Homeಮುಖಪುಟತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್...

ತೆಲಂಗಾಣ | ಸಮಂತಾ-ನಾಗಚೈತನ್ಯ ವಿಚ್ಛೇದನ ವಿಷಯದಲ್ಲಿ ರಾಜಕೀಯ ಕಾಳಗ : ಸಚಿವೆ ಸುರೇಖಾಗೆ ಕೆಟಿಆರ್ ಲೀಗಲ್ ನೋಟಿಸ್

- Advertisement -
- Advertisement -

ಮಾಜಿ ಸಚಿವ ಹಾಗೂ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಪಕ್ಷದ ನಾಯಕ ಕೆ.ಟಿ ರಾಮರಾವ್ (ಕೆಟಿಆರ್) ವಿರುದ್ದ ಕಾಂಗ್ರೆಸ್ ಸರ್ಕಾರದ ಸಚಿವೆ ಕೊಂಡಾ ಸುರೇಖಾ ಅವರು ನೀಡಿರುವ ಹೇಳಿಕೆಯೊಂದು ತೆಲಂಗಾಣದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ನಟರಾದ ನಾಗಚೈತನ್ಯ ಮತ್ತು ಸಮಂತಾ ರುತ್ ಪ್ರಭು ಅವರ ಮದುವೆ ಮುರಿದು ಬೀಳಲು ಸಚಿವ ಕೆಟಿಆರ್ ಕಾರಣ ಎಂದು ಸಚಿವೆ ಸುರೇಖಾ ಹೇಳಿದ್ದು, ಕೆಟಿಆರ್ ವಿರುದ್ದ ಕೆಲ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ವರದಿಗಳ ಪ್ರಕಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಸುರೇಖಾ,”ಕೆಟಿಆರ್ ಡ್ರಗ್ ವ್ಯಸನಿ. ಚಿತ್ರರಂಗದ ಪ್ರಮುಖರಿಗೆ ಆತ ರೇವ್ ಪಾರ್ಟಿ ಆಯೋಜಿಸುತ್ತಿದ್ದರು. ಅವರ ದೌರ್ಜನ್ಯ ಸಹಿಸದೇ ಅನೇಕ ನಟಿಯರು ನಟನೆಯನ್ನೇ ಬಿಟ್ಟಿದ್ದಾರೆ. ಕೆಲವರು ಮದುವೆಯಾಗಿ ಚಿತ್ರರಂಗದಿಂದ ದೂರ ಉಳಿದಿದ್ದಾರೆ” ಎಂದು ಹೇಳಿದ್ದಾರೆ.

ಮುಂದುವರಿದು.. “ನಾಗಾರ್ಜುನ ಒಡೆತನದ ಎನ್‌ ಕನ್ವೆನ್ಷನ್ ಸೆಂಟರ್ ನೆಲಸಮಗೊಳಿಸುವುದು ಬೇಡ ಎಂದಾದಲ್ಲಿ, ತನ್ನ ಬಳಿ ಸಮಂತಾ ಅವರನ್ನು ಕಳುಹಿಸುವಂತೆ ರಾಮರಾವ್ ಬೇಡಿಕೆ ಇಟ್ಟಿದ್ದರು. ರಾಮರಾವ್ ಬಳಿ ಹೋಗುವಂತೆ ಸಮಂತಾ ಅವರಿಗೆ ನಾಗಾರ್ಜುನ ಬಲವಂತ ಮಾಡಿದಾಗ, ಅದನ್ನು ಒಪ್ಪಿಕೊಂಡಿರಲಿಲ್ಲ. ಈ ವಿಚಾರ ವಿಚ್ಛೇದನಕ್ಕೆ ಕಾರಣವಾಯಿತು” ಎಂದಿದ್ದಾರೆ.

ಸಚಿವೆಯ ಈ ಹೇಳಿಕೆ ತೆಲಂಗಾಣದ ರಾಜಕೀಯ ಮತ್ತು ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ನಟ ನಾಗಾರ್ಜುನ “ಸಚಿವೆ ಕೊಂಡಾ ಸುರೇಖಾ ಅವರ ಹೇಳಿಕೆಯನ್ನು ಬಲವಾಗಿ ಖಂಡಿಸುತ್ತೇನೆ. ರಾಜಕೀಯದಿಂದ ದೂರು ಇರುವ ಚಿತ್ರ ತಾರೆಯರನ್ನು ನಿಮ್ಮ ವಿರೋಧಿಗಳನ್ನು ಟೀಕಿಸುವುದಕ್ಕಾಗಿ ಬಳಸಿಕೊಳ್ಳಬೇಡಿ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬೇರೆಯವರ ಖಾಸಗಿತನವನ್ನು ಗೌರವಿಸಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಒಬ್ಬ ಮಹಿಳೆಯಾಗಿ ನಮ್ಮ ಕುಟುಂಬದ ವಿರುದ್ದದ ನಿಮ್ಮ ಹೇಳಿಕೆಗಳು ಹಾಗೂ ಆರೋಪಗಳು ಅಸಂಬದ್ಧ ಹಾಗೂ ಸುಳ್ಳು, ಕೂಡಲೇ ಈ ಹೇಳಿಕೆಗಳನ್ನು ಹಿಂಪಡೆಯುವಂತೆ ನಿಮ್ಮಲ್ಲಿ ಮನವಿ ಮಾಡುವೆ” ಎಂದೂ ಹೇಳಿದ್ದಾರೆ.

ನಟಿ ಸಮಂತಾ ಕೂಡ ಸಚಿವೆಯ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದು, ತನ್ನ ಹೆಸರನ್ನು ರಾಜಕೀಯದಿಂದ ದೂರ ಇಡುವಂತೆ ಕೋರಿದ್ದಾರೆ. ಅಲ್ಲದೆ, ಮಹಿಳೆ ಹೊರಗೆ ಬಂದು ಕೆಲಸ ಮಾಡಲು ಸಾಕಷ್ಟಯ ಧೈರ್ಯ ಮತ್ತು ಶಕ್ತಿ ಬೇಕಾಗುತ್ತದೆ ಎಂದು ವಿವರಿಸಿದ್ದಾರೆ.

ಲೀಗಲ್ ನೋಟಿಸ್ ಕಳುಹಿಸಿದ ಕೆಟಿಆರ್

ಸಚಿವೆಯ ಹೇಳಿಕೆ ಆಧಾರರಹಿತ ಮತ್ತು ರಾಜಕೀಯ ಪ್ರೇರಿತ ಎಂದಿರುವ ಕೆಟಿಆರ್, “ಇಂತಹ ಹೇಳಿಕೆ ನೀಡುವ ಮೂಲಕ ನನ್ನ ವ್ಯಕ್ತಿತ್ವಕ್ಕೆ ಕಳಂಕ ತರುವ ಪ್ರಯತ್ನ ಮಾಡಿದ್ದಾರೆ” ಎಂದು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಸಚಿವೆ ಸುರೇಖಾ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು. 24 ಗಂಟೆಯೊಳಗೆ ಹೇಳಿಕೆ ಹಿಂಪಡೆಯದೆ ಇದ್ದರೆ ಅವರ ವಿರುದ್ದ ಮಾನನಷ್ಟ ಮೊಕದ್ದಮೆ ಹೂಡಬೇಕಾಗುತ್ತದೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ : ಆರ್. ಅಶೋಕ್ ವಿರುದ್ಧ ಅಕ್ರಮ ಡಿನೋಟಿಫೈ ಆರೋಪ : ದಾಖಲೆ ಬಿಡುಗಡೆ ಮಾಡಿದ ಕಾಂಗ್ರೆಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...