Homeಮುಖಪುಟಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿ: ಮಸೂದೆ ಅಂಗೀಕರಿಸಿದ ತೆಲಂಗಾಣ ವಿಧಾನಸಭೆ

- Advertisement -
- Advertisement -

ಸ್ಥಳೀಯ ಸಂಸ್ಥೆಗಳಲ್ಲಿ ಜಾತಿ ಆಧಾರಿತ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದುಹಾಕಲು ತೆಲಂಗಾಣ ಸರ್ಕಾರ ಭಾನುವಾರ (ಆ.31) ಎರಡು ಮಸೂದೆಗಳನ್ನು ಅಂಗೀಕರಿಸಿದೆ. ಈ ಕ್ರಮವು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಶೇ.42ರಷ್ಟು ಮೀಸಲಾತಿಗೆ ದಾರಿ ಮಾಡಿಕೊಟ್ಟಿದೆ ಎಂದು ವರದಿಗಳು ಹೇಳಿವೆ.

ವಿರೋಧ ಪಕ್ಷಗಳಾದ ಬಿಆರ್‌ಎಸ್‌ ಮತ್ತು ಬಿಜೆಪಿಯ ಗದ್ದಲದ ನಡುವೆಯೇ, ‘ತೆಲಂಗಾಣ ಪುರಸಭೆಗಳ ಮೂರನೇ ತಿದ್ದುಪಡಿ ಮಸೂದೆ, 2025’ ಮತ್ತು ‘ತೆಲಂಗಾಣ ಪಂಚಾಯತ್ ರಾಜ್ ಮೂರನೇ ತಿದ್ದುಪಡಿ ಮಸೂದೆ, 2025’ ಅನ್ನು ವಿಧಾನಸಭೆ ಅಂಗೀಕರಿಸಿದೆ.

ಇದು 1992ರಲ್ಲಿ ಸುಪ್ರೀಂ ಕೋರ್ಟ್ ನಿಗದಿಪಡಿಸಿದ ಮೀಸಲಾತಿ ಮೇಲಿನ ಶೇಕಡ 50 ಮಿತಿಯನ್ನು ತೆಗೆದು ಹಾಕಲಿದೆ. ತೆಲಂಗಾಣದಲ್ಲಿ ಪರಿಶಿಷ್ಟ ಜಾತಿಗಳು (ಎಸ್‌ಸಿ) ಪರಿಶಿಷ್ಟ ಪಂಗಡಗಳು (ಎಸ್‌ಟಿ) ಮತ್ತು ಹಿಂದುಳಿದ ವರ್ಗಗಳ (ಬಿಸಿ) ಒಟ್ಟು ಮೀಸಲಾತಿಯನ್ನು ಶೇ. 67ಕ್ಕೆ ಏರಿಸಲಿದೆ.

ಶಿಕ್ಷಣ, ಸರ್ಕಾರಿ ಉದ್ಯೋಗಗಳು ಮತ್ತು ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ಹೆಚ್ಚಿಸುವ ಕುರಿತು ಮಾರ್ಚ್‌ನಲ್ಲಿ ಅಂಗೀಕರಿಸಲಾದ ಇತರ ಎರಡು ಮಸೂದೆಗಳು ರಾಷ್ಟ್ರಪತಿಯ ಒಪ್ಪಿಗೆಗಾಗಿ ಕಾಯುತ್ತಿರುವ ಸಮಯದಲ್ಲಿ ಭಾನುವಾರದ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿದೆ.

ಸೆಪ್ಟೆಂಬರ್ 30ರ ಮೊದಲು ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕೆಂದು ತೆಲಂಗಾಣ ಹೈಕೋರ್ಟ್ ನಿರ್ದೇಶನ ನೀಡಿದೆ. ಹಾಗಾಗಿ, ಹಿಂದುಳಿದ ವರ್ಗಗಳಿಗೆ ಶೇ. 42ರಷ್ಟು ಮೀಸಲಾತಿ ಕಲ್ಪಿಸಿದ ನಂತರವೇ ಚುನಾವಣೆಗೆ ಹೋಗಲು ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ ಎಂದು ಸಿಎಂ ರೇವಂತ್ ರೆಡ್ಡಿ ಹೇಳಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯನ್ನು ‘ಕಡಿತಗೊಳಿಸಿ’ ಒಟ್ಟು ಮೀಸಲಾತಿಯನ್ನು ಶೇ. 50ರ ಮಿತಿಯೊಳಗೆ ತಂದಿದ್ದಕ್ಕಾಗಿ ಹಿಂದಿನ ಬಿಆರ್‌ಎಸ್‌ ಸರ್ಕಾರವನ್ನು ರೆಡ್ಡಿ ಟೀಕಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಮಾಡಿದೆ.

ರಾಷ್ಟ್ರಪತಿಗಳ ಮುಂದೆ ಬಾಕಿ ಇರುವ ಇತರ ಎರಡು ಹಿಂದುಳಿದ ವರ್ಗಗಳ ಮೀಸಲಾತಿ ಮಸೂದೆಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕೆಂದು ಒತ್ತಾಯಿಸಿ ಆಗಸ್ಟ್‌ನಲ್ಲಿ ನವದೆಹಲಿಯಲ್ಲಿ ರಾಜ್ಯ ಸರ್ಕಾರ ನಡೆಸಿದ ಧರಣಿ ಪ್ರತಿಭಟನೆಯನ್ನು ಬೆಂಬಲಿಸದ ವಿರೋಧ ಪಕ್ಷವನ್ನು ಅವರು ಟೀಕಿಸಿದ್ದಾರೆ.

