Homeಮುಖಪುಟಹೈದರಾಬಾದ್: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

ಹೈದರಾಬಾದ್: ಬಿಆರ್‌ಎಸ್ ಶಾಸಕಿ ಲಾಸ್ಯ ನಂದಿತಾ ರಸ್ತೆ ಅಪಘಾತದಲ್ಲಿ ಸಾವು

- Advertisement -
- Advertisement -

ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ತೆಲಂಗಾಣದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ಶಾಸಕಿ ಲಾಸ್ಯ ನಂದಿತಾ ಮೃತಪಟ್ಟಿದ್ದಾರೆ. ಹೈದರಾಬಾದ್‌ ಸಮೀಪದ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಪಟ್ಟಂಚೆರು ಹೊರವಲಯದ ರಸ್ತೆಯಲ್ಲಿ ಇಂದು (ಫೆ.23) ಮುಂಜಾನೆ ಅಪಘಾತ ಸಂಭವಿಸಿದೆ.

ಕೇವಲ 37 ವರ್ಷದ ಲಾಸ್ಯ ನಂದಿತಾ ಇದೇ ಮೊದಲ ಬಾರಿಗೆ ಶಾಸಕಿಯಾಗಿ ಆಯ್ಕೆಯಾಗುವ ಮೂಲಕ ತೆಲಂಗಾಣ ವಿಧಾನಸಭೆ ಪ್ರವೇಶಿಸಿದ್ದರು.

ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ನಂದಿತಾ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಬದುಕುಳಿದಿಲ್ಲ. ಘಟನೆಯಲ್ಲಿ ನಂದಿತಾ ಅವರ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಹತ್ತು ದಿನಗಳ ಹಿಂದೆಯಷ್ಟೇ ನರ್ಕಟ್‌ಪಲ್ಲಿಯಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಲಾಸ್ಯ ಅವರು ಸಣ್ಣಪುಟ್ಟ ಗಾಯಗಳಿಂದ ಬದುಕುಳಿದಿದ್ದರು. ಫೆಬ್ರವರಿ 13ರಂದು ಬಿಆರ್‌ಎಸ್‌ ರ‍್ಯಾಲಿಯಲ್ಲಿ ಭಾಗವಹಿಸಲು ನಲ್ಗೊಂಡಕ್ಕೆ ತೆರಳುತ್ತಿದ್ದಾಗ ನಂದಿತಾ ಅವರ ಕಾರು ಅಪಘಾತಕ್ಕೀಡಾಗಿತ್ತು.

1986ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ, ಸಣ್ಣ ವಯಸ್ಸಿನಲ್ಲಿ ರಾಜಕೀಯದಲ್ಲಿ ಗುರುತಿಸಿಕೊಂಡಿದ್ದರು. ದಶಕದ ಹಿಂದೆ ರಾಜಕೀಯಕ್ಕೆ ಕಾಲಿಟ್ಟಿದ್ದ ಅವರು, 2016ರಲ್ಲಿ ಸಿಕಂದರಾಬಾದ್‌ನ ಕವಾಡಿಗುಡದಿಂದ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು. 2023ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಬಿಆರ್‌ಎಸ್‌ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ದಾಖಲಿಸಿದ್ದರು. ಇದಕ್ಕೂ ಮೊದಲು ನಂದಿತಾ ಅವರ ತಂದೆ ಜಿ ಸಾಯಣ್ಣ ಈ ಕ್ಷೇತ್ರದ ಶಾಸಕರಾಗಿದ್ದರು.

ನಂದಿತಾ ನಿಧನಕ್ಕೆ ಬಿಆರ್‌ಎಸ್‌ ನಾಯಕ ಹಾಗೂ ತೆಲಂಗಾಣದ ಮಾಜಿ ಸಚಿವ ಕೆ.ಟಿ ರಾಮರಾವ್ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ : ಪ್ರತಿಭಟನಾ ನಿರತ ರೈತರ ವಿರುದ್ಧ ‘ರಾಷ್ಟ್ರೀಯ ಭದ್ರತಾ ಕಾಯ್ದೆ’ ಜಾರಿಗೊಳಿಸಿದ ಹರಿಯಾಣದ ಬಿಜೆಪಿ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ.ಬಂಗಾಳ; ರಾಜ್ಯಪಾಲರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣ; ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

0
ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ರಾಜಭವನದ ಸಿಬ್ಬಂದಿಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು...