Homeಮುಖಪುಟಹೈದರಾಬಾದ್: ಮದರ್ ತೆರೇಸಾ ಶಾಲೆ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ದಾಳಿ: ಜೈಶ್ರೀರಾಮ್‌ ಘೋಷಣೆ ಕೂಗಿ ಕಲ್ಲು...

ಹೈದರಾಬಾದ್: ಮದರ್ ತೆರೇಸಾ ಶಾಲೆ ಮೇಲೆ ಕೇಸರಿ ವಸ್ತ್ರಧಾರಿಗಳಿಂದ ದಾಳಿ: ಜೈಶ್ರೀರಾಮ್‌ ಘೋಷಣೆ ಕೂಗಿ ಕಲ್ಲು ತೂರಾಟ

- Advertisement -
- Advertisement -

ಕೇಸರಿ ಬಣ್ಣದ ಅಂಗಿ ಮತ್ತು ಶಾಲುಗಳನ್ನು ಧರಿಸಿದ್ಧ ಗುಂಪೊಂದು ಹೈದರಾಬಾದ್‌ ಮಂಚೇರಿಯಲ್ ಜಿಲ್ಲೆಯ ಕನ್ನೆಪಲ್ಲಿಯಲ್ಲಿರುವ ಸೇಂಟ್ ಮದರ್ ತೆರೇಸಾ ಆಂಗ್ಲ ಮಾಧ್ಯಮ ಶಾಲೆಯ ಆವರಣಕ್ಕೆ ನುಗ್ಗಿ ಶಾಲೆಯಲ್ಲಿ ದಾಂಧಲೆ ನಡೆಸಿ ಪಾದ್ರಿಯ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಜೈಶ್ರೀರಾಮ್‌ ಕೂಗಿದ ಗುಂಪು ಶಾಲೆಯ ಮುಖ್ಯ ಗೇಟ್‌ನಲ್ಲಿ ಸ್ಥಾಪಿಸಲಾಗಿದ್ದ ಸಂತ ಮದರ್ ತೆರೆಸಾ ಅವರ ಪ್ರತಿಮೆಗೆ ಕಲ್ಲು ಎಸೆದಿದ್ದಾರೆ ಮತ್ತು ಭದ್ರತಾ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ ಮತ್ತು ಶಾಲೆಯ ಮೊದಲ ಮತ್ತು ಎರಡನೇ ಮಹಡಿಗೆ ಪ್ರವೇಶಿಸಿ ಕಿಟಕಿ ಗಾಜುಗಳು ಮತ್ತು ಕಚೇರಿ ಕೊಠಡಿಯನ್ನು ಧ್ವಂಸಗೊಳಿಸಿದ್ದಾರೆ.

ಏಪ್ರಿಲ್ 15ರಂದು ಸಮವಸ್ತ್ರದ ಬದಲಿಗೆ ಕೇಸರಿ ಉಡುಗೆ ಧರಿಸಿ ತರಗತಿಗೆ ಹಾಜರಾಗುತ್ತಿರುವುದನ್ನು ಗಮನಿಸಿದ ಶಾಲಾ ಆಡಳಿತ ವಿದ್ಯಾರ್ಥಿಗಳಿಗೆ ಕೇಸರಿ ಬಟ್ಟೆ ಧರಿಸಲು ಅವಕಾಶ ನಿರಾಕರಿಸಿದ್ದಾರೆ. ಈ ಬಗ್ಗೆ ವಿದ್ಯಾರ್ಥಿಗಳು ಹೊರಗಿನವರಿಗೆ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲಿ 1000 ಜನರು ಶಾಲೆಯ ಆವರಣಕ್ಕೆ ಪ್ರವೇಶಿಸಿದ್ದು, ಕಲ್ಲು ತೂರಾಟ ನಡೆಸಿ ಜೈಶ್ರೀರಾಮ್ ಘೋಷಣೆ ಕೂಗಿದ್ದಾರೆ.

ಇನ್ನು ‘ಹನುಮಾನ್ ದೀಕ್ಷಾ ಉಡುಗೆ’ ಧರಿಸಿ ಕಾಲೇಜಿಗೆ ಬರುತ್ತಿರುವುದನ್ನು ಆಕ್ಷೇಪಿಸಿದ ಆರೋಪದ ಮೇಲೆ ಪ್ರಾಂಶುಪಾಲರ ವಿರುದ್ಧ ಮಂಚೇರಿಯಲ್ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವಿದ್ಯಾರ್ಥಿಗಳ ಪೋಷಕರ ದೂರಿನ ಆಧಾರದ ಮೇಲೆ ದಂಡೇಪಲ್ಲಿ ಪೊಲೀಸರು, ಸೆಕ್ಷನ್ 153 (ಎ) ಮತ್ತು 295 (ಎ) (ಧಾರ್ಮಿಕ ಭಾವನೆಗಳನ್ನು ಅವಮಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ವಿದ್ಯಾರ್ಥಿಗಳು ಸಮವಸ್ತ್ರದ ಬದಲು ಕೇಸರಿ ಬಟ್ಟೆ ಧರಿಸಿರುವುದನ್ನು ಗಮನಿಸಿದ ಪ್ರಾಂಶುಪಾಲರು ತಮ್ಮ ಪೋಷಕರನ್ನು ಕರೆದುಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದ್ದೆವು. ನಂತರ, ಜನರ ಗುಂಪು ಶಾಲೆಯ ಆಡಳಿತದಿಂದ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ ಮತ್ತು ಕೆಲವು ಆಕ್ರೋಶಿತರು  ಶಾಲೆಯ ಕಿಟಕಿಗಳನ್ನು ಧ್ವಂಸಗೊಳಿಸಿದ್ದಾರೆ ಮದರ್ ತೆರೇಸಾ ಹೈಸ್ಕೂಲ್ ಆಡಳಿತ ಮಂಡಳಿ ತಿಳಿಸಿದೆ.

ಇದನ್ನು ಓದಿ: ದ್ವೇಷ ಬಿತ್ತುವ, ವಿಭಜನೀಯ ಶಕ್ತಿಗಳನ್ನು ಸೋಲಿಸಲು ಒಗ್ಗಟ್ಟಾಗಬೇಕು: ಅಡ್ಮಿರಲ್ ರಾಮದಾಸ್ ಅವರ ಕೊನೆಯ ಸಂದೇಶ ಓದಿದ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...