡಳಿತದಲ್ಲಿ ತಾನು ಸಾಲದ ಸುಳಿಯಲ್ಲಿ ಸಿಲುಕಿದ್ದೇನೆ ಎಂದಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ತೆಲುಗು ಸ್ಕ್ರೈಬ್ ತೆಲಂಗಾಣದಲ್ಲಿ ಕಾಂಗ್ರೆಸ್ ಅನ್ನು ಟೀಕಿಸುವ ಮತ್ತು ಪ್ರತಿಪಕ್ಷ ಬಿಆರ್‌ಎಸ್‌ ಅನ್ನು ಬೆಂಬಲಿಸುವ ಸುದ್ದಿ ಸಂಸ್ಥೆಯಾಗಿದೆ.

ಶೇಕ್ ಅಶ್ರಫ್ ಎಂಬ ಉದ್ಯಮಿ ಮತ್ತು ಅನುಮಕೊಂಡ ಭಾರ್ಗವ್ ಎಂಬ ವಿದ್ಯಾರ್ಥಿ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 28 ರಂದು ಖಾರ್ಕಾನಾ ಮತ್ತು ವನಸ್ಥಲಿಪುರಂ ಪೊಲೀಸ್ ಠಾಣೆಗಳಲ್ಲಿ ಗೌತಮ್ ವಿರುದ್ದ ಮೊದಲ ಮತ್ತು ಎರಡನೇ ಎಫ್‌ಐಆರ್ ದಾಖಲಾಗಿದೆ. ಮಂಚಾಲ್ ಪೊಲೀಸ್ ಠಾಣೆಯಲ್ಲಿ ಐ ರಾಮಚಂದ್ರ ರೆಡ್ಡಿ ಎಂಬ ರೈತ ನೀಡಿದ ದೂರಿನ ಆಧಾರದ ಮೇಲೆ ಸೆಪ್ಟೆಂಬರ್ 29 ರಂದು ಗೌತಮ್ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲಾಗಿದೆ.

ಮೂವರ ದೂರುಗಳಲ್ಲೂ “ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಪೋಸ್ಟ್‌ಗಳನ್ನು ಹಾಕಿದ್ದು. ಅದು ನಮ್ಮ ತೆಲಂಗಾಣದ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಮತ್ತು ತೆಲಂಗಾಣ ಸರ್ಕಾರವನ್ನು ಅವಹೇಳನ ಮಾಡಿದೆ” ಎಂದು ಆರೋಪಿಸಲಾಗಿದೆ.

“ಅಂತಹ ಪೋಸ್ಟ್‌ಗಳು ರಾಜಕೀಯ ಉದ್ವಿಗ್ನತೆ ಮತ್ತು ಗುಂಪುಗಳ ನಡುವೆ ದ್ವೇಷವನ್ನು ಉಂಟು ಮಾಡುತ್ತವೆ. ಸಾರ್ವಜನಿಕರ ನಡುವಿನ ಸಾಮಾರಸ್ಯ ಕೆಡಸುತ್ತವೆ. ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗೆ ಕಾರಣವಾಗಬಹುದು. ವಿಡಿಯೋ ಪೋಸ್ಟ್ ಮಾಡಿದವರು ಅನಗತ್ಯ ವದಂತಿಗಳನ್ನು ಹರಡುತ್ತಿದ್ದಾರೆ. ಅದು ಸಾರ್ವಜನಿಕರನ್ನು ದಾರಿ ತಪ್ಪಿಸುವಂತಿದೆ. ಅದರಿಂದಾಗಿ ಸಾರ್ವಜನಿಕರ ಶಾಂತಿ ಮತ್ತು ನೆಮ್ಮದಿಗೆ ಭಂಗ ಉಂಟಾಗುತ್ತದೆ” ಎಂದು ಮೂವರ ದೂರುಗಳಲ್ಲಿ ಹೇಳಲಾಗಿದೆ.

ಜೆ ಸಂಜೀವ್ ರೆಡ್ಡಿ ಎಂಬ ವ್ಯಕ್ತಿಯ ದೂರಿನ ಆಧಾರದ ಮೇಲೆ ಸೈಬರ್ ಕ್ರೈಂ ಪೊಲೀಸರು ಗೌತಮ್ ಮತ್ತು ತೆಲುಗು ಸ್ಕ್ರೈಬ್ ಸಂಸ್ಥೆಯ ವಿರುದ್ದ ನಾಲ್ಕನೇ ಎಫ್‌ಐಆರ್ ದಾಖಲಿಸಿದ್ದಾರೆ. ಈ ದೂರಿನಲ್ಲಿ ಸುದ್ದಿ ಸಂಸ್ಥೆ ಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್ ಮಾಡಲಾಗಿದೆ ಎಂದು ಆರೋಪಿಸಲಾಗಿದ್ದು, ಮೂರು ಯುಆರ್‌ಎಲ್‌ಗಳನ್ನು ಅಳಿಸಬೇಕು ಎಂದು ಒತ್ತಾಯಿಸಲಾಗಿದೆ. ಅವುಗಳಲ್ಲಿ ಒಂದು ಅದಿಲಾಬಾದ್‌ನಲ್ಲಿ ಹಿರಿಯ ವ್ಯಕ್ತಿಯೊಬ್ಬರು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರ ಸರ್ಕಾರ ಕೆಡವಬೇಕು ಎಂದು ಅವಾಚ್ಯವಾಗಿ ನಿಂದಿಸಿರುವುದು ಎಂದು ನ್ಯೂಸ್ ಮಿನಿಟ್ ವರದಿ ತಿಳಿಸಿದೆ.

ಇದನ್ನೂ ಓದಿ : ಹರಿಯಾಣ | 90ರಲ್ಲಿ 86 ಶಾಸಕರು ಕೋಟ್ಯಾಧಿಪತಿ; 12 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ – ಎಡಿಆರ್ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...