Homeಮುಖಪುಟತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

ತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

- Advertisement -
- Advertisement -

ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿಯಾಗಿ ಹಾಕಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ ತೆಲಂಗಾಣದ ಆದಿಲಾಬಾದ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯ ಹೊರಗೆ ಭಾರಿ ಪ್ರತಿಭಟನೆ ನಡೆಯಿತು. ಪೊಲೀಸರು ಲಾಠಿ ಚಾರ್ಜ್‌ ಮಾಡಿ ಗುಂಪನ್ನು ಚದುರಿಸಿದ್ದಾರೆ.

ಪೊಲೀಸರು ಬಲಪ್ರಯೋಗ ಮಾಡಿದ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗಿದೆ. ಪ್ರತಿಭಟನೆಗೆ ಪ್ರಚೋದಿಸಿದ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುದ್ದಿ ಸಂಸ್ಥೆ ANI ಪೋಸ್ಟ್ ಮಾಡಿದ 17 ಸೆಕೆಂಡುಗಳ ಕ್ಲಿಪ್‌ನಲ್ಲಿ, ಪೊಲೀಸರು ಲಾಠಿಚಾರ್ಜ್ ಮಾಡಿ ಗುಂಪನ್ನು ಚದುರಿಸುತ್ತಿರುವುದನ್ನು ಕಾಣಬಹುದು. ಗೊಂದಲದ ನಡುವೆಯೇ ಪ್ರತಿಭಟನಾಕಾರರು ಸ್ಥಳದಿಂದ ನಿರ್ಗಮಿಸಿದ್ದಾರೆ. ಒನ್ ಟೌನ್ ಪೊಲೀಸ್ ಠಾಣೆಯ ಹೊರಭಾಗದಲ್ಲಿ ಪ್ರತಿಭಟನೆ ನಡೆದಿದೆ ಎಂದು ಎಎನ್‌ಐ ವರದಿ ಮಾಡಿದೆ.

“ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದಕ್ಕಾಗಿ ಒಬ್ಬ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ ಹಾಗೂ ಆರೋಪಿಗಳನ್ನು ನಾವು ಬಂಧಿಸಿದ್ದೇವೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ” ಎಂದು ಆದಿಲಾಬಾದ್ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಉದಯ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.

ಇದನ್ನೂ ಓದಿರಿ: ಬಿಬಿಸಿ ಸಂದರ್ಶನದ ವೇಳೆ ಸಿಟ್ಟಿಗೆದ್ದ ಸ್ವಘೋಷಿತ ದೇವಮಾನವ ‘ಜಗ್ಗಿ ವಾಸುದೇವ್‌’

ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನಕಾರಿಯಾಗಿ ಮಾತನಾಡಿ ಬಿಜೆಪಿಯಿಂದ ಹೊರದೂಡಲ್ಪಟ್ಟ ನೂಪುರ್ ಶರ್ಮಾ ನವೀನ್ ಜಿಂದಾಲ್ ‌ಅವರ ವಿರುದ್ಧ ಉತ್ತರ ಪ್ರದೇಶ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ ಹಲವಾರು ರಾಜ್ಯದಲ್ಲಿ ಆಕ್ರೋಶ ಭುಗಿಲೆದ್ದಿದೆ. ಉತ್ತರ ಪ್ರದೇಶದಲ್ಲಿ ಪ್ರತಿಭಟನೆಗಳು ಜೋರಾದ ಬೆನ್ನಲ್ಲೇ ಸಹರಾನ್‌ಪುರ ಮತ್ತು ಕಾನ್ಪುರದ ಬೀದಿಗಳಲ್ಲಿ ಶನಿವಾರ ಬುಲ್ಡೋಜರ್‌ಗಳು ಕಾಣಿಸಿಕೊಂಡಿದ್ದು ಹಲವು ಮನೆಗಳನ್ನು ಧ್ವಂಸಗೊಳಿಸಲಾಗಿದೆ.

ಉತ್ತರ ಪ್ರದೇಶದಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿವೆ. ಘಟನೆಗೆ ಸಂಬಂಧಿಸಿದಂತೆ ಆರು ಜಿಲ್ಲೆಗಳಲ್ಲಿ 200ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪ್ರಯಾಗ್‌ರಾಜ್‌ನಿಂದ 68 ಜನರನ್ನು ಬಂಧಿಸಲಾಗಿದ್ದು, 50 ಜನರನ್ನು ಹತ್ರಾಸ್‌ನಲ್ಲಿ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಸಹರಾನ್‌ಪುರದಿಂದ ನಲವತ್ತೆಂಟು ಜನರನ್ನು, ಅಂಬೇಡ್ಕರ್‌ನಗರದಲ್ಲಿ 28 ಜನ, ಮೊರಾದಾಬಾದ್‌ನಲ್ಲಿ 25 ಜನರನ್ನು ಮತ್ತು  ಫಿರೋಜಾಬಾದ್‌ನಲ್ಲಿ ಎಂಟು ಮಂದಿಯನ್ನು ಬಂಧಿಸಲಾಗಿದೆ. ಒಟ್ಟಾರೆಯಾಗಿ 227 ಜನರನ್ನು ಬಂಧಿಸಲಾಗಿದೆ.

ಇದರ ಜೊತೆಗೆ ಜಾರ್ಖಂಡ್‌ನ ರಾಂಚಿ, ಸಹರಾನ್‌ಪುರ ಮತ್ತು ಯುಪಿಯ ಪ್ರಯಾಗ್‌ರಾಜ್‌ನಲ್ಲೂ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಿದ ಘಟನೆಗಳು ವರದಿಯಾಗಿವೆ. ಪ್ರತಿಭಟನಾ ಸ್ಥಳಗಳಲ್ಲಿ ದೊರಕಿದ ವಿಡಿಯೋ ದೃಶ್ಯಾವಳಿಗಳನ್ನು ಆಧರಿಸಿ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...