Homeಮುಖಪುಟಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

ಕೇಸರಿ ಧ್ವಜಕ್ಕೆ ಅವಮಾನಿಸಿದ ಆರೋಪ: ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಗುಂಪು

- Advertisement -
- Advertisement -

ಕೇಸರಿ ಧ್ವಜವನ್ನು ಅವಮಾನಿಸಿದ ಆರೋಪದಲ್ಲಿ ಮುಸ್ಲಿಂ ಯುವಕನಿಗೆ ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿ ಆತನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸಿದ ಅಮಾನವೀಯ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಮುಸ್ಲಿಂ ಯುವಕ ಕೇಸರಿ ಧ್ವಜವನ್ನು ಅವನ ಪ್ಯಾಂಟ್‌ನೊಳಗೆ ತುರುಕಿಸಿಕೊಳ್ಳುವ ವಿಡಿಯೋ ರೀಲ್ಸ್‌ ವೈರಲ್‌ ಆಗಿತ್ತು. ರೀಲ್ಸ್‌ನಿಂದ ಕೋಪಗೊಂಡ ಜನರು ಮೇದಕ್ ಜಿಲ್ಲೆಯ ಹಳ್ಳಿಯೊಂದರಲ್ಲಿ ಯುವಕನನ್ನು ಥಳಿಸಿದ್ದಾರೆ.

ವೈರಲ್‌ ಆಗಿರುವ ಕೆಲವು ವೀಡಿಯೋಗಳಲ್ಲಿ ದುಷ್ಕರ್ಮಿಗಳ ಗುಂಪು ಜೈ ಶ್ರೀ ರಾಮ್ ಘೋಷಣೆಗಳನ್ನು ಕೂಗುತ್ತಾ ಮುಸ್ಲಿಂ ಯುವಕನನ್ನು ಥಳಿಸುತ್ತಿರುವುದು ಮತ್ತು ಆತನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿ ಅವನ ಖಾಸಗಿ ಅಂಗಗಳಿಗೆ ಬೆಂಕಿ ಹಚ್ಚಲು ಪ್ರಯತ್ನಿಸುತ್ತಿರುವುದನ್ನು ಕಂಡು ಬಂದಿದೆ.

ಇದಲ್ಲದೆ ಥಳಿತಕ್ಕೊಳಗಾಗಿರುವ ಸಂತ್ರಸ್ತ ಯುವಕನ ವಿರುದ್ಧ ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ. ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 153(ಎ), 295-ಎ, 505(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಹಲ್ಲೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ಸಂತ್ರಸ್ತ ಮುಸ್ಲಿಂ ಯುವಕ ಪೊಲೀಸರಿಗೆ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 323, 505(2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಕುರಿತು ತನಿಖೆಯನ್ನು ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ದಲಿತ ವಿದ್ಯಾರ್ಥಿಗೆ ‘ಜೈ ಶ್ರೀರಾಮ್‌’ ಹೇಳುವಂತೆ ಒತ್ತಾಯಿಸಿ ಹಲ್ಲೆ

ಬೀದರ್‌ನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗೆ ಜೈಶ್ರೀರಾಮ್ ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ ಆರೋಪದ ಮೇಲೆ ನಾಲ್ವರನ್ನು ಬೀದರ್‌ನ ಹುಮನಾಬಾದ್ ಪೊಲೀಸರು ಮಂಗಳವಾರ ಬಂಧಿಸಿದ್ದರು.

ಹುಮನಾಬಾದ್‌ ತಾಲೂಕಿನ ಹಣಸಗೇರಾ ಗ್ರಾಮದ ದ್ವಿತೀಯ ಪಿಯು ಓದುತ್ತಿರುವ ವಿದ್ಯಾರ್ಥಿ ದರ್ಶನ್ ಲಕ್ಷ್ಮಣ ಕಟ್ಟಿಮನಿ ನೀಡಿದ ದೂರು ಆಧರಿಸಿ ಅಭಿಷೇಕ್, ರಿತೇಶ್ ರೆಡ್ಡಿ, ಸುನಿಲ್ ರೆಡ್ಡಿ ಮತ್ತು ಅಭಿಷೇಕ್ ತೆಲಂಗ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ವರದಿಗಳ ಪ್ರಕಾರ, ಹಲ್ಲೆಗೊಳಗಾದ ವಿದ್ಯಾರ್ಥಿ ದರ್ಶನ್ ಜನವರಿ 22 ಅಯೋಧ್ಯೆ ರಾಮಮಂದಿರದ ಉದ್ಘಾಟನೆಯ ದಿನ “ನೀನೇ ದೇವಾ ನೀನೇ ಎಲ್ಲಾ, ಇವನಲ್ಲಾ ಗುರು ಅವನು, ನಾವೆಲ್ಲ ಅವರ ಅಭಿಮಾನಿಗಳು” ಎಂದು ಡಾ.ಬಿ.ಆರ್.‌ಅಂಬೇಡ್ಕರ್‌, ರಾಮ ಮತ್ತು ಹನುಮಂತನ ಪೊಟೋ ಇರುವ ವಿಡಿಯೋ ಸ್ಟೇಟಸ್ ಇಟ್ಟುಕೊಂಡಿದ್ದ. ಇದನ್ನು ಗಮನಿಸಿದ ನಾಲ್ವರು ದರ್ಶನ್‌ನನ್ನು ಆಟೋದಲ್ಲಿ ಹನುಮಾನ್ ದೇವಸ್ಥಾನಕ್ಕೆ ಕರೆದೊಯ್ದು‌, ಜೈ ಶ್ರೀರಾಮ್ ಎಂದು ಹೇಳಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಇದನ್ನು ಓದಿ: ಮತೀಯ ಗೂಂಡಾಗಿರಿ ತಾಣವಾಗುತ್ತಿದೆಯಾ ಉಡುಪಿ, ದಕ್ಷಿಣಕನ್ನಡ ಜಿಲ್ಲೆ?

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...