Homeದಲಿತ್ ಫೈಲ್ಸ್ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

ತೆಲಂಗಾಣ| ದಲಿತ ಸಹೋದ್ಯೋಗಿ ವಿರುದ್ಧ ಅವಹೇಳನಾಕಾರಿ ಪದ ಬಳಕೆ; ವಿಷಾಧ ವ್ಯಕ್ತಪಡಿಸಿದ ಸಚಿವ ಪೊನ್ನಮ್ ಪ್ರಭಾಕರ್

- Advertisement -
- Advertisement -

ತನ್ನ ಸಂಪುಟ ಸಹೋದ್ಯೋಗಿ ಹಾಗೂ ದಲಿತ ಸಚಿವರ ವಿರುದ್ಧ ಅವಹೇಳನಕಾರಿ ಪದ ಬಳಸಿದ್ದಕ್ಕಾಗಿ ತೆಲಂಗಾಣದ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಮ್ ಪ್ರಭಾಕರ್ ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

ಸಾವರ್ವಜನಿಕ ಸಭೆಯೊಂದರಲ್ಲಿ ಪರಿಶಿಷ್ಟ ಜಾತಿ ಕಲ್ಯಾಣ ಸಚಿವ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಬಗ್ಗೆ ತಾವಾಡಿದ ಮಾತುಗಳಿಗೆ ಸಚಿವರು ಪ್ರತಿಕ್ರಿಯೆ ನಿಡಿದ್ದಾರೆ.

ನಿನ್ನೆ ತಡರಾತ್ರಿ ಬಿಡುಗಡೆಯಾದ ಹೇಳಿಕೆಯಲ್ಲಿ, ಲಕ್ಷ್ಮಣ್‌ ಕುಮಾರ್ ಅವರನ್ನು ನನ್ನ ‘ಸಹೋದರನಂತೆ’ ಎಂದು ಸಚಿವರು ಹೇಳಿದರು. “ಕಾಂಗ್ರೆಸ್ ಪಕ್ಷದಲ್ಲಿ ನಮ್ಮ ಸ್ನೇಹ 30 ವರ್ಷಗಳನ್ನು ಹೊಂದಿದೆ, ಅದು ರಾಜಕೀಯವನ್ನು ಮೀರಿದೆ. ನಮ್ಮ ನಡುವಿನ ಬಾಂಧವ್ಯ ಮತ್ತು ಪರಸ್ಪರ ಗೌರವ ಯಾವಾಗಲೂ ಪ್ರಬಲವಾಗಿದೆ. ಯಾರೂ ನಮ್ಮನ್ನು ಬೇರ್ಪಡಿಸಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

“ನಾನು ಅವರ ವಿರುದ್ಧ ಯಾವುದೇ ವೈಯಕ್ತಿಕ ಹೇಳಿಕೆಗಳನ್ನು ನೀಡಿಲ್ಲ. ತಳಮಟ್ಟದಿಂದ ಬೆಳೆದ ವ್ಯಕ್ತಿಯಾಗಿ ಮತ್ತು ಹಿಂದುಳಿದ ವರ್ಗಗಳಿಗೆ ಸೇರಿದ ನಾಯಕನಾಗಿ, ನಾನು ಯಾರ ಬಗ್ಗೆಯೂ ಅಂತಹ ಅಭಿಪ್ರಾಯವನ್ನು ಎಂದಿಗೂ ಹೊಂದಿರುವುದಿಲ್ಲ” ಎಂದಿದ್ದಾರೆ.

“ಆದರೆ, ರಾಜಕೀಯ ದುರುದ್ದೇಶದಿಂದ, ಕೆಲವರು ನನ್ನ ಹೇಳಿಕೆಗಳನ್ನು ತಿರುಚಿ ಸತ್ಯಕ್ಕೆ ವಿರುದ್ಧವಾಗಿ ಪ್ರಚಾರ ಮಾಡಿದ್ದಾರೆ. ಈ ತಪ್ಪು ತಿಳುವಳಿಕೆಗಳಿಂದಾಗಿ, ಅಣ್ಣ ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರಂತಹ ವ್ಯಕ್ತಿಯ ಭಾವನೆಗಳಿಗೆ ನೋವುಂಟಾಗಿದೆ ಎಂದು ತಿಳಿದು ನನಗೆ ತುಂಬಾ ದುಃಖವಾಗಿದೆ” ಎಂದು ಪ್ರಭಾಕರ್ ಹೇಳಿದರು.

“ಅಡ್ಲೂರಿ ಲಕ್ಷ್ಮಣ್ ಕುಮಾರ್ ಅವರ ಭಾವನೆಗಳಿಗೆ ನೋವಾಗಿದ್ದರೆ ನನಗೆ ವಿಷಾದವಿದೆ. ಕಾಂಗ್ರೆಸ್ ಪಕ್ಷದ ತತ್ವಗಳನ್ನು ಬಲಪಡಿಸಲು, ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಸಾಮಾಜಿಕ ನ್ಯಾಯವನ್ನು ಸಾಧಿಸಲು ಮತ್ತು ಜನರ ಕಲ್ಯಾಣಕ್ಕಾಗಿ ಶ್ರಮಿಸಲು ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡುತ್ತೇವೆ” ಎಂದು ಅವರು ಹೇಳಿದರು.

ನವೆಂಬರ್ 11 ರಂದು ಜುಬಿಲಿ ಹಿಲ್ಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವಾದ ಪ್ರಾರಂಭವಾಯಿತು. ಲಕ್ಷ್ಮಣ್‌ ಕುಮಾರ್ ಬರುವುದಕ್ಕಾಗಿ ಕಾಯುತ್ತಿದ್ದರು ಪ್ರಭಾಕರ್, ವಿಳಂಬದಿಂದ ಸಿಟ್ಟಾಗಿದ್ದರು. ಸಹ ಸಚಿವರೊಂದಿಗೆ ಮಾತನಾಡುವಾಗ, ಅವರು ಸಮಯಪಾಲನೆಯ ಬಗ್ಗೆ ಟೀಕಿಸಿದರು. ಲಕ್ಷ್ಮಣ್‌ ಕುಮಾರ್ ಅವರನ್ನು ಎಮ್ಮ (ತೆಲುಗಿನಲ್ಲಿ ಧುನ್ನಪೋತು) ಎಂದು ಉಲ್ಲೇಖಿಸಿದರು. ಸುದ್ದಿವಾಹಿನಿಗಳು ಮಾಧ್ಯಮ ಪ್ರಸಾರಕ್ಕಾಗಿ ಇಟ್ಟಿದ್ದ ಮೈಕ್ರೊಫೋನ್‌ಗಳು ಈ ಹೇಳಿಕೆಯನ್ನು ಸೆರೆಹಿಡಿದಿದ್ದವು.

ಪರಿಶಿಷ್ಟ ಜಾತಿ ಮಾದಿಗ ಸಮುದಾಯಕ್ಕೆ ಸೇರಿದ ಲಕ್ಷ್ಮಣ್‌ ಕುಮಾರ್, ತಮ್ಮ ಸಂಪುಟ ಸಹೋದ್ಯೋಗಿಯ ಹೇಳಿಕೆಗೆ ತೀವ್ರ ದುಃಖ ವ್ಯಕ್ತಪಡಿಸಿ ಭಾವನಾತ್ಮಕ ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಹೇಳಿಕೆಯನ್ನು ಅವರು ಜಾತಿವಾದಿ ಅವಮಾನವೆಂದು ಪರಿಗಣಿಸಿದ್ದು, ಅದು ಅವರನ್ನು ಮಾತ್ರವಲ್ಲದೆ ತಮ್ಮ ಸಮುದಾಯವನ್ನೂ ನಾಚಿಕೆಪಡಿಸಿದೆ, ಸಾರ್ವಜನಿಕ ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು. ಪ್ರಭಾಕರ್ ಕ್ಷಮೆಯಾಚಿಸದಿದ್ದರೆ, ಈ ವಿಷಯವನ್ನು ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಮತ್ತು ಹಿರಿಯ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಕೊಂಡೊಯ್ಯುವುದಾಗಿ ಕುಮಾರ್ ಎಚ್ಚರಿಸಿದರು.

ಕರೀಂನಗರ ಜಿಲ್ಲೆಯ ಪ್ರಭಾವಿ ನಾಯಕರು ಮತ್ತು ಕಾಂಗ್ರೆಸ್ ಸರ್ಕಾರದ ಪ್ರಮುಖ ವ್ಯಕ್ತಿಗಳಾದ ಹಿರಿಯ ಸಚಿವರ ನಡುವಿನ ಸಾರ್ವಜನಿಕ ಜಗಳವು ನಿರ್ಣಾಯಕ ಸ್ಥಳೀಯ ಸಂಸ್ಥೆ ಚುನಾವಣೆ ಮತ್ತು ಜುಬಿಲಿ ಹಿಲ್ಸ್ ಉಪಚುನಾವಣೆಗೆ ಮೊದಲು ಕೋಲಾಹಲಕ್ಕೆ ಕಾರಣವಾಯಿತು.

ಪರಿಸ್ಥಿತಿಯ ಗಂಭೀರತೆಯನ್ನು ಅರ್ಥಮಾಡಿಕೊಂಡ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಬಿ ಮಹೇಶ್ ಕುಮಾರ್ ಗೌಡ್, ಮಧ್ಯಪ್ರವೇಶಿಸಿ ಇಬ್ಬರೂ ಸಚಿವರೊಂದಿಗೆ ಮಾತನಾಡಿದರತು. ಸಂಯಮ ಮತ್ತು ಸಮನ್ವಯವನ್ನು ಕಾಯ್ದುಕೊಳ್ಳುವಂತೆ ಒತ್ತಾಯಿಸಿದರು.

ದಲಿತ ಸಹೋದ್ಯೋಗಿಯನ್ನು ‘ಎಮ್ಮೆ’ ಎಂದು ಟೀಕಿಸಿದ ತೆಲಂಗಾಣ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...