Homeರಾಜಕೀಯತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣ: ಆಡಳಿತರೂಢ ಬಿಆರ್‌ಎಸ್‌‌ ಪಕ್ಷದ ನಾಯಕ ಬಿಜೆಪಿ ಸೇರುವ ಸಾಧ್ಯತೆ

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ

- Advertisement -
- Advertisement -

ತೆಲಂಗಾಣದಲ್ಲಿ ಮುಂದಿನ ಡಿಸೆಂಬರ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ನಡುವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಆಡಳಿತರೂಢ ಬಿಆರ್‌‌ಎಸ್‌‌ ನಾಯಕ ಮಾಜಿ ಸಂಸದ ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಅವರು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೇ ಹಿನ್ನಲೆಯಲ್ಲಿ ಖಮ್ಮಂನಲ್ಲಿ ಬಿಆರ್‌ಎಸ್ ಅದ್ಧೂರಿ ಸಭೆ ನಡೆಸಲು ತೀರ್ಮಾನಿಸಿದೆ.

ಶ್ರೀನಿವಾಸ್‌ ರೆಡ್ಡಿ ಅವರು 2014 ರಲ್ಲಿ ಖಮ್ಮಮ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಇದೀಗ ಅವರು ನವದೆಹಲಿಯಲ್ಲಿ ಒಕ್ಕೂಟ ಸರ್ಕಾರದ ಗೃಹ ಸಚಿವ ಅಮಿತ್ ಶಾ ಅವರ ಸಮ್ಮುಖದಲ್ಲಿ ಜನವರಿ 18 ರಂದು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಲ್ಲದೆ ಜನವರಿ 19 ರಂದು ಹೈದರಾಬಾದ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಫ್ಲ್ಯಾಗ್ ಆಫ್ ಮಾಡುವ ಸಾಧ್ಯತೆ ಕೂಡಾ ಇದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದೇ ದಿನ ಬಿಆರ್‌ಎಸ್ ಅಧ್ಯಕ್ಷ ಹಾಗೂ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಖಮ್ಮಂನಲ್ಲಿ ಅದ್ಧೂರಿ ಸಾರ್ವಜನಿಕ ಸಭೆ ನಡೆಸಲು ಯೋಜಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಚಿವರುಗಳಾದ ಪುವ್ವಾಡ ಅಜಯ್ ಕುಮಾರ್, ಹರೀಶ್ ರಾವ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಲಿದ್ದಾರೆ.

ಖಮ್ಮಂನಲ್ಲಿ ಕ್ಷಿಪ್ರವಾಗಿ ಬದಲಾಗುತ್ತಿರುವ ರಾಜಕೀಯ ಬೆಳವಣಿಗೆಗಳು ಗಮನಾರ್ಹವಾಗಿದ್ದು, ಖಮ್ಮಂ ಬಿಆರ್‌ಎಸ್‌ನ ಪ್ರಾಬಲ್ಯವಿರುವ ಪ್ರದೇಶವಲ್ಲ. ತೆಲಂಗಾಣ ರಾಜ್ಯದ ರಚನೆಯ ಆಂದೋಲನದ ಉತ್ತುಂಗದಲ್ಲಿಯೂ ಕೂಡಾ ಈ ಪ್ರದೇಶದಲ್ಲಿ ಹೆಚ್ಚು ಧ್ವನಿಗಳು ಬಂದಿರಲಿಲ್ಲ. ಆಂಧ್ರಪ್ರದೇಶದ ಗಡಿಯಾಗಿರುವ ಖಮ್ಮಂ ಕಮ್ಮ ಸಮುದಾಯದ ಪ್ರಾಬಲ್ಯವಿರುವ ಜಿಲ್ಲೆಯಾಗಿದೆ.

2014 ರಲ್ಲಿ ಟಿಆರ್‌ಎಸ್ ಅಧಿಕಾರಕ್ಕೆ ಬಂದ ನಂತರ, ಖಮ್ಮಂನಲ್ಲಿ ತನ್ನ ನೆಲೆಯನ್ನು ಬಲಪಡಿಸಲು ಪಕ್ಷವೂ ಶ್ರೀನಿವಾಸ ರೆಡ್ಡಿ ಸೇರಿದಂತೆ ಹಲವಾರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಂಡಿತ್ತು. ಅಲ್ಲದೆ, ವೈಎಸ್‌ಆರ್‌ಟಿಪಿ ಮುಖ್ಯಸ್ಥೆ ವೈಎಸ್ ಶರ್ಮಿಳಾ ಅವರು ಈಗಾಗಲೇ ಖಮ್ಮಂನ ಪಲೈರ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವುದರಿಂದ ಖಮ್ಮಂ ಈಗಾಗಲೇ ರಣರಂಗವಾಗಿ ಮಾರ್ಪಟ್ಟಿದೆ.

ಕೆಲವು ತಿಂಗಳ ಹಿಂದಿನಿಂದಲೇ ಬಿಆರ್‌ಎಸ್‌ನಲ್ಲಿ ಬಿಕ್ಕಟ್ಟು ತೀವ್ರಗೊಂಡಿದ್ದು, ಖಮ್ಮಂನ ನಾಯಕರಾದ ತುಮ್ಮಲ ನಾಗೇಶ್ವರ ರಾವ್, ಜಲಗಂ ವೆಂಕಟ್ ರಾವ್ ಮತ್ತು ಪೊಂಗುಲೇಟಿ ಶ್ರೀನಿವಾಸ್ ರೆಡ್ಡಿ ಖಮ್ಮಂನಿಂದ ಬಿಆರ್‌ಎಸ್ ಟಿಕೆಟ್‌ನಲ್ಲಿ ಸ್ಪರ್ಧಿಸಲು ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸಿದ್ದಾರೆ. ಎಲ್ಲರಿಗೂ ಪಕ್ಷ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ ಎಂಬುದನ್ನು ಮನಗಂಡಿದ್ದು ಅವರು ಬೇರೆ ಪಕ್ಷಗಳಿಗೆ ಅಥವಾ ಸ್ವತಂತ್ರವಾಗಿ ಸ್ಪರ್ಧಿಸಲು ತಮ್ಮ ಆಯ್ಕೆಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದಾರೆ.

ಶ್ರೀನಿವಾಸ ರೆಡ್ಡಿ ಅವರು 2014 ರಲ್ಲಿ ವೈಎಸ್‌ಆರ್‌ಸಿಪಿ (ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ) ಟಿಕೆಟ್‌ನಲ್ಲಿ ಖಮ್ಮಂ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದ ಮಾಜಿ ಸಂಸದರಾಗಿದ್ದಾರೆ. ನಂತರ ಅವರು 2016 ರಲ್ಲಿ ಬಿಆರ್‌ಎಸ್‌‌ಗೆ ಪಕ್ಷಾಂತರವಾಗಿದ್ದರು. ಆದರೆ 2019 ರಲ್ಲಿ BRS ಅವರಿಗೆ ಖಮ್ಮಂ ಕ್ಷೇತ್ರದಿಂದ ಸಂಸದರಾಗಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿ, ಅವರನ್ನು ಪಕ್ಷದಿಂದ ದೂರವಿಡಲಾಗಿತ್ತು.

ಮಂಗಳವಾರ ಪಿನಪಾಕದಲ್ಲಿ ತಮ್ಮ ಬೆಂಬಲಿಗರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ್ದ ಶ್ರೀನಿವಾಸ ರೆಡ್ಡಿ, ಬಿಆರ್‌ಎಸ್‌ನಿಂದ ದೂರವಾಗಲು ಇದ್ದ ಕಾರಣವನ್ನು ಶೀಘ್ರದಲ್ಲೇ ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ. “ನಾನೇಕೆ ಅಧಿಕಾರದಲ್ಲಿ ಇಲ್ಲ? ಜನ ನನ್ನನ್ನು ತಿರಸ್ಕರಿಸಿದರೇ? ಇತರ ಸ್ಪರ್ಧಿಗಳು ನನ್ನನ್ನು ಸೋಲಿಸಿದರೇ? ಕಾರಣ ಗೊತ್ತೇ ಇದೆ. ಆದರೆ, ಕೆಟಿಆರ್‌ ಮೇಲಿನ ಪ್ರೀತಿಯಿಂದ ನಾನು ಬಿಆರ್‌ಎಸ್‌ ಪಕ್ಷದಲ್ಲಿ ಮುಂದುವರಿದಿದ್ದೇನೆ” ಎಂದು ಅವರು ಹೇಳಿದ್ದರು.

ತಮಗೆ ಹಾಗೂ ತಮ್ಮ ಬೆಂಬಲಿಗರಿಗೆ ಹುದ್ದೆ ನೀಡಲು ಅವಕಾಶವಿದ್ದರೂ ಹಲವು ಬಾರಿ ನಿರಾಕರಿಸಲಾಗಿದೆ ಎಂದು ಅವರು ಆರೋಪಿಸಿದ್ದು, ಅವರೆಲ್ಲರೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಖಚಿತಪಡಿಸಿಕೊಳ್ಳುವುದಾಗಿ ಶ್ರೀನಿವಾಸ ರೆಡ್ಡಿ ತಮ್ಮ ಬೆಂಬಲಿಗರಿಗೆ ಭರವಸೆ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಟಿಎಂಸಿ ನಾಯಕರ ಭದ್ರತೆಗೆ ಭಾರೀ ಪೊಲೀಸ್ ನಿಯೋಜನೆ; ಇಸಿಐ ಆಕ್ಷೇಪ

ರಾಜ್ಯದ ವಿವಿಧ ಹಂತಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರಿಗೆ ವೈಯಕ್ತಿಕ ಭದ್ರತೆ ಒದಗಿಸಲು ಪಶ್ಚಿಮ ಬಂಗಾಳ ಪೊಲೀಸರು ಮತ್ತು ಕೋಲ್ಕತ್ತಾ ಪೊಲೀಸರು ನಿಯೋಜಿಸಿರುವ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಗಂಭೀರವಾಗಿ...

ಅಮೆರಿಕದ ಕದನ ವಿರಾಮ ಪ್ರಸ್ತಾವನೆ ತಿರಸ್ಕರಿಸಿದ ಇರಾನ್ : ಪಶ್ಚಿಮ ಏಷ್ಯಾ ಸಂಘರ್ಷ ಉಲ್ಬಣ

ಅಲ್ಪಾವಧಿಯ ಕದನ ವಿರಾಮಕ್ಕಾಗಿ ಅಮೆರಿಕ ಮುಂದಿಟ್ಟಿದ್ದ ಪ್ರಸ್ತಾವನೆಯನ್ನು ಇರಾನ್ ತಿರಸ್ಕರಿಸಿದೆ ಎಂದು ವರದಿಯಾಗಿದೆ. ಏಪ್ರಿಲ್ 1, 2026ರ ಬುಧವಾರದಂದು ಅಮೆರಿಕವು ಅನಾಮಧೇಯ ಮಧ್ಯಸ್ಥಿಕೆ ರಾಷ್ಟ್ರದ ಮೂಲಕ ಇರಾನ್‌ಗೆ 48 ಗಂಟೆಗಳ ತಾತ್ಕಾಲಿಕ ಕದನ ವಿರಾಮದ ಆಫರ್...

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...