ಮತ್ತೊಂದೆಡೆ, ಹಿಂದುಳಿದ ವರ್ಗಗಳ ಮೀಸಲಾತಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಪ್ರಾಮಾಣಿಕವಾಗಿಲ್ಲ ಎಂದು ಬಿಆರ್‌ಎಸ್‌ನ ಗಂಗುಲ ಕಮಲಾಕರ್ ಆರೋಪಿಸಿದ್ದಾರೆ ಎಂದು ದಿ ನ್ಯೂಸ್ ಮಿನಿಟ್ ವರದಿ ಹೇಳಿದೆ.

ಮಾರ್ಚ್‌ನಲ್ಲಿ ಅಂಗೀಕರಿಸಲಾದ ಎರಡು ಮಸೂದೆಗಳಿಗೆ ರಾಷ್ಟ್ರಪತಿಗಳ ಅನುಮೋದನೆ ನೀಡುವಂತೆ ಒತ್ತಾಯಿಸಲು ರಾಜ್ಯ ಸರ್ಕಾರವು ನವದೆಹಲಿಗೆ ಸರ್ವಪಕ್ಷ ನಿಯೋಗವನ್ನು ಏಕೆ ಕರೆದೊಯ್ಯಲಿಲ್ಲ ಎಂದು ಕಮಲಾಕರ್ ಕೇಳಿದ್ದಾರೆ.

ಫೆಬ್ರವರಿಯಲ್ಲಿ ತೆಲಂಗಾಣ ಸರ್ಕಾರ ಪ್ರಕಟಿಸಿದ ಜಾತಿ ಸಮೀಕ್ಷೆಯ ಪ್ರಕಾರ, ರಾಜ್ಯದ ಜನಸಂಖ್ಯೆಯಲ್ಲಿ ಹಿಂದುಳಿದ ವರ್ಗಗಳು ಶೇ. 56.3ರಷ್ಟಿದ್ದಾರೆ. ಇದರಲ್ಲಿ ಮುಸ್ಲಿಂ ಜಾತಿ ಗುಂಪುಗಳು ಸೇರಿವೆ. ಹಿಂದುಳಿದ ವರ್ಗಗಳ ಒಟ್ಟು ಜನಸಂಖ್ಯೆ ಸುಮಾರು 1.9 ಕೋಟಿ ಎಂದು ಹೇಳಲಾಗ್ತಿದೆ.

ನವೆಂಬರ್ ಮತ್ತು ಡಿಸೆಂಬರ್‌ನಲ್ಲಿ ನಡೆಸಿದ ಮನೆ-ಮನೆ ಸಮೀಕ್ಷೆಯ ಪ್ರಕಾರ, ಪರಿಶಿಷ್ಟ ಜಾತಿಗಳ ಜನಸಂಖ್ಯೆ ಶೇ. 17.4 ಅಥವಾ 61.8 ಲಕ್ಷದಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇ. 10.4 ಅಥವಾ 37 ಲಕ್ಷದಷ್ಟಿದ್ದಾರೆ. ಇತರ ಜಾತಿಗಳ ಜನಸಂಖ್ಯೆ ಶೇ. 15.7 ರಷ್ಟಿವೆ.

ಒಟ್ಟು ಜನಸಂಖ್ಯೆಯಲ್ಲಿ ಮುಸ್ಲಿಮರು ಸುಮಾರು 12.5% ​​ಅಥವಾ 44.5 ಲಕ್ಷ ಇದ್ದಾರೆ. ಇದರಲ್ಲಿ ಹಿಂದುಳಿದ ವರ್ಗಗಳ ಮುಸ್ಲಿಮರು 10% ಅಥವಾ 35.7 ಲಕ್ಷ ಜನರಿದ್ದರೆ, ಇತರ ವರ್ಗಗಳ ಮುಸ್ಲಿಮರು 2.4% ಅಥವಾ 8.8 ಲಕ್ಷ ಜನರಿದ್ದಾರೆ.

ಫೆಬ್ರವರಿ 2024ರಲ್ಲಿ, ಜಾತಿ ಸಮೀಕ್ಷೆಯ ಕುರಿತು ವಿಧಾನಸಭೆಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿತ್ತು.  ನಂತರ ರಾಜ್ಯ ಯೋಜನಾ ಇಲಾಖೆಯು ಅದನ್ನು ಕೈಗೆತ್ತಿಕೊಂಡಿತ್ತು.

2023ರ ವಿಧಾನಸಭಾ ಚುನಾವಣೆಗೆ ಮುನ್ನ ತೆಲಂಗಾಣದಲ್ಲಿ ಕಾಂಗ್ರೆಸ್ ನೀಡಿದ ಭರವಸೆಗಳಲ್ಲಿ ಜಾತಿ ಸಮೀಕ್ಷೆಯೂ ಒಂದಾಗಿತ್ತು. ಬಿಆರ್‌ಎಸ್‌ ಸೋಲಿಸುವ ಮೂಲಕ ಪಕ್ಷ ರಾಜ್ಯದಲ್ಲಿ ಅಧಿಕಾರ ಹಿಡಿದಿದೆ.

ಜಾತಿ ಸಮೀಕ್ಷೆಯ ವರದಿ ಬಿಡುಗಡೆಯೊಂದಿಗೆ, ಬಿಹಾರ ಮತ್ತು ಆಂಧ್ರ ಪ್ರದೇಶದ ನಂತರ ತೆಲಂಗಾಣ ಇಂತಹ ಸಮೀಕ್ಷೆಯನ್ನು ನಡೆಸಿದ ಮೂರನೇ ರಾಜ್ಯ ಎನಿಸಿಕೊಂಡಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